Home News ತಾಲ್ಲೂಕು ಬಿಜೆಪಿಯ ಬೂತ್ ಮಟ್ಟದ ಕಾರ್ಯಕರ್ತರ ಸಭೆ

ತಾಲ್ಲೂಕು ಬಿಜೆಪಿಯ ಬೂತ್ ಮಟ್ಟದ ಕಾರ್ಯಕರ್ತರ ಸಭೆ

0

ಶಿಡ್ಲಘಟ್ಟ ನಗರದ ಚಿಂತಾಮಣಿ ರಸ್ತೆಯಲ್ಲಿರುವ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ತಾಲ್ಲೂಕು ಬಿಜೆಪಿಯ ಬೂತ್ ಮಟ್ಟದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಬಿಜೆಪಿ ರಾಷ್ಟ್ರೀಯ ಸಮಿತಿ ಸದಸ್ಯ ಸತೀಶ್ ಉಪಾಧ್ಯಾಯ ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿವಿಧ ಜನಪರ ಯೋಜನೆಗಳನ್ನು ಕ್ಷೇತ್ರದ ಜನರಿಗೆ ತಲುಪಿಸುವ ಕೆಲಸವನ್ನು ಪಕ್ಷದ ಮುಖಂಡರೂ ಹಾಗೂ ಕಾರ್ಯಕರ್ತರು ಮಾಡಬೇಕು ಎಂದು ಅವರು ತಿಳಿಸಿದರು.
ದೇಶದ ಚಿಂತನೆಯಲ್ಲಿ ತೊಡಗಿರುವ ಬಿಜೆಪಿ ಪಕ್ಷಕ್ಕೆ ದೇಶದಾದ್ಯಂತ ಅಭೂತಪೂರ್ವ ಬೆಂಬಲ ದೊರಕಿದೆ. ದೇಶದ ಜನತೆಯನ್ನು ಸ್ವಾಭಿಮಾನಿಗಳನ್ನಾಗಿ ಮಾಡುವ ನಿಟ್ಟಿನಲ್ಲಿ ಯುವಕರಿಗೆ ಮುದ್ರಾ ಯೋಜನೆಯಡಿ ಬ್ಯಾಂಕ್ ಗಳಿಂದ ಸಾಲಸೌಲಭ್ಯ, ಹೆಣ್ಣು ಮಕ್ಕಳಿಗಾಗು ಸುಕನ್ಯಾ ಸಮೃದ್ಧಿ ಯೋಜನೆ, ಬಡವರಿಗೆ ಉಚಿತ ಗ್ಯಾಸ್ ವಿತರಣೆಯಂತಹ ಕಾರ್ಯಕ್ರಮಗಳ ಬಗ್ಗೆ ಜನಸಾಮಾನ್ಯರಿಗೆ ಮನವರಿಕೆ ಮಾಡಿಕೊಡಬೇಕು. ಈ ಮೂಲಕ ಮುಂಬರುವ ವಿಧನಾಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರ ಹಿಡಿಯುವ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ನಿರ್ವಹಿಸಬೇಕು ಎಂದರು.
ಬಿಜೆಪಿ ತಾಲ್ಲೂಕು ಅಧ್ಯಕ್ಷ ಬಿ.ಸಿ.ನಂದೀಶ್ ಮಾತನಾಡಿ, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಜನಪರ ಯೋಜನೆಗಳ ಮೂಲಕವೇ ಅಧಿಕಾರ ಹಿಡಿಯಲಿದೆ. ಕಳೆದ ನಾಲ್ಕು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶಕ್ಕೆ ನೀಡಿರುವ ಕೊಡುಗೆಗಳ ಬಗ್ಗೆ ಮನೆ ಮನೆಗೂ ತೆರಳಿ ಕ್ಷೇತ್ರದಲ್ಲಿ ಮತ ಯಾಚಿಸಲು ಕಾರ್ಯಕರ್ತರು ಮುಂದಾಗಬೇಕು. ಈಗಾಗಲೇ ತಾಲ್ಲೂಕಿನ ಚಿಲಕಲನೇರ್ಪು ಭಾಗದಲ್ಲಿ ಬೂತ್ ಮಟ್ಟದ ಪದಾಧಿಕಾರಿಗಳ ಸಭೆಗಳನ್ನು ನಡೆಸಿದ್ದು, ಮುಂಬರುವ ದಿನಗಳಲ್ಲಿ ಕ್ಷೇತ್ರದಾದ್ಯಂತ ಎಲ್ಲಾ ಕಡೆ ಸಂಚರಿಸಿ ಪಕ್ಷವನ್ನು ಮತ್ತಷ್ಟು ಬಲಪಡಿಸಲು ಎಲ್ಲರೂ ಮುಂದಾಗಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಚುನಾವಣೆ ಉಸ್ತುವಾರಿ ಮಧುಶ್ರೀ, ಕಿಸಾನ್ ಮೋರ್ಚಾ ಸದಸ್ಯ ಚಲಪಲ್ಲಿ ನರಸಿಂಹರೆಡ್ಡಿ, ಚುನಾವಣೆ ವಿಸ್ತಾರಕ್ ಫರೀದ್‌ಖಾನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಂದ್ರಗೌಡ, ಮುಖಂಡರಾದ ಡಿ.ಆರ್.ಶಿವಕುಮಾರಗೌಡ, ಸುರೇಶ್, ನಗರಸಭೆ ಸದಸ್ಯ ಎಸ್.ರಾಘವೇಂದ್ರ, ಶ್ರೀಧರ್, ಮಂಜುಳಮ್ಮ, ಸುಜಾತಮ್ಮ ಹಾಜರಿದ್ದರು.