ಜೆಡಿಎಸ್ ಪಾಲಾದ ಪಿ.ಎಲ್.ಡಿ ಬ್ಯಾಂಕ್ ; ಆಡಳಿತರೂಡ ಕಾಂಗ್ರೆಸ್ ಗೆ ಮುಖಭಂಗ

- Advertisement -
- Advertisement -

ಶಿಡ್ಲಘಟ್ಟ ತಾಲ್ಲೂಕಿನ ಪ್ರಾಥಮಿಕ ವ್ಯವಸಾಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ (ಪಿ.ಎಲ್.ಡಿ) ಬ್ಯಾಂಕಿನ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಗಳಿಗೆ ಸೋಮವಾರ ನಡೆದ ಚುನಾವಣೆ ಶಾಂತಿಯುತವಾಗಿ ನಡೆಯಿತು. ಕಳೆದ ಎರಡು ಅವಧಿಯಲ್ಲಿ ಕಾಂಗ್ರೆಸ್ ಬೆಂಬಲಿತರ ಕೈಯಲ್ಲಿದ್ದ ಪಿಎಲ್‌ಡಿ ಬ್ಯಾಂಕ್ ಇದೀಗ ಜೆಡಿಎಸ್ ಬೆಂಬಲಿತರ ಪಾಲಾಗಿದೆ. ಬ್ಯಾಂಕಿನ ಆಡಳಿತ ಮಂಡಳಿಯ ಒಟ್ಟ 14 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 8 ಕ್ಷೇತ್ರಗಳಲ್ಲಿ ಜೆಡಿಎಸ್ ಬೆಂಬಲಿತರು ಜಯಗಳಿಸಿದ್ದರೆ 5 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಹಾಗೂ ಒಂದು ಕ್ಷೇತ್ರದಲ್ಲಿ ಸ್ವತಂತ್ರ್ಯ ಅಭ್ಯರ್ಥಿ ಜಯಗಳಿಸಿರುವುದರಿಂದ ಪಿಎಲ್‌ಡಿ ಬ್ಯಾಂಕ್ ಆಡಳಿತ ಜೆಡಿಎಸ್ ಪಾಲಾಗಿದೆ.
ಎರಡು ಅವಧಿಗಳ ತರುವಾಯ ಜೆಡಿಎಸ್ ತೆಕ್ಕೆಗೆ ಪಿ.ಎಲ್.ಡಿ ಬ್ಯಾಂಕ್ ಬಂದ ಖುಷಿಗೆ ಜೆಡಿಎಸ್ ಬೆಂಬಲಿಗರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಇದರಿಂದ ಆಡಳಿತಾರೂಡ ಕಾಂಗ್ರೆಸ್ ಗೆ ಮುಖಭಂಗವಾಗಿದೆ.
ತಾಲೂಕು ಪ್ರಾಥಮಿಕ ವ್ಯವಸಾಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ ಆಡಳಿತ ಮಂಡಳಿಯ 14 ಮಂದಿ ನಿರ್ದೇಶಕರ ಸ್ಥಾನಗಳ ಪೈಕಿ ಒಂದೇ ನಾಮಪತ್ರ ಸಲ್ಲಿಕೆಯಾಗಿದ್ದ ಆನೂರು ಪರಿಶಿಷ್ಠ ಪಂಗಡ ಮೀಸಲು ಕ್ಷೇತ್ರದಿಂದ ಬಂಕ್ ಮುನಿಯಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದು, ಉಳಿದ 13 ನಿರ್ದೇಶಕರ ಸ್ಥಾನಗಳಿಗೆ ಕಣದಲ್ಲಿದ್ದ 27 ಮಂದಿ ಅಭ್ಯರ್ಥಿಗಳ ಆಯ್ಕೆಗಾಗಿ ಸೋಮವಾರ ಚುನಾವಣೆ ನಡೆಯಿತು.
ಸಾಲಗಾರರ ಕ್ಷೇತ್ರದಿಂದ ಒಟ್ಟು 1922 ಹಾಗೂ ಸಾಲಗಾರರಲ್ಲದ ಕ್ಷೇತ್ರದಿಂದ 2380 ಮತದಾರರು ಸೇರಿದಂತೆ ಒಟ್ಟು 4302 ಮತಗಳ ಪೈಕಿ 2894 ಮತದಾರರು ತಮ್ಮ ಮತ ಚಲಾಯಿಸುವುದರೊಂದಿಗೆ ಶೇ 67.27 ರಷ್ಟು ಮತದಾನವಾಯಿತು. ಈ ಪೈಕಿ ೨ ಅಮಾನ್ಯ ಮತಗಳಾಗಿದ್ದು 1 ಖಾಲಿ ಮತಪತ್ರ ವಾದ್ದರಿಂದ 3 ಮತಗಳು ತಿರಸ್ಕೃತ ಗೊಂಡಿದೆ.
ತಾಲ್ಲೂಕು ಪ್ರಾಥಮಿಕ ವ್ಯವಸಾಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ವಿಜೇತರಾದ ಅಭ್ಯರ್ಥಿಗಳ ಹಾಗೂ ಪಡೆದ ಮತಗಳ ವಿವರ :
ಶಿಡ್ಲಘಟ್ಟ ಟೌನ್ (ಹಿಂದುಳಿದ ವರ್ಗ ಬಿ) ಕ್ಷೇತ್ರದಿಂದ ಮಂಜುನಾಥ ( 95 ಮತ )
ಆನೂರು ಪರಿಶಿಷ್ಠ ಪಂಗಡ ಮೀಸಲು ಕ್ಷೇತ್ರದಿಂದ ಬಂಕ್ ಮುನಿಯಪ್ಪ (ಅವಿರೋಧ)
ಅಬ್ಲೂಡು ಸಾಮಾನ್ಯ ಕ್ಷೇತ್ರದಿಂದ ಸಿ.ಕೆ.ನಾರಾಯಣಸ್ವಾಮಿ ( 77 ಮತ )
ಮೇಲೂರು ಸಾಮಾನ್ಯ ಕ್ಷೇತ್ರದಿಂದ ಎಂ.ವಿ.ಗೋಪಾಲಪ್ಪ ( 91 ಮತ )
ಜಂಗಮಕೋಟೆ ಸಾಮಾನ್ಯ ಕ್ಷೇತ್ರದಿಂದ ಕೆ.ಎಂ.ಭೀಮೇಶ್ ( 120 ಮತ )
ದಿಬ್ಬೂರಹಳ್ಳಿ ಸಾಮಾನ್ಯ ಕ್ಷೇತ್ರದಿಂದ ಡಿ.ಸಿ.ರಾಮಚಂದ್ರ ( 91 ಮತ )
ದೊಡ್ಡತೇಕಹಳ್ಳಿ ಸಾಮಾನ್ಯ ಕ್ಷೇತ್ರದಿಂದ ನಾರಾಯಣಸ್ವಾಮಿ.ಸಿ. ( 47 ಮತ )
ಸಾದಲಿ ಪರಿಶಿಷ್ಠ ಜಾತಿ ಮೀಸಲು ಕ್ಷೇತ್ರದಿಂದ ನಾರಾಯಣಪ್ಪ ( 61 ಮತ )
ಚೀಮಂಗಲ ಮಹಿಳಾ ಮೀಸಲು ಕ್ಷೇತ್ರದಿಂದ ಸುನಂದಮ್ಮ ( 50 ಮತ )
ಗಂಜಿಗುಂಟೆ ಸಾಮಾನ್ಯ ಕ್ಷೇತ್ರದಿಂದ ಎಂ.ಪಿ.ರವಿ ( 85 ಮತ )
ವೈ ಹುಣಸೇನಹಳ್ಳಿ ಮಹಿಳಾ ಮೀಸಲು ಕ್ಷೇತ್ರದಿಂದ ಅನಸೂಯಮ್ಮ, ( 51 ಮತ )
ಮಳಮಾಚನಹಳ್ಳಿ ಸಾಮಾನ್ಯ ಕ್ಷೇತ್ರದಿಂದ ನಾರಾಯಣಸ್ವಾಮಿ.ಸಿ.ವಿ. ( 81 ಮತ )
ಫಲಿಚೇರ್ಲು (ಹಿಂದುಳಿದ ವರ್ಗ ಎ) ಕ್ಷೇತ್ರದಿಂದ ಡಿ.ವಿ.ವೆಂಕಟೇಶಪ್ಪ ( 77 ಮತ )
ತಾಲೂಕು ವ್ಯಾಪ್ತಿ ಸಾಲಗಾರರಲ್ಲದ ಕ್ಷೇತ್ರದಿಂದ ಮುರಳಿ.ಎಂ. ( 743 ಮತ ) ಪಡೆಯುವುದರೊಂದಿಗೆ ವಿಜೇತರಾಗಿದ್ದಾರೆ ಎಂದು ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ತಹಸೀಲ್ದಾರ್ ಎಂ.ದಯಾನಂದ್ ತಿಳಿಸಿದ್ದಾರೆ.

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!