Home News ತಾಲ್ಲೂಕು ಆಡಳಿತದಿಂದ ಸಮಗ್ರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2020 ಅರಿವು ಜಾಥಾ

ತಾಲ್ಲೂಕು ಆಡಳಿತದಿಂದ ಸಮಗ್ರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2020 ಅರಿವು ಜಾಥಾ

0

ನಗರದ ಪ್ರಮುಖ ರಸ್ತೆಗಳಲ್ಲಿ ಭಾನುವಾರ ನಗರಸಭೆ ಸಿಬ್ಬಂದಿ, ಶಿಕ್ಷರೊಂದಿಗೆ ಜಾಥಾ ನಡೆಸಿ ತಹಶೀಲ್ದಾರ್ ಎಂ.ದಯಾನಂದ್ ಮಾತನಾಡಿದರು.
ಭಾರತ ಚುನಾವಣಾ ಆಯೋಗ ಸಮಗ್ರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2020 ಕಾರ‍್ಯಕ್ರಮವನ್ನು ಜಾರಿಗೊಳಿಸಿದೆ. ಅದರಂತೆ ತಾಲ್ಲೂಕಿನಲ್ಲಿ ಸೆಪ್ಟೆಂಬರ್ ೧ ರಿಂದ ೩೦ ರವರೆಗೆ ಮತದಾರರ ಪಟ್ಟಿ ಪರಿಶೀಲನಾ ಕಾರ್ಯಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿ, ಫೋಟೋ ಅದಲು-ಬದಲು, ತೆಗೆದು ಹಾಕುವಿಕೆ, ವಿಳಾಸ ಬದಲಾವಣೆ, ಮತಗಟ್ಟೆ ಬದಲಾವಣೆ ಸೇರಿದಂತೆ ಮತದಾರರ ಚೀಟಿಯಲ್ಲಿನ ಲೋಪದೋಷಗಳನ್ನು ವಿಶೇಷ ಪರಿಷ್ಕರಣೆ ಕಾರ‍್ಯಕ್ರಮದ ವೇಳೆ ಸರಿಪಡಿಸಲಾಗುತ್ತದೆ. ಯಾವುದೇ ಮತದಾರ ಮತದಾನದಿಂದ ಹೊರಗುಳಿಯಬಾರದು ಎಂದು ಹೇಳಿದರು.
ಮತಗಟ್ಟೆ ಅಧಿಕಾರಿಗಳು(ಬಿಎಲ್‌ಒ) ಮನೆಮನೆ ಭೇಟಿ ನೀಡಲಿದ್ದಾರೆ. ತಮ್ಮ ಹೆಸರುಗಳು ಮತದಾರರ ಪಟ್ಟಿಯಲ್ಲಿರುವುದನ್ನು ಖಾತ್ರಿ ಪಡಿಸಿಕೊಳ್ಳಿ. ದೋಷಗಳಿದ್ದರೆ ಸರಿಪಡಿಸಿಕೊಳ್ಳಿ. ಇದರ ಲಾಭವನ್ನು ಜನತೆ ಪಡೆದುಕೊಳ್ಳಿ. ಕಾಮನ್ ಸರ್ವೀಸ್ ಸೆಂಟರ್, ಅಟಲ್ ಜಿ ಜನಸ್ನೇಹಿ ಕೇಂದ್ರ, ಬಾಪೂಜಿ ಕೇಂದ್ರ, ನಗರಸಭೆ, ತಾಲ್ಲೂಕು ಕಚೇರಿಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಮಾಡಲಾಗುವುದು ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಶ್ರೀನಿವಾಸ್, ಪೌರಾಯುಕ್ತ ಚಲಪತಿ, ಆರ್ ಐ ವಿಶ್ವನಾಥ್, ಚುನಾವಣಾ ಸಿಬ್ಬಂದಿ ರೇವಣಸಿದ್ದಪ್ಪ, ನಗರಸಭೆಯ ಪ್ರಸಾದ್, ದಿಲೀಪ್ ಹಾಜರಿದ್ದರು.

error: Content is protected !!