ತಾಲ್ಲೂಕಿನಾದ್ಯಂತ ಈದ್-ಮಿಲಾದ್ ಹಬ್ಬದ ಆಚರಣೆ

0
425

ತಾಲ್ಲೂಕಿನಾದ್ಯಂತ ಈದ್-ಮಿಲಾದ್ ಹಬ್ಬವನ್ನು ಬುಧವಾರ ಶ್ರದ್ಧಾ ಭಕ್ತಿ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ಮಹಮ್ಮದ್ ಪೈಗಂಬರ್ ಜನ್ಮದಿನದಂದು ಸಂಭ್ರಮದಿಂದ ಆಚರಿಸಲಾಗುವ ಈ ಹಬ್ಬದ ಹಿನ್ನೆಲೆಯಲ್ಲಿ ನಗರದ ಪ್ರಮುಖ ಬೀದಿಗಳನ್ನು ಅಲಂಕರಿಸಲಾಗಿತ್ತು.
ಮಹಿಳೆಯರು ಸಿಹಿ ತಿಂಡಿಗಳನ್ನು ತಯಾರಿಸಿ ವಿತರಿಸಿದರು. ಕಿರಿಯರು ಮತ್ತು ಹಿರಿಯರು ಹೊಸ ಉಡುಪುಗಳನ್ನು ತೊಟ್ಟು ಸಂತಸಪಟ್ಟರು. ಮುಸ್ಲೀಮರು ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಪರಸ್ಪರ ಶುಭ ಹಾರೈಸಿದರು.
ವಿವಿಧ ಬಡಾವಣೆಗಳಲ್ಲಿರುವ ಮಸೀದಿಗಳಲ್ಲಿ ಗುಂಪುಗೂಡಿದ ಬಹುತೇಕ ಮಂದಿ ಮುಸ್ಲೀಮರು ನಂತರ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯಲ್ಲಿ ಸಾಗಿದರು. ಕಿರಿಯರು ಹೆಚ್ಚಿನ ಸಂಖ್ಯೆಯಲ್ಲಿ ಬಾವುಟಗಳನ್ನು ಹಿಡಿದುಕೊಂಡು ಮಹಮ್ಮದ್ ಪೈಗಂಬರ್ ಅವರನ್ನು ಸ್ಮರಿಸಿದರು. ವಿವಿಧ ರೀತಿಯ ಪ್ರಾರ್ಥನಾ ಮಂದಿರಗಳ ಪ್ರತಿಕೃತಿಗಳನ್ನು ಮಾಡಿ ಮೆರವಣಿಗೆಯಲ್ಲಿ ಕೊಂಡೊಯ್ದರು. ಪ್ರಾರ್ಥನೆ ಸಲ್ಲಿಸಿದ ಬಳಿಕ ಮನೆಗಳಲ್ಲಿ ತಯಾರಿಸಲಾಗಿದ್ದ ಸಿಹಿ ತಿಂಡಿ ವಿತರಿಸಿದರು.
ಸಂಜೆ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸಲಾಯಿತು. ಧರ್ಮಗುರುಗಳು ಉಪದೇಶ ಬೋಧಿಸಿದರು. ಎಲ್ಲ ಮಸೀದಿಗಳ ಅಧ್ಯಕ್ಷರು, ಕಾರ್ಯದರ್ಶಿಗಳು, ಪದಾಧಿಕಾರಿಗಳು, ನಗರದ ಮುಸ್ಲಿಂ ಜನಾಂಗದ ಎಲ್ಲ ಹಿರಿಯರು ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು. ಹಬ್ಬದ ದಿನ ಶಾಂತಿ ಸುವ್ಯವಸ್ಥೆಗಾಗಿ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!