ಹೈದರಾಬಾದ್‍ನ ವಿವಿಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿ ರೋಹಿತ್‍ವೆಮುಲಾ ಅವರ ಸಾವಿಗೆ ಕಾರಣವಾಗಿರುವವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳು ಪ್ರತಿಭಟನಾ ಮೆರವಣಿಗೆ ನಡೆಸಿ ತಹಶೀಲ್ದಾರರ ಮೂಲಕ ಮನವಿ ಪತ್ರವನ್ನು ಸಲ್ಲಿಸಿದರು.
ನಗರದ ಕೆ.ಎಸ್.ಆರ್.ಟಿ.ಸಿ.ಬಸ್ ನಿಲ್ದಾಣದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಅವರು, ದೇಶದಲ್ಲಿ ದಲಿತರಿಗೆ ರಕ್ಷಣೆ ಇಲ್ಲದಂತಾಗಿದೆ, ಕಳೆದ ಹತ್ತು ವರ್ಷಗಳಲ್ಲಿ ಹೈದರಾಬಾದ್ ವಿವಿಯಲ್ಲಿ ಸಾವನ್ನಪ್ಪಿರುವ ವಿದ್ಯಾರ್ಥಿಗಳ ಸಂಖ್ಯೆ 08 ಕ್ಕೆ ಏರಿಕೆಯಾಗಿದ್ದರೂ ಕೂಡಾ ಯಾವುದೇ ಕ್ರಮಕ್ಕೆ ಮುಂದಾಗಿಲ್ಲದ ವಿವಿಯ ಉಪಕುಲಪತಿಗಳನ್ನು ಕೂಡಲೇ ವಜಾಗೊಳಿಸಿ, ಅವರ ಮೇಲೆ ಕಾನೂನು ಕ್ರಮ ಜರುಗಿಸಬೇಕು, ದಲಿತ ಸಮುದಾಯದ ಬಗ್ಗೆ ಕೀಳಾಗಿ ಮಾತನಾಡುತ್ತಿರುವ ಕೇಂದ್ರ ಸಚಿವರಾದ ಸ್ಮøತಿ ಇರಾನಿ ಹಾಗೂ ಬಂಡಾರು ದತ್ತಾತ್ರೇಯ ಅವರನ್ನು ಕೂಡಲೇ ಸಂಪುಟದಿಂದ ಕೈ ಬಿಡಬೇಕು, ದೇಶದಲ್ಲಿನ ದಲಿತರಿಗೆ ಸೂಕ್ತ ರಕ್ಷಣೆಯನ್ನು ಒದಗಿಸಬೇಕು, ವಿದ್ಯಾರ್ಥಿ ರೋಹಿತ್‍ನ ಆತ್ಮಹತ್ಯೆಯ ಬಗ್ಗೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರೂ ಕೂಡಾ ಅವರ ಮೇಲೆ ಗೂಂಡಾಗಿರಿ ಮಾಡಿ, ಪೋಷಕರು ಹಾಗು ವಿದ್ಯಾರ್ಥಿಗಳನ್ನು ಅಂತ್ಯ ಸಂಸ್ಕಾರದಿಂದ ಹೊರಗಿಟ್ಟು ಸಂಸ್ಕಾರ ನಡೆಸಿರುವ ಪೊಲೀಸರ ಮೇಲೆಯೂ ಸರ್ಕಾರಗಳು ಸೂಕ್ತ ಕ್ರಮ ಜರುಗಿಸಬೇಕು, ಪೊಲೀಸರೇ ಅಂತ್ಯಕ್ರಿಯೆ ನಡೆಸಲು ಕಾರಣವೇನು ಎಂಬ ಸತ್ಯವನ್ನು ಬಹಿರಂಗ ಪಡಿಸಬೇಕು, ಸ್ಥಳೀಯ ಸರ್ಕಾರ ಹಾಗೂ ಪೊಲೀಸ್ ಇಲಾಖೆಯ ಮೇಲಾಧಿಕಾರಿಗಳು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ವಿದ್ಯಾರ್ಥಿಯ ಸಾವಿಗೆ ಕಾರಣವಾಗಿರುವವರ ಮೇಲೆ ಕಾನೂನು ಕ್ರಮ ಜರುಗಿಸಿ ದಲಿತರ ಮಕ್ಕಳು ನಿರ್ಭಿತಿಯಿಂದ ವ್ಯಾಸಂಗ ಮಾಡಿ, ಸಮಾಜದಲ್ಲಿನ ಎಲ್ಲಾ ಸಮುದಾಯಗಳೊಟ್ಟಿಗೆ ಬದುಕಲು ಅವಕಾಶ ಮಾಡಿಕೊಡಬೇಕು ಎಂದು ಎಂದು ಒತ್ತಾಯಿಸಿದರು.
ಮನವಿ ಪತ್ರವನ್ನು ಸ್ವೀಕರಿಸಿದ ತಹಶೀಲ್ದಾರ್ ಕೆ.ಎಂ.ಮನೋರಮಾ ಮಾತನಾಡಿ, ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಕಳುಹಿಸಿಕೊಡಲಾಗುತ್ತದೆ ಎಂದರು.
ಜಿಲ್ಲಾ ಸಂಚಾಲಕ ಸಿ.ಎಂ.ಮುನಿಯಪ್ಪ, ತಾಲ್ಲೂಕು ಸಂಚಾಲಕರಾದ ಎನ್.ಎ.ವೆಂಕಟೇಶ್, ಲಕ್ಷ್ಮೀನಾರಾಯಣ, ಹುಜುಗೂರು ವೆಂಕಟೇಶ್, ಚಲಪತಿ, ಮುನಿರಾಜು, ಡಿ.ಎಂ.ವೆಂಕಟೇಶ್, ಮಟ್ಟಿನಾರಾಯಣಸ್ವಾಮಿ, ನರಸಿಂಹಪ್ಪ, ದೊಡ್ಡತಿರುಮಳಪ್ಪ, ಮುಂತಾದವರು ಹಾಜರಿದ್ದರು.
- Advertisement -
- Advertisement -
- Advertisement -
- Advertisement -