Home News ಟ್ರಾಕ್ಟರ್ ರ್ಯಾಲಿಗೆ ಮಳೆಯಲ್ಲೂ ವ್ಯಾಪಕ ಬೆಂಬಲ

ಟ್ರಾಕ್ಟರ್ ರ್ಯಾಲಿಗೆ ಮಳೆಯಲ್ಲೂ ವ್ಯಾಪಕ ಬೆಂಬಲ

0

ಬಯಲುಸೀಮೆ ಪ್ರದೇಶಕ್ಕೆ ನೀರಾವರಿ ತಜ್ಞ ದಿ.ಪರಮಶಿವಯ್ಯ ಅವರ ವರದಿಯಂತೆ ಶಾಶ್ವತ ನೀರಾವರಿ ಯೋಜನೆ ಅನುಷ್ಠಾನಗೊಳಿಸುವಂತೆ ಒತ್ತಾಯಿಸಿ ಚಿಕ್ಕಬಳ್ಳಾಪುರದ ಚದಲಪುರ ಕ್ರಾಸ್ನಲ್ಲಿ ನಡೆಯುತ್ತಿರುವ ಅನಿರ್ದಿಷ್ಠಾವಧಿ ಧರಣಿಗೆ ಬೆಂಬಲ ವ್ಯಕ್ತಪಡಿಸಿ ಶಾಸಕ ಎಂ.ರಾಜಣ್ಣ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಟ್ರಾಕ್ಟರ್ ರ್ಯಾಲಿಗೆ ಭಾರಿ ಬೆಂಬಲ ವ್ಯಕ್ತವಾಯಿತು.
ಶಿಡ್ಲಘಟ್ಟ ನಗರದಿಂದ ನೂರಾರು ಟ್ರ್ಯಾಕ್ಟರ್ಗಳಲ್ಲಿ ನೀರಾವರಿ ಹೋರಾಟಕ್ಕೆ ಹೊರಟ ಟ್ರ್ಯಾಕ್ಟರ್ಗಳಿಗೆ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ನಗರದ ಹೊರವಲಯದ ಹಂಡಿಗನಾಳದ ಬಳಿ ಚಾಲನೆ ನೀಡಿದರು.
ಶಾಸಕ ಎಂ.ರಾಜಣ್ಣ ಮಾತನಾಡಿ ಬಯಲುಸೀಮೆಯ ಭಾಗಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವಂತೆ ಕಳೆದ ೫೪ ದಿನಗಳಿಂದ ನಿರಂತರವಾಗಿ ಹೋರಾಟ ನಡೆಯುತ್ತಿದ್ದರೂ ಕೂಡಾ ಈವರೆಗೂ ರಾಜ್ಯ ಸರ್ಕಾರ ಈ ಭಾಗದ ನೀರಾವರಿ ಸಮಸ್ಯೆಯ ಬಗ್ಗೆ ಗಂಭೀರವಾದ ನಿರ್ಧಾರಕ್ಕೆ ಬಂದಿಲ್ಲ.

ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ನಗರದ ಹೊರವಲಯದ ಹಂಡಿಗನಾಳದ ಬಳಿ ಟ್ರಾಕ್ಟರ್ ರ್ಯಾಲಿಗೆ ಚಾಲನೆ ನೀಡಿದರು.
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ನಗರದ ಹೊರವಲಯದ ಹಂಡಿಗನಾಳದ ಬಳಿ ಟ್ರಾಕ್ಟರ್ ರ್ಯಾಲಿಗೆ ಚಾಲನೆ ನೀಡಿದರು.
ಕಳೆದ ೫5 ದಿನಗಳಿಂದ ಈ ಭಾಗದ ರೈತರು ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಸಂಘ ಸಂಸ್ಥೆಗಳು ನೀರಾವರಿ ಹೋರಾಟಕ್ಕೆ ಬೆಂಬಲಿಸುತ್ತಿದ್ದು ಕಳೆದ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಕೆಲವು ಪಂಚಾಯತಿಗಳ ಜನರು ಚುನಾವಣೆಗಳನ್ನು ಬಹಿಷ್ಕಾರ ಮಾಡುವ ಸಲುವಾಗಿ ಸರ್ಕಾರಕ್ಕೆ ಈ ಭಾಗದಲ್ಲಿ ರೈತರು ಹಾಗೂ ಸಾಮಾನ್ಯ ವರ್ಗದವರ ಭವಣೆಯನ್ನು ಮನವರಿಕೆ ಮಾಡಿಕೊಟ್ಟಿದ್ದರೂ ಕೂಡಾ ಸರ್ಕಾರ ಈ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸಲಿಲ್ಲ ಎಂದರು.
ಜಿಲ್ಲಾ ಉಸ್ತುವಾರಿ ಸಚಿವರು ಹೋರಾಟಗಾರರ ಒತ್ತಡಕ್ಕೆ ಮಣಿದು ಪ್ರತಿಭಟನಾಸ್ಥಳಕ್ಕೆ ಬೇಟಿ ನೀಡಿದ್ದರೇ ಹೊರತು ಈ ಭಾಗದ ರೈತರ ಸಂಕಷ್ಟವನ್ನು ಅರ್ಥ ಮಾಡಿಕೊಂಡು ಪರಿಹಾರವನ್ನು ಕಲ್ಪಿಸುವಂತಹ ಪ್ರಾಮಾಣಿಕ ಪ್ರಯತ್ನ ಮಾಡುತ್ತಿಲ್ಲ.
ಕಳೆದ ಲೋಕಸಭೆ ಚುನಾವಣೆಯ ವೇಳೆ ಎತ್ತಿನಹೊಳೆ ಯೋಜನೆಗೆ ಚಿಕ್ಕಬಳ್ಳಾಪುರದಲ್ಲಿ ಚಾಲನೆ ನೀಡಲಾಯಿತಾದರೂ ಈ ಯೋಜನೆಯಿಂದ ಈ ಭಾಗಕ್ಕೆ ಸಿಗುವ ನೀರಿನ ಪ್ರಮಾಣವೆಷ್ಟು ಎನ್ನುವುದು ಸರ್ಕಾರಕ್ಕೆ ಗೊತ್ತಿಲ್ಲ. ಕುಡಿಯುವ ನೀರಿಗೂ ಪರಿತಪಿಸುವ ಸ್ಥಿತಿ ತಲುಪಿರುವ ಈ ಭಾಗದ ಜನತೆ ದಂಗೆ ಏಳುವ ಮೊದಲೇ ನೀರಾವರಿ ಯೋಜನೆ ಕಲ್ಪಿಸಲು ಸರ್ಕಾರ ಮುಂದಾಗಬೇಕು ಎಂದರು.
ಈಗಾಗಲೇ ಜಿಲ್ಲೆಯ ಜನತೆ ಬೈಕ್ರ್ಯಾಲಿ, ಪಾದಯಾತ್ರೆ, ಸೇರಿದಂತೆ ರಾಸುಗಳನ್ನು ಪ್ರತಿಭಟನೆ ಸ್ಥಳಕ್ಕೆ ಕರೆದೊಯ್ದು, ನೀರಾವರಿ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ, ಸರ್ಕಾರ ಈಗಲಾದರೂ ಈ ಭಾಗದ ರೈತರ ಕೂಗಿಗೆ ಸ್ಪಂದಿಸಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ರ್ಯಾಲಿಯಲ್ಲಿ ಜಿಲ್ಲಾ ಪಂಚಾಯತಿ ಅಧ್ಯಕ್ಷ ಪಿ.ಎನ್.ಮುನೇಗೌಡ, ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ವಿ.ನಾಗರಾಜ್, ಕೋಚಿಮುಲ್ ನಿರ್ದೇಶಕ ಬಂಕ್ ಮುನಿಯಪ್ಪ, ಡಿಸಿಸಿ ಬ್ಯಾಂಕ್ ನಿರ್ದೇಶಕ ಶಿವಾರೆಡ್ಡಿ, ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಡಾ.ಧನಂಜಯರೆಡ್ಡಿ, ನಗರಸಭೆ ಸದಸ್ಯ ಅಪ್ಸರ್ಪಾಷ, ಮುಖಂಡರಾದ ರಹಮತ್ತುಲ್ಲಾ, ದೊಣ್ಣಹಳ್ಳಿ ರಾಮಣ್ಣ ಮತ್ತಿತರರು ಹಾಜರಿದ್ದರು.