Home News ತಾಲ್ಲೂಕು ಬಿಜೆಪಿ ಪಕ್ಷದ ವತಿಯಿಂದ ಸಂಭ್ರಮಾಚರಣೆ

ತಾಲ್ಲೂಕು ಬಿಜೆಪಿ ಪಕ್ಷದ ವತಿಯಿಂದ ಸಂಭ್ರಮಾಚರಣೆ

0

ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ರಾಮ್‌ನಾಥ್ ಕೋವಿಂದ್ ದೇಶದ ೧೪ ನೇ ರಾಷ್ಟ್ರಪತಿಯಾಗಿ ಭಾರಿ ಮತಗಳ ಅಂತರದಿಂದ ಆಯ್ಕೆಯಾಗಿರುವುದು ಸಂತಸದ ಸಂಗತಿ ಎಂದು ಬಿಜೆಪಿ ತಾಲ್ಲೂಕು ಅಧ್ಯಕ್ಷ ಬಿ.ಸಿ.ನಂದೀಶ್ ಹೇಳಿದರು.
ನಗರದ ಕೋಟೆ ವೃತ್ತದಲ್ಲಿ ಶುಕ್ರವಾರ ತಾಲ್ಲೂಕು ಬಿಜೆಪಿ ಪಕ್ಷದ ವತಿಯಿಂದ ನಗರದ ಶ್ರೀ ಆಂಜನೇಯಸ್ವಾಮಿ ದೇವಾಲಯದಲ್ಲಿ ಪೂಜೆ ನೆರವೇರಿಸಿ ನಂತರ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ನೆರವೇರಿಸಿ ಅವರು ಮಾತನಾಡಿದರು.
ಪಕ್ಷದ ಹಿರಿಯ ಮುಖಂಡರಾದ ರಾಮನಾಥ್‌ಕೋವಿಂದ್ ರಾಜ್ಯಸಭಾ ಸದಸ್ಯರಾಗಿ, ಬಿಹಾರದ ರಾಜ್ಯಪಾಲರಾಗಿ ಕಾರ್ಯನಿರ್ವಹಿಸಿದ್ದರು. ದೇಶದ ಅತ್ಯುನ್ನತ ಪದವಿಯಾದ ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ಬಿಜೆಪಿಯ ಪ್ರಪ್ರಥಮ ನಾಯಕರು ಇವರು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಎಂದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಂದ್ರಗೌಡ, ಮುಖಂಡರಾದ ಡಿ.ಆರ್.ಶಿವಕುಮಾರಗೌಡ, ಸುರೇಶ್, ದಾಮೋದರ್, ಮುನಿವೆಂಕಟಪ್ಪ, ಬೈರರೆಡ್ಡಿ, ಶ್ರೀರಾಮ, ಸುಜಾತಮ್ಮ, ರವಿ, ಮುನಿರಾಜು, ಚಲಪತಿ ಹಾಜರಿದ್ದರು.