ಕೇಂದ್ರ ಸರ್ಕಾರ, ೫೦೦ ಹಾಗೂ ೧೦೦೦ ರೂ ಮುಖಬೆಲೆಯ ನೋಟುಗಳನ್ನು ಅಮಾನ್ಯ ಮಾಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಉಂಟಾಗಿರುವ ಗೊಂದಲಗಳನ್ನು ನಿವಾರಣೆ ಮಾಡಿ, ನಗದು ರಹಿತ ವ್ಯವಹಾರವನ್ನು ಸಾಮಾನ್ಯ ಜನರು ನಡೆಸಬಹುದೆನ್ನುವ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುವಂತಹ ಸಂವಾದ ಕಾರ್ಯಕ್ರಮವನ್ನು ರಾಜ್ಯದಲ್ಲೆ ಮೊದಲ ಬಾರಿಗೆ ಶಿಡ್ಲಘಟ್ಟದಲ್ಲಿ ನಡೆಸಲಾಗುತ್ತಿದೆ ಎಂದು ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಭರತ್‌ರೆಡ್ಡಿ ಹೇಳಿದರು.
ನಗರದಲ್ಲಿ ಸೋಮವಾರ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನೋಟು ಬದಲು ದೇಶ ಮೊದಲು’ ಎಂಬ ಈ ಕಾರ್ಯಕ್ರಮದಲ್ಲಿ ಮುಂದಿನ ದಿನಗಳಲ್ಲಿ ಕಾರ್ಡುಗಳ ಮೂಲಕ ನಗದು ರಹಿತ ವ್ಯವಹಾರ ನಡೆಸುವುದರಿಂದ ಆಗಬಹುದಾದಂತಹ ಅನುಕೂಲಗಳ ಬಗ್ಗೆ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ನಾಗರಿಕರೊಂದಿಗೆ ಡಿಸೆಂಬರ್ 14 ರ ಬುಧವಾರ ಬೆಳಿಗ್ಗೆ ೧೦.೩೦. ಗಂಟೆಯಿಂದ ೧ ಗಂಟೆಯವರೆಗೆ ನಗರದ ವಾಸವಿ ಕಲ್ಯಾಣ ಮಂಟಪದಲ್ಲಿ ಸಂವಾದ ನಡೆಸಲಿದ್ದಾರೆ. ವರ್ತಕರು, ಹಾಲು ಉತ್ಪಾದಕರ ಸಹಕಾರ ಸಂಘಗಳ ಕಾರ್ಯದರ್ಶಿಗಳು, ಮಹಿಳಾ ಸ್ವ ಸಹಾಯ ಸಂಘಗಳ ಪದಾಧಿಕಾರಿಗಳು, ಬೀದಿ ಬದಿ ವ್ಯಾಪಾರಸ್ಥರು, ಸೇರಿದಂತೆ ಎಲ್ಲಾ ನಾಗರಿಕರು ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮಲ್ಲಿರುವ ಅನುಮಾನಗಳನ್ನು ಪರಿಹರಿಸಿಕೊಳ್ಳಬಹುದಾಗಿದೆ ಎಂದರು.
ಬಿಜೆಪಿ ತಾಲ್ಲೂಕು ಅಧ್ಯಕ್ಷ ಬಿ.ಸಿ.ನಂದೀಶ್, ರಾಜ್ಯ ಸಮಿತಿ ಸದಸ್ಯ ದಾಮೋದರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಂದ್ರಗೌಡ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ದೊಣ್ಣಹಳ್ಳಿ ರಾಮಣ್ಣ, ಯುವ ಮೋರ್ಚಾ ತಾಲ್ಲೂಕು ಅಧ್ಯಕ್ಷ ಬೈರಾರೆಡ್ಡಿ, ಪ್ರಧಾನ ಕಾರ್ಯದರ್ಶಿ ಕಿರಣ್, ತಾಲ್ಲೂಕು ಕಾರ್ಯದರ್ಶಿ ಬಾಸ್ಕರ್‌ರೆಡ್ಡಿ, ಮುನಿರಾಜು, ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ನರೇಶ್ ಮುಂತಾದವರು ಹಾಜರಿದ್ದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -







