23.1 C
Sidlaghatta
Saturday, October 1, 2022

ಜೆಡಿಎಸ್‌ ಅಭಿವೃದ್ಧಿ ಕಾರ್ಯಗಳ ಬಗ್ಗೆ ಜನರಿಗೆ ತಿಳಿಸಿ

- Advertisement -
- Advertisement -

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಅಧಿಕಾರಾವಧಿಯಲ್ಲಿ ರಾಜ್ಯದ ಜನತೆಗಾಗಿ ರೂಪಿಸಿದ ಅನೇಕ ಯೋಜನೆಗಳು ಸೇರಿದಂತೆ ಅವರ ಜನಪರ ಕಾಳಜಿಯನ್ನು ಸಾಮಾನ್ಯ ಜನರಿಗೆ ತಲುಪಿಸುವ ಕೆಲಸವನ್ನು ಪ್ರತಿಯೊಬ್ಬ ಜೆಡಿಎಸ್ ಕಾರ್ಯಕರ್ತರು ಮಾಡಬೇಕು ಎಂದು ಶಾಸಕ ಎಂ.ರಾಜಣ್ಣ ಹೇಳಿದರು.
ತಾಲ್ಲೂಕಿನ ವರದನಾಯಕನಹಳ್ಳಿ ಗ್ರಾಮದ ಪಟಾಲಮ್ಮ ದೇವಾಲಯದ ಆವರಣದಲ್ಲಿ ಎಪಿಎಂಸಿ ಚುನಾವಣೆಯ ಪೂರ್ವಭಾವಿಯಾಗಿ ಭಾನುವಾರ ಏರ್ಪಡಿಸಲಾಗಿದ್ದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
ಕುಮಾರಸ್ವಾಮಿಯವರು ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ಸೇರಿದಂತೆ ರಾಜ್ಯದಲ್ಲಿ ಪ್ರಾದೇಶಿಕ ಪಕ್ಷದ ಮಹತ್ವವನ್ನು ರೈತರಿಗೆ ಮನವರಿಕೆ ಮಾಡಿಕೊಡುವ ಮೂಲಕ ಮುಂಬರುವ ಎಪಿಎಂಸಿ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಜೆಡಿಎಸ್ ಕಾರ್ಯಕರ್ತರು ಶ್ರಮಿಸಬೇಕು ಎಂದರು.
ಬಯಲುಸೀಮೆಯ ಭಾಗದ ಜನರ ಸಮಸ್ಯೆ ಹಾಗು ಈ ಭಾಗದ ನೀರಿನ ಸಮಸ್ಯೆ ಬಗೆಹರಿಯಬೇಕಾದರೆ ರಾಜ್ಯದಲ್ಲಿ ಮತ್ತೆ ಜೆಡಿಎಸ್ ಅಧಿಕಾರ ಹಿಡಿಯಬೇಕು ಹಾಗಾಗಿ ಮುಂಬರುವ ಎಪಿಎಂಸಿ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಜಯಶೀಲರನ್ನಾಗಿಸಬೇಕು ಎಂದರು.
ಜಿಲ್ಲಾ ಪಂಚಾಯತಿ ಸದಸ್ಯ ಬಂಕ್ ಮುನಿಯಪ್ಪ ಮಾತನಾಡಿ, ಕ್ಷೇತ್ರದಲ್ಲಿ ಈ ಹಿಂದೆ ಕಾಣದಷ್ಟು ಅಭಿವೃದ್ಧಿ ಕಾರ್ಯಗಳು ಶಾಸಕ ಎಂ.ರಾಜಣ್ಣರ ಅಧಿಕಾರಾವಧಿಯಲ್ಲಿ ಮಾಡಿದ್ದು, ನಮ್ಮ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ಮನವರಿಕೆ ಮಾಡಿಕೊಡುವ ಮುಖಾಂತರ ಎಪಿಎಂಸಿ ಚುನಾವಣೆಯಲ್ಲಿ ಜಿಲ್ಲೆಯಾದ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಜಯಶೀಲರನ್ನಾಗಿಸಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಎ.ಎಂ.ಜಯರಾಮರೆಡ್ಡಿ, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಡಾ.ಧನಂಜಯರೆಡ್ಡಿ, ಜೆಡಿಎಸ್ ಕಾರ್ಮಿಕ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ರಹಮತ್ತುಲ್ಲಾ, ಮುಖಂಡರಾದ ಕೆ.ಎಸ್.ಕನಕಪ್ರಸಾದ್, ಮುನಿವೆಂಕಟಶಾಮಿ, ನಗರಸಭೆ ಸದಸ್ಯರಾದ ಪಿ.ಕೆ.ಕಿಷನ್, ಶಫಿ ಮತ್ತಿತರರು ಹಾಜರಿದ್ದರು.

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here