Home News ಜಿಲ್ಲಾಧೀಕಾರಿಗಳಿಗೆ ಕ್ರೀಡಾಂಗಣ ಅಭಿವೃದ್ಧಿ ಸಮಿತಿ ಸದಸ್ಯರ ಮನವಿ

ಜಿಲ್ಲಾಧೀಕಾರಿಗಳಿಗೆ ಕ್ರೀಡಾಂಗಣ ಅಭಿವೃದ್ಧಿ ಸಮಿತಿ ಸದಸ್ಯರ ಮನವಿ

0

ನಗರದ ನೆಹರೂ ಕ್ರೀಡಾಂಗಣದಲ್ಲಿ ನಡೆದಿರುವ ಅವ್ಯವಹಾರಗಳ ಬಗ್ಗೆ ಖುದ್ದು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕೆಂದು ನೆಹರೂ ಕ್ರೀಡಾಂಗಣ ಅಭಿವೃದ್ಧಿ ಸಮಿತಿ ಸದಸ್ಯರು ಜಿಲ್ಲಾಧಿಕಾರಿ ಅವರಿಗೆ ಮನವಿಯನ್ನು ಸೋಮವಾರ ಸಲ್ಲಿಸಿದರು.
ಮುಖ್ಯಮಂತ್ರಿಗಳ ಅನುದಾನದಲ್ಲಿ ನೆಹರೂ ಕ್ರೀಡಾಂಗಣದ ಅಭಿವೃದ್ಧಿಗೆ 60 ಲಕ್ಷ ರೂಗಳು ಮಂಜೂರಾಗಿತ್ತು. ಅದರಲ್ಲಿ 20 ಲಕ್ಷ ರೂಗಳ ಕಳಪೆ ಕಾಮಗಾರಿ ನಡೆದಿದೆ. ಇದರ ಬಗ್ಗೆ ನೆಹರೂ ಕ್ರೀಡಾಂಗಣ ಅಭಿವೃದ್ಧಿ ಸಮಿತಿಯವರು ಮಾಹಿತಿ ಪಡೆದು ಪ್ರತಿಭಟನೆಯನ್ನೂ ಸಹ ನಡೆಸಿದ್ದೇವೆ. ಗುತ್ತಿಗೆದಾರರಾದ ನಿರ್ಮಿತಿ ಕೇಂದ್ರದವರು ಕ್ರೀಡಾಂಗಣದಲ್ಲಿ ಬಾಕಿ ಇರುವ ಹಾಗೂ ಕಳಪೆ ಕಾಮಗಾರಿಯನ್ನು ಸರಿಪಡಿಸುವುದಾಗಿ ಒಂದು ತಿಂಗಳ ಕಾಲಾವಕಾಶ ಕೋರಿದ್ದರು. ಆದರೆ ಅದರಂತೆ ನಡೆದುಕೊಂಡಿಲ್ಲ. ಈ ಬಗ್ಗೆ ತಾವು ಖುದ್ದು ಆಗಮಿಸಿ ಪರಿಶೀಲಿಸಬೇಕೆಂದು ಕೋರಿದರು.
ಕ್ರೀಡಾಂಗಣದಲ್ಲಿ ಮೂಲಭೂತ ಸೌಕರ್ಯಗಳಿಲ್ಲ. ರಾತ್ರಿ ಕಾವಲುಗಾರರೂ ಇಲ್ಲ. ಸ್ಥಳ ಪರಿಶೀಲಿಸಿ ಕ್ರೀಡಾಪಟುಗಳಿಗೆ ಅನುಕೂಲ ಮಾಡಿಕೊಡಬೇಕೆಂದು ಕೋರಿದರು.
ಮನವಿಯನ್ನು ಸ್ವೀಕರಿಸಿದ ಜಿಲ್ಲಾಧಿಕಾರಿ ಅದಿತ್ಯ ದೀಪ್ತಿ ಕಾನಡೆ ಅವರು ಕ್ರೀಡಾಂಗಣವನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ನೆಹರೂ ಕ್ರೀಡಾಂಗಣ ಅಭಿವೃದ್ಧಿ ಸಮಿತಿ ಸದಸ್ಯರಾದ ಟಿ.ಟಿ.ನರಸಿಂಹಪ್ಪ, ನಿರಂಜನ್‌, ಸುರೇಶ್‌, ಅಂತಾರಾಷ್ಟ್ರೀಯ ಕ್ರೀಡಾಪಟು ಮಂಚನಬಲೆ ಶ್ರೀನಿವಾಸ್‌, ರಾಷ್ಟ್ರೀಯ ಅಥ್ಲೆಟಿಕ್‌ ಕ್ರೀಡಾಪಟು ಜಯಂತಿಗ್ರಾಮ ನಾರಾಯಣಸ್ವಾಮಿ, ರಾಜಶೇಖರ್‌ ಈ ಸಂದರ್ಭದಲ್ಲಿ ಹಾಜರಿದ್ದರು.

error: Content is protected !!