ಪರಿಸರ ಮನುಷ್ಯನ ಅವಿಭಾಜ್ಯ ಅಂಗ. ಪರಿಸರವಿಲ್ಲದೆ ನಾವು ಬದುಕಲು ಸಾಧ್ಯವಿಲ್ಲ. ಹೀಗಾಗಿ ಪರಿಸರ ರಕ್ಷಣೆ ಮಾಡುವುದು ನಮ್ಮೆಲ್ಲರ ಹೊಣೆ ಎಂದು ಬಿಜೆಪಿ ತಾಲ್ಲೂಕು ಅಧ್ಯಕ್ಷ ಬಿ.ಸಿ.ನಂದೀಶ್ ತಿಳಿಸಿದರು.
ತಾಲ್ಲೂಕಿನ ವರದನಾಯಕನಹಳ್ಳಿ ಗೇಟ್ ಬಳಿಯ ಯೂನಿವರ್ಸಲ್ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ತಾಲ್ಲೂಕು ಬಿಜೆಪಿ ಘಟಕದ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಡೆದ ನೂರು ಗಿಡಗಳನ್ನು ನೆಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನಮ್ಮ ಮುಂದಿನ ಪೀಳಿಗೆಗೆ ಉತ್ತಮ ಪರಿಸರ ಒದಗಿಸುವ ನಿಟ್ಟಿನಲ್ಲಿ ಗಿಡ ಮರಗಳನ್ನು ಬೆಳೆಸುವುದು ಅನಿವಾರ್ಯವಾಗಿದೆ. ಹೀಗಾಗಿ ಹೆಚ್ಚೆಚ್ಚು ಗಿಡಮರಗಳನ್ನು ನೆಟ್ಟು ಪೋಷಿಸಬೇಕಾಗಿದೆ. ಮನುಷ್ಯ ಪರಿಸರ ನಾಶ ಮಾಡುತ್ತಿದ್ದಾನೆ. ಮನುಷ್ಯನ ದುರಾಸೆಗೆ ಪರಿಸರ ನಾಶವಾಗಿ ಮನುಕುಲ ವಿನಾಶದ ಅಂಚಿಗೆ ಬಂದು ನಿಂತಿದೆ. ಹೀಗಾಗಿ ಬರುವ ದಿನಗಳಲ್ಲಿ ಪರಿಸರದ ರಕ್ಷಣೆ ಮತ್ತು ಪರಿಸರದ ಬೆಳವಣಿಗೆಗೆ ನಾವೆಲ್ಲ ಮುಂದಾಗಬೇಕು ಎಂದು ಹೇಳಿದರು.
ಬಿಜೆಪಿ ಪಕ್ಷದ ಸುರೇಂದ್ರಗೌಡ, ಶ್ರೀರಾಮರೆಡ್ಡಿ, ಲೋಕೇಶ್‌ಗೌಡ, ದಾಮೋದರ್, ಬೈರಾರೆಡ್ಡಿ, ಕೃಷ್ಣಾರೆಡ್ಡಿ, ಪುರುಷೋತ್ತಮ್,ಶಿವಕುಮಾರಗೌಡ, ಮಂಜುಳಮ್ಮ ಹಾಜರಿದ್ದರು.
- Advertisement -
- Advertisement -
- Advertisement -