Home News ನಾಮಪತ್ರ ಸಲ್ಲಿಸಿದ ಮೇಲೂರು ಬಿ.ಎನ್‌.ರವಿಕುಮಾರ್‌

ನಾಮಪತ್ರ ಸಲ್ಲಿಸಿದ ಮೇಲೂರು ಬಿ.ಎನ್‌.ರವಿಕುಮಾರ್‌

0

ಮೇ ೧೨ ರಂದು ನಡೆಯಲಿರುವ ವಿಧಾನಸಭೆ ಚುನಾವಣೆಗೆ ಶುಕ್ರವಾರ ಶಿಡ್ಲಘಟ್ಟ ವಿಧಾನಸಭೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಮೇಲೂರು ಬಿ.ಎನ್‌.ರವಿಕುಮಾರ್‌ ನಾಮಪತ್ರವನ್ನು ಚುನಾವಣಾಧಿಕಾರಿ ಮಲ್ಲಿಕಾರ್ಜುನ್‌ರಿಗೆ ಸಲ್ಲಿಸಿದ್ದಾರೆ.
ಜೆಡಿಎಸ್‌ ಪಕ್ಷದಿಂದ ಹಾಲಿ ಶಾಸಕ ಎಂ.ರಾಜಣ್ಣ ಅವರಿಗೆ ಟಿಕೇಟ್‌ ಘೋಷಣೆಯಾದ್ದರಿಂದ ಬಂಡಾಯವೆದ್ದ ಮೇಲೂರು ಬಿ.ಎನ್‌.ರವಿಕುಮಾರ್‌ ಪಕ್ಷೇತರರಾಗಿ ಸ್ಪರ್ಧಿಸುತ್ತಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಎಲ್ಲಾ ನಿಷ್ಠಾವಂತ ಕಾರ್ಯಕರ್ತೆಉ, ಮುಖಂಡರು, ಯುವಕರು, ಮಾತೆಯರ ಒತ್ತಾಯ ಹಾಗೂ ಸೂಚನೆಯ ಮೇರೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರವನ್ನು ಸಲ್ಲಿಸಿದ್ದೇನೆ. ಚುನಾವಣೆಯಲ್ಲಿ ಕ್ಷೇತ್ರದ ಜನತೆ ಆಶೀರ್ವಾದ ಮಾಡಿ ಗೆಲ್ಲಿಸುವರೆಂಬ ನಂಬಿಕೆಯಿಂದ ಚುನಾವಣೆಯಲ್ಲಿ ಅಭ್ಯರ್ಥಿಯಾಗುತ್ತಿದ್ದೇನೆ’ ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಸದಸ್ಯ ಬಂಕ್‌ ಮುನಿಯಪ್ಪ, ಡಿಸಿಸಿ ಬ್ಯಾಂಕ್‌ ನಿರ್ದೇಶಕರಾದ ಪಿ.ವಿ.ನಾಗರಾಜ್‌, ಶಿವಾರೆಡ್ಡಿ, ಹುಜಗೂರು ರಾಮಣ್ಣ ಹಾಜರಿದ್ದರು.