ಭ್ರಷ್ಟಾಚಾರ, ಕಪ್ಪುಹಣ, ಅಕ್ರಮ ಹಣ ಸಾಗಣೆ, ಭಯೋತ್ಪಾದನೆ ಮತ್ತು ಭಯೋತ್ಪಾದಕರಿಗೆ ಆರ್ಥಿಕ ನೆರವು ಹಾಗೂ ನಕಲಿ ನೋಟುಗಳ ವಿರುದ್ಧದ ಹೋರಾಟಕ್ಕೆ ಶಕ್ತಿ ತುಂಬುವಂಥ ಐತಿಹಾಸಿಕ ಹೆಜ್ಜೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ಇಟ್ಟಿರುವುದು ವಿಶ್ವದಾದ್ಯಂತ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಮಂಜುನಾಥ್ ತಿಳಿಸಿದರು.
ನಗರದ ನಗರೇಶ್ವರ ಕಲ್ಯಾಣಮಂಟಪದಲ್ಲಿ ಸೋಮವಾರ ನಡೆದ ಬಿಜೆಪಿ ಶಿಡ್ಲಘಟ್ಟ ಮಂಡಲ ಕಾರ್ಯಕಾರಿಣಿ ಸಭೆಯಲ್ಲಿ ಅವರು ಮಾತನಾಡಿದರು.
ನಕಲಿ ನೋಟುಗಳ ವಿರುದ್ಧದ ಹೋರಾಟದಲ್ಲಿ ಶ್ರೀಸಾಮಾನ್ಯನ ಕೈಗಳು ಬಲಗೊಳ್ಳುತ್ತವೆ. ಮುಂದಿನ ದಿನಗಳಲ್ಲಿ ಚುನಾವಣೆಗಳಲ್ಲಿ ಕಪ್ಪುಹಣ ಚಲಾವಣೆ ನಿಲ್ಲುತ್ತದೆ. ಈ ದೃಷ್ಟಿಯಿಂದ ಪಕ್ಷವನ್ನು ಬಲಗೊಳಿಸಬೇಕಾದ ಕರ್ತವ್ಯ ಕಾರ್ಯಕರ್ತರದ್ದು ಎಂದು ವಿವರಿಸಿದರು.
ಬಿಜೆಪಿ ತಾಲ್ಲೂಕು ಅಧ್ಯಕ್ಷ ಬಿ.ಸಿ.ನಂದೀಶ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರು ದೇಶದ ಹಿತದೃಷ್ಟಿಯಿಂದ ತೆಗೆದುಕೊಳ್ಳುತ್ತಿರುವ ನಿರ್ಧಾರಗಳು ಬಿಜೆಪಿ ಪಕ್ಷಕ್ಕೆ ಆನೆ ಬಲ ತಂದಿದೆ. ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರಲ್ಲಿ ಅಭಿವೃದ್ಧಿ ಕಾರ್ಯಗಳ ಬಗ್ಗೆ ತಿಳಿಸುತ್ತಾ ಪಕ್ಷದ ಸಂಘಟನೆ ಮಾಡಬೇಕಿದೆ. ಜನರ ಬಳಿ ಹೋಗುವ ಮೂಲಕ ಮುಂದಿನ ದಿನಗಳಲ್ಲಿ ಪಕ್ಷವು ಪ್ರಕಾಶಮಾನವಾಗುವಂತೆ ಮಾಡುವ ಆಶಾಭಾವನೆಯನ್ನು ವ್ಯಕ್ತಪಡಿಸಿದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀರಾಮರೆಡ್ಡಿ, ಸುರೇಂದ್ರಗೌಡ, ಗೋಪಿನಾಥ್, ತಾಲ್ಲೂಕು ಪ್ರಧಾನ ಕಾರ್ಯದರ್ಶಿಗಳಾದ ಭಾಸ್ಕರರೆಡ್ಡಿ, ಮುನಿರಾಜು, ಮುಖಂಡರಾದ ದೊಣ್ಣಹಳ್ಳಿ ರಾಮಣ್ಣ, ರಮೇಶ್ ಬಾಯಿರಿ, ಕೆಂಪರೆಡ್ಡಿ, ಸುಜಾತಮ್ಮ, ಸದಾಶಿವ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
- Advertisement -
- Advertisement -
- Advertisement -