Home News ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಮುತ್ತೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕ ಎ.ಶ್ರೀನಿವಾಸ್

ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಮುತ್ತೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕ ಎ.ಶ್ರೀನಿವಾಸ್

0

ತಾಲ್ಲೂಕಿನ ಮುತ್ತೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕ ಎ.ಶ್ರೀನಿವಾಸ್‌ ಅವರಿಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ.
ವಿಜ್ಞಾನ ಶಿಕ್ಷಕರಾದ ಎ.ಶ್ರೀನಿವಾಸ್‌ ಸಮುದಾಯವನ್ನು ತಮ್ಮ ಶಾಲೆಯತ್ತ ಆಕರ್ಷಿಸಿ ಮಕ್ಕಳ ಪ್ರಗತಿಗೆ ಪೂರಕವಾಗಿ ಕಲಿಕೆಗಾಗಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಸೌರವಿದ್ಯುತ್ ದೀಪಗಳನ್ನು ಸೆಲ್ಕೋ ಸೋಲಾರ್ ಸಂಸ್ಥೆಯಿಂದ ದೊರೆಕಿಸಿಕೊಟ್ಟಿದ್ದಾರೆ. ಶಾಲೆಗೆ ಮಳೆನೀರು ಕೊಯ್ಲು ವ್ಯವಸ್ಥೆಯನ್ನು ದಾನಿಗಳಿಂದ ಮಾಡಿಸಿ, ಶಾಲೆಯ ಶಿಕ್ಷಕರನ್ನು ಒಗ್ಗೂಡಿಸಿಕೊಂಡು ಸಂಜೀವಿನಿವನ, ಗೋಬರ್ ಗ್ಯಾಸ್ ಅಸ್ತ್ರಒಲೆ ಮಾಡಿಸಿದ್ದಾರೆ. ಮ್ಯಾಗ್ಸೆಸ್ ಪ್ರಶಸ್ತಿಗೆ ವಿಜೇತರಾದ ಡಾ. ಹರೀಶ್ ಹಂದೆರವರಿಂದ ಅನುದಾನ ಪಡೆದು ೫ ವರ್ಷದ ವಿಜ್ಞಾನದ ಪ್ರಾಯೋಗಿಕ ಚಟುವಟಿಕೆಗಳು ಎನ್ನುವ ವಿನೂತನವಾದ ಕಾರ್ಯಕ್ರಮವನ್ನು ನಮ್ಮ ಶಾಲೆಯಲ್ಲಿ ಹಮ್ಮಿಕೊಂಡಿರುತ್ತಾರೆ
‘ಶಾಲೆಯಲ್ಲಿ ವಿಜ್ಞಾನ ಶಿಕ್ಷಕನಾಗಿ ಕೇವಲ ಬೋಧನೆಗೆ ಮಾತ್ರ ಸೀಮಿತನಾಗಬಾರದೆಂದು ಹಲವು ಚಟುವಟಿಕೆಗಳನ್ನು ಹಮ್ಮಿಕೊಂಡೆ. ನನ್ನ ಚಟುವಟಿಕೆಗೆ ‘ನಮ್ಮ ಮುತ್ತೂರು’ ಸಂಸ್ಥೆಯ ಉಷಾಶೆಟ್ಟಿ, ಗ್ರಾಮಸ್ಥರು ಮತ್ತು ಸಹಶಿಕ್ಷಕರು ಸಹಕಾರ ನೀಡಿದ್ದಾರೆ’ ಎನ್ನುತ್ತಾರೆ ಶಿಕ್ಷಕ ಎ.ಶ್ರೀನಿವಾಸ್‌.