Home News ದೇಶ ನೋಡು ಕೋಶ ಓದು

ದೇಶ ನೋಡು ಕೋಶ ಓದು

0

‘ದೇಶ ನೋಡು ಕೋಶ ಓದು’ ಎಂಬ ನಾಣ್ಣುಡಿಯಂತೆ ವಿದ್ಯಾರ್ಥಿಗಳು ಕೈಗೊಳ್ಳುವ ಪ್ರವಾಸದ ಮೂಲಕ ತಮ್ಮ ಜ್ಞಾನ ಹೆಚ್ಚಿಸಿಕೊಳ್ಳುವಂತಾಗಲಿ ಎಂದು ಶಾಸಕ ಎಂ.ರಾಜಣ್ಣ ತಿಳಿಸಿದರು.
ನಗರದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಬುಧವಾರ ತಾಲ್ಲೂಕಿನ ಒಟ್ಟು ೧೪೫ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳ ಕರ್ನಾಟಕ ದರ್ಶನ ಪ್ರವಾಸಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ನಮ್ಮ ನಾಡು ಸಾಕಷ್ಟು ವೈವಿಧ್ಯತೆಯನ್ನು ಹೊಂದಿದೆ. ಐತಿಹಾಸಿಕ, ಸಾಂಸ್ಕೃತಿಕ, ನೈಸರ್ಗಿಕ, ವಿಭಿನ್ನ ಸಂಸ್ಕೃತಿಗಳ ತಾಣವಾಗಿದೆ. ವಿದ್ಯಾರ್ಥಿಗಳು ಪ್ರವಾಸವನ್ನು ಒಂದು ಅಧ್ಯಯನ ಪ್ರವಾಸ ಎಂದು ಪರಿಗಣಿಸಿ ತಾವು ನೋಡುವ ಚಾರಿತ್ರಿಕ ಹಾಗೂ ಪ್ರೇಕ್ಷಣೀಯ ಸ್ಥಳಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ತಮ್ಮ ಜ್ಞಾನ ಬಂಡಾರವನ್ನು ವಿಸ್ತರಿಸಿಕೊಳ್ಳಬೇಕು ಎಂದು ಹೇಳಿದರು.

ಶಿಡ್ಲಘಟ್ಟದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಬುಧವಾರ ತಾಲ್ಲೂಕಿನ ಒಟ್ಟು ೧೪೫ ಪ್ರೌಢಶಾಲೆ ವಿದ್ಯಾರ್ಥಿಗಳ ಕರ್ನಾಟಕ ದರ್ಶನ ಪ್ರವಾಸಕ್ಕೆ ಶಾಸಕ ಎಂ.ರಾಜಣ್ಣ ಚಾಲನೆ ನೀಡಿದರು.
ಶಿಡ್ಲಘಟ್ಟದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಬುಧವಾರ ತಾಲ್ಲೂಕಿನ ಒಟ್ಟು ೧೪೫ ಪ್ರೌಢಶಾಲೆ ವಿದ್ಯಾರ್ಥಿಗಳ ಕರ್ನಾಟಕ ದರ್ಶನ ಪ್ರವಾಸಕ್ಕೆ ಶಾಸಕ ಎಂ.ರಾಜಣ್ಣ ಚಾಲನೆ ನೀಡಿದರು.

ಪ್ರೌಢ ಶಾಲೆಯಲ್ಲಿ ಅಧ್ಯಯನ ಮಾಡುತ್ತಿರುವ ಕಡು ಬಡ ವಿದ್ಯಾರ್ಥಿಗಳಿಗೂ ಕರ್ನಾಟಕದ ಪ್ರಮುಖ ಐತಿಹಾಸಿಕ ಸ್ಥಳಗಳನ್ನು ಪರಿಚಯಿಸುವ ಉದ್ದೇಶದಿಂದ ಸರ್ಕಾರ ಕರ್ನಾಟಕ ದರ್ಶನ ಎಂಬ ವಿನೂತನ ಯೋಜನೆ ಪರಿಚಯಿಸಿದೆ. ಮಕ್ಕಳು ಆಯಾ ಸ್ಥಳಗಳಲ್ಲಿ ಪ್ರವಾಸಿ ಮಾರ್ಗದರ್ಶಿಗಳು ತಿಳಿಸುವ ವಿಷಯಗಳನ್ನು ತಿಳಿಯುತ್ತಾ ಪ್ರವಾಸವನ್ನು ಸಾರ್ಥಕಪಡಿಸಿಕೊಳ್ಳಿ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ರಘುನಾಥರೆಡ್ಡಿ ಮಾತನಾಡಿ, ತಾಲ್ಲೂಕಿನಿಂದ ಕರ್ನಾಟಕ ದರ್ಶನ ಪ್ರವಾಸಕ್ಕೆ ಈ ಭಾರಿ ೧೪೫ ಮಂದಿ ವಿದ್ಯಾರ್ಥಿಗಳು ಆಯ್ಕೆಯಾಗಿದ್ದು, ೯೫ ಬಾಲಕರು ಸೇರಿದಂತೆ ೫೦ ಬಾಲಕಿಯರು ಪ್ರವಾಸಕ್ಕೆ ತೆರಳುತ್ತಿದ್ದಾರೆ.
ಒಟ್ಟಾರೆ ಐದು ದಿನಗಳ ಪ್ರವಾಸ ಕಾರ್ಯಕ್ರಮದಲ್ಲಿ ಹಂಪಿ, ಹೊಸಪೇಟೆ, ವಿಜಯನಗರ, ಬಾದಾಮಿ, ಐಹೊಳೆ, ಪಟ್ಟದಕಲ್ಲು, ಬನಶಂಕರಿ, ಕೂಡಲಸಂಗಮ, ವಿಜಯಪುರ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿರುವ ಐತಿಹಾಸಿಕ ಸ್ಥಳಗಳನ್ನು ಪರಿಚಯಿಸಲಾಗುತ್ತದೆ ಎಂದು ವಿವರಿಸಿದರು.
ಪ್ರವಾಸ ಕೈಗೊಳ್ಳುವ ಮಕ್ಕಳಿಗೆ ಕರ್ನಾಟಕ ದರ್ಶನ ಎಂಬ ಲಾಂಛನವುಳ್ಳ ಟಿ-ಶರ್ಟ್ ಮತ್ತು ಟೋಪಿಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಶಿಕ್ಷಕರಾದ ಎಲ್.ವಿ.ವೆಂಕಟರೆಡ್ಡಿ, ಲಕ್ಷ್ಮಿನರಸೇಗೌಡ, ಮಂಜುನಾಥ, ಶ್ರೀನಿವಾಸ್ ಮತ್ತಿತರರು ಹಾಜರಿದ್ದರು.

error: Content is protected !!