ಶೈಕ್ಷಣಿಕವಾಗಿ ಹಿಂದುಳಿದವರಿಗೆ ಸಹಾಯ ಮಾಡುವುದು ಹಾಗೂ ಪ್ರತಿಭಾವಂತರನ್ನು ಪ್ರೋತ್ಸಾಹಿಸುವ ಕಾರ್ಯವನ್ನು ಸಂಘವು ನಿರ್ವಹಿಸಬೇಕೆಂದು ಶಾಸಕ ಎಂ.ರಾಜಣ್ಣ ತಿಳಿಸಿದರು.
ತಾಲ್ಲೂಕಿನ ವರದನಾಯಕನಹಳ್ಳಿ ಗೇಟ್ ಬಳಿಯ ಬಾಲಾಜಿ ಕಲ್ಯಾಣ ಮಂಟಪದಲ್ಲಿ ತಾಲ್ಲೂಕು ಒಕ್ಕಲಿಗರ ನೌಕರರ ಕ್ಷೇಮಾಭಿವೃದ್ಧಿ ಸಂಘದ ಉದ್ಘಾಟನೆ ಹಾಗೂ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಮುದಾಯದ ಅಭಿವೃದ್ಧಿಗೆ ಶ್ರಮಿಸುವುದರ ಜೊತೆಗೆ ಇತರೇ ಸಮುದಾಯದವರೊಂದಿಗೆ ಉತ್ತಮ ಬಾಂಧವ್ಯವನ್ನು ಬೆಳೆಸಿಕೊಂಡು ಸಾಮಾಜಿಕ ಕಾರ್ಯಗಳನ್ನು ನಡೆಸಬೇಕು. ಭೂತಾಯಿಯನ್ನು ನೆಚ್ಚಿದ ಜನಾಂಗದ ಮಂದಿ ಈಗ ಹಲವಾರು ಕಸುಬು ಹಾಗೂ ಉದ್ಯೋಗಗಳಲ್ಲಿದ್ದರೂ ಭೂತಾಯಿಯ ಆಶಯಕ್ಕೆ ಬದ್ಧರಾಗಿರಬೇಕು. ಒಗ್ಗಟ್ಟಿನಿಂದ ಮಾತ್ರ ಉತ್ತಮ ಉದ್ಧೇಶಗಳನ್ನು ಈಡೇರಿಸಲು ಸಾಧ್ಯ. ಯುವಪೀಳಿಗೆಗೆ ಉತ್ತಮ ಮಾರ್ಗದರ್ಶಕರಾಗಿ ಹಿರಿಯರು ಪ್ರೋತ್ಸಾಹಿಸಬೇಕು ಎಂದು ಹೇಳಿದರು.
ತಾಲ್ಲೂಕಿನ 20 ಮಂದಿ ಪ್ರತಿಭಾವಂತ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಹಾಗೂ 20 ಮಂದಿ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ಮಾಡಲಾಯಿತು. ಒಕ್ಕಲಿಗರ ನೌಕರರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳಿಗೆ ಪದವಿ ಸ್ವೀಕಾರ ಪತ್ರಗಳನ್ನು ವಿತರಿಸಲಾಯಿತು.
ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಆರ್.ವೆಂಕಟರಾಮ್, ಅಸಿಸ್ಟೆಂಟ್ ಕಮೀಷನರ್ ಡಿ.ಎಂ.ಸತೀಶ್, ರಾಜ್ಯ ಒಕ್ಕಲಿಗ ಸಂಘದ ನಿರ್ದೇಶಕರಾದ ಯಲುವಳ್ಳಿ ಎನ್.ರಮೇಶ್, ವಿ.ಇ.ರಾಮಚಂದ್ರ, ಎಂ.ಎಲ್.ಸತೀಶ್, ಜಿಲ್ಲಾ ಒಕ್ಕಲಿಗರ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎ.ನಾರಾಯಣಸ್ವಾಮಿ, ಜಿಲ್ಲಾ ಪಂಚಾಯಿತಿ ಸದಸ್ಯ ಎಸ್.ಎಂ.ನಾರಾಯಣಸ್ವಾಮಿ, ಗೋಪಾಲ್, ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಮುನಿರಾಜು, ಪದಾಧಿಕಾರಿಗಳಾದ ಚಂದ್ರಪ್ಪ, ಡಾ.ಮುನಿನಾರಾಯಣರೆಡ್ಡಿ, ಕೇಶವರೆಡ್ಡಿ, ಕೆಂಪಣ್ಣ, ಅಕ್ಕಲರೆಡ್ಡಿ, ಸೀತಾರಾಮರೆಡ್ಡಿ, ಟಿ.ವಿ.ಚಂದ್ರಶೇಖರ್, ಬಿ.ವಿ.ಶ್ರೀರಾಮಯ್ಯ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
ತಾಲ್ಲೂಕು ಒಕ್ಕಲಿಗರ ನೌಕರರ ಕ್ಷೇಮಾಭಿವೃದ್ಧಿ ಸಂಘದ ಉದ್ಘಾಟನೆ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
- Advertisement -
- Advertisement -
- Advertisement -
- Advertisement -