ಶಿವಮೊಗ್ಗದಲ್ಲಿ ನಡೆದ ಸರ್ಕಾರಿ ನೌಕರರ ಕ್ರೀಡಾಕೂಟದ ರಾಜ್ಯಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ತಾಲ್ಲೂಕಿನ ಸರ್ಕಾರಿ ನೌಕರರು ಗೆಲುವು ಸಾಧಿಸಿ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕೇರಂ ಸಿಂಗಲ್ಸ್ ಸ್ಪರ್ಧೆಯಲ್ಲಿ ಜಂಗಮಕೋಟೆ ಸಿಆರ್‌ಪಿ ಆರ್.ಸುಂದರಾಚಾರಿ, ಹತ್ತು ಸಾವಿರ ಮೀಟರ್ ಓಟದ ಸ್ಪರ್ಧೆಯಲ್ಲಿ ಶಿಕ್ಷಕ ಗಂಗಾಧರ್ ಹಾಗೂ ಹಡಲ್ಸ್ ವಿಭಾಗದಲ್ಲಿ ಶಿಕ್ಷಕ ಅನಂತ ದ್ವಿತೀಯ ಬಹುಮಾನ ಪಡೆದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿ ತಾಲ್ಲೂಕಿಗೆ ಕೀರ್ತಿ ತಂದಿದ್ದಾರೆ. ಜೊತೆಗೆ ಕೇರಂ ಡಬಲ್ಸ್‌ನಲ್ಲಿ ಟಿ.ಟಿ. ನರಸಿಂಹಪ್ಪ ಮತ್ತು ಸುಂದರಾಚಾರಿ ತೃತೀಯ ಸ್ಥಾನ ಪಡೆದಿದ್ದಾರೆ.
ಅತ್ಯುತ್ತಮವಾಗಿ ಸಾಧನೆ ಮಾಡಿದ ಸರ್ಕಾರಿ ನೌಕರರಿಗೆ ತಾಲೂಕು ಸರ್ಕಾರಿ ನೌಕರರ ಸಂಘದ ಅದ್ಯಕ್ಷ ಕೇಶವರೆಡ್ಡಿ, ಮಾಜಿ ಅಧ್ಯಕ್ಷ ಗುರುರಾಜ್‌ರಾವ್, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ರಘುನಾಥ್‌ರೆಡ್ಡಿ, ಸಮನ್ವಯಾಧಿಕಾರಿ ಸುಮ ಹಾಗೂ ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ತಿನ ಸದಸ್ಯ ಸುಬ್ಬಾರೆಡ್ಡಿ ಮತ್ತು ಪದಾಧಿಕಾರಿಗಳು ಅಭಿನಂದಿಸಿದ್ದಾರೆ.