22.1 C
Sidlaghatta
Saturday, August 20, 2022

ಗ್ರಂಥಾಲಯಕ್ಕೆ ಪುಸ್ತಕಗಳ ಅಗತ್ಯ ಪೂರೈಕೆ

- Advertisement -
- Advertisement -

ವಾಣಿಜ್ಯ ವಿಭಾಗದ ಸ್ನಾತಕೋತ್ತರ ಪದವಿ ಸಧ್ಯದಲ್ಲೇ ಪ್ರಾರಂಭವಾಗುತ್ತಿದ್ದು ಅದಕ್ಕೆ ಅಗತ್ಯವಿರುವ ಪುಸ್ತಕಗಳನ್ನು ಕೊಡಿಸುವುದಾಗಿ ನಗರಸಭಾ ಅಧ್ಯಕ್ಷ ಅಫ್ಸರ್‌ ಪಾಷ ತಿಳಿಸಿದರು.
ನಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಕಾಲೇಜು ಆಡಳಿತ ಮಂಡಳಿ ಹಾಗೂ ಹಿರಿಯ ವಿದ್ಯಾರ್ಥಿಗಳಿಂದ ಅಭಿನಂದನೆಯನ್ನು ಸ್ವೀಕರಿಸಿ ಅವರು ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲರು ಕಾಲೇಜಿಗೆ ಸಂಬಂಧಿಸಿದಂತೆ ಹಲವು ಅಗತ್ಯತೆಗಳನ್ನು ತಿಳಿಸಿದ್ದಾರೆ. ನಗರಸಭೆಯಿಂದ ಸಾಧ್ಯವಾದಷ್ಟೂ ಕೆಲಸಗಳನ್ನು ಮಾಡಿಕೊಡುವುದಾಗಿ ಭರವಸೆ ನೀಡಿದರು. ಸ್ವಚ್ಛತೆಗೆ ಮೊದಲ ಆದ್ಯತೆಯನ್ನು ನೀಡಿದ್ದು, ನಗರವನ್ನು ಸ್ವಚ್ಛ ಸುಂದರ ನಗರವನ್ನಾಗಿಸುವ ಪ್ರಯತ್ನ ಮಾಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಕಾಲೇಜಿಗೆ ಕಾಂಪೌಂಡ್‌ ವ್ಯವಸ್ಥೆ, ಸ್ವಚ್ಛತೆ, ಕಾರ್ಯಾಗಾರಗಳನ್ನು ನಡೆಸಲು ಸಹಕಾರ ಕೋರಿ ಕಾಲೇಜು ಸಿಬ್ಬಂದಿ ಮನವಿಯನ್ನು ನೀಡಿದರು.
ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಚಂದ್ರಾನಾಯಕ್‌, ಉಪನ್ಯಾಸಕರಾದ ರಾಮಚಂದ್ರಪ್ಪ, ಉಮೇಶ್‌ರೆಡ್ಡಿ, ಜೆ.ಕೆ.ರಮೇಶ್‌, ಛಾಯಣ್ಣ, ಡಾ.ವೆಂಕಟೇಶ್‌, ರೋಷನ್‌, ಮುಖಂಡರಾದ ಗೊರಮಡುಗು ರಾಮಾಂಜಿನಪ್ಪ, ಅಕ್ರಂಪಾಷ, ನಾಸಿರ್‌, ಮಂಜುನಾಥ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here