ನಗರಸಭೆ ಚುನಾವಣೆಯ ಹಿನ್ನೆಲೆಯಲ್ಲಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ಬಾಗೇಪಲ್ಲಿ ಹಾಗೂ ನಗರದ ಚುನಾವಣೆಯ ಮತಗಟ್ಟೆಗಳಲ್ಲಿ ಕಾರ್ಯನಿರ್ವಹಿಸಲಿರುವ ಅಧಿಕಾರಿಗಳಿಗೆ ಆಯೋಜಿಸಿದ್ದ ತರಬೇತಿ ಕಾರ್ಯಾಗಾರದಲ್ಲಿ ತಹಶೀಲ್ದಾರ್ ಎಸ್.ಅಜಿತ್‌ಕುಮಾರ್ ರೈ ಮಾತನಾಡಿದರು.
ನಗರಸಭೆ ಚುನಾವಣೆಯು ನಿರ್ಭೀತಿ ಹಾಗೂ ನಿಷ್ಪಕ್ಷಪಾತವಾಗಿ ನಡೆಯಲಿಕ್ಕೆ ಅಧಿಕಾರಿಗಳು ಬದ್ಧತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಅವರು ತಿಳಿಸಿದರು.
ಮತಗಟ್ಟೆಗೆ ಬರುವಂತಹ ಮತದಾರರ ಗುರುತಿನ ಚೀಟಿ, ಮತದಾರರ ಪಟ್ಟಿಯಲ್ಲಿನ ಹೆಸರು, ವಿಳಾಸದ ಕುರಿತು ಖಾತರಿ ಪಡಿಸಿಕೊಂಡ ನಂತರ ಮತದಾನಕ್ಕೆ ಅವಕಾಶ ಮಾಡಿಕೊಡಬೇಕು. ಮತದಾನ ಮಾಡಿದ ಮತದಾರ ಬೇರೆಡೆ ಮತದಾನ ಮಾಡದಂತೆ ತಡೆಯಲು ಬೆರಳಿಗೆ ಶಾಯಿ ಹಾಕಬೇಕು.
ಮತದಾರರು ಗೌಪ್ಯತೆಯಿಂದ ಮತದಾನ ಮಾಡಲಿಕ್ಕೆ ಸೂಕ್ತ ಬೆಳಕಿನ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ಮತಗಟ್ಟೆಗಳಲ್ಲಿ ಮೊಬೈಲ್‌ಗಳು ತರುವುದು, ತಾವು ಮಾಡಿದ ಮತದಾನವನ್ನು ಏಜೆಂಟರಿಗೆ ತೋರಿಸುವುದು ಅಥವಾ ಮೊಬೈಲ್‌ಗಳಲ್ಲಿ ಅದನ್ನು ಸೆರೆಹಿಡಿಯಲು ಅವಕಾಶ ಇಲ್ಲದಂತೆ ಜಾಗ್ರತೆ ವಹಿಸಬೇಕು ಎಂದರು.
ಸಹಾಯಕ ಚುನಾವಣಾ ಅಧಿಕಾರಿ ಶಿವಕುಮಾರ್, ಉಪನ್ಯಾಸಕ ಹಾಗೂ ಮುಖ್ಯ ತರಬೇತುದಾರ ಮುನಿರಾಜು ಹಾಜರಿದ್ದರು.
- Advertisement -
- Advertisement -
- Advertisement -