Home News ತಹಸೀಲ್ದಾರ್ ವರ್ಗಾವಣೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ

ತಹಸೀಲ್ದಾರ್ ವರ್ಗಾವಣೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ

0

ಶಿಡ್ಲಘಟ್ಟ ತಹಸೀಲ್ದಾರ್ ಎಸ್.ಅಜಿತ್‌ಕುಮಾರ್‌ರೈ ರವರ ವರ್ಗಾವಣೆಯನ್ನು ಕೂಡಲೇ ರದ್ದುಗೊಳಿಸುವಂತೆ ಒತ್ತಾಯಿಸಿ ಗುರುವಾರ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ತಾಲ್ಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.
ಕಳೆದ ಆರು ತಿಂಗಳ ಹಿಂದೆಯಷ್ಟೇ ಇಲ್ಲಿಗೆ ತಹಸೀಲ್ದಾರ್‌ರಾಗಿ ಬಂದಂತಹ ಅಜಿತ್‌ಕುಮಾರ್‌ರೈ ರನ್ನು ಏಕಾಏಕಿ ಬುಧವಾರ ಸಂಜೆ ಚಿಂತಾಮಣಿಗೆ ನಿಯೋಜಿಸಿರುವ ಜಿಲ್ಲಾಧಿಕಾರಿಗಳ ಕ್ರಮ ಸರಿಯಲ್ಲ. ಇದರ ಹಿಂದೆ ಪ್ರಭಾವಿಗಳ ಹಸ್ತಕ್ಷೇಪ ವಿರುವ ಅನುಮಾನವಿದ್ದು ಕೂಡಲೇ ಈ ಅಧಿಕಾರಿಯ ವರ್ಗಾವಣೆ ರದ್ದುಗೊಳಿಸಿ ಇಲ್ಲಿಯೇ ಮುಂದುವರೆಯಲು ಜಿಲ್ಲಾಧಿಕಾರಿಗಳು ಆದೇಶಿಸಿಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ತಾಲ್ಲೂಕಿನಲ್ಲಿ ಬಹು ದಿನಗಳಿಂದ ಇದ್ದ ಕೆರೆ ಒತ್ತುವರಿ ಸಮಸ್ಯೆ ಸೇರಿದಂತೆ ನಗರದ ರಾಜಕಾಲುವೆಗಳ ಮೇಲೆ ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆ ನಡೆಸುವ ಮೂಲಕ ಜನರಿಗೆ ಹತ್ತಿರವಾಗಿರುವ ಇಂತಹ ಅಧಿಕಾರಿಯನ್ನು ಯಾವುದೇ ಕಾರಣಕ್ಕೂ ಇಲ್ಲಿಂದ ವರ್ಗಾವಣೆ ಮಾಡಬಾರದು ಎಂದು ಒತ್ತಾಯಿಸಿ ಜಿಲ್ಲಾಡಳಿತ ಹಾಗು ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿದರು.
ಪ್ರತಿಭಟನೆಯಲ್ಲಿ ದಸಂಸ ಜಿಲ್ಲಾ ಮುಖಂಡ ಮುನೆಯ್ಯ, ತಾಲ್ಲೂಕು ಸಂಚಾಲಕರಾದ ಎ.ಎಂ.ವೆಂಕಟೇಶ್, ಚಲಪತಿ, ಮುಖಂಡರಾದ ದ್ಯಾವಕೃಷ್ಣಪ್ಪ, ರೈತ ಸಂಘದ ಮುಖಂಡರಾದ ಎಸ್.ಎಂ.ರವಿಪ್ರಕಾಶ್, ಜೆ.ವಿ.ವೆಂಕಟಸ್ವಾಮಿ, ತಾದೂರು ಮಂಜುನಾಥ್ ಪಾಲ್ಗೊಂಡಿದ್ದರು