Home News ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬ ಆಚರಣೆ

ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬ ಆಚರಣೆ

0

ನಗರದ ಆಶಾಕಿರಣ ಅಂಧ ಮಕ್ಕಳ ಶಾಲೆಯಲ್ಲಿ ಸೋಮವಾರ ಅಂಧ ಮಕ್ಕಳೊಂದಿಗೆ ಕೇಕ್‌ ಕತ್ತರಿಸುವ ಮೂಲಕ ಬಿಜೆಪಿ ಯುವ ಮೋರ್ಚಾ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬ ಆಚರಣೆಯಲ್ಲಿ ಪಾಲ್ಗೊಂಡು ಬಿಜೆಪಿ ತಾಲ್ಲೂಕು ಮಂಡಲ ಅಧ್ಯಕ್ಷ ಬಿ.ಸಿ.ನಂದೀಶ್‌ ಮಾತನಾಡಿದರು.
ನಮ್ಮ ದೇಶದ ಘನತೆಯನ್ನು ವಿಶ್ವದಾದ್ಯಂತ ಹೆಚ್ಚಿಸಿದ ಕೀರ್ತಿ ಪ್ರಧಾನಿ ನರೇಂದ್ರ ಮೋದಿ ಅವರದ್ದು ಎಂದು ಅವರು ತಿಳಿಸಿದರು.
ಸಕ್ರಿಯ ಹಾಗೂ ಕ್ರಿಯಾಶೀಲ, ತನ್ಮಯತೆಯ, ಧ್ಯೇಯಹೊತ್ತ, ಸಾರ್ವಜನಿಕ ಜೀವನಕ್ಕೆ ತಮ್ಮನ್ನು ಮುಡಿಪಾಗಿಟ್ಟ ನಮ್ಮ ಪ್ರಧಾನಿ ನರೇಂದ್ರಮೋದಿ ಅವರು, ಇಂದು ದೇಶದ ಕೋಟ್ಯಾಂತರ ಜನತೆಯ ಆಶೋತ್ತರ ಹಾಗೂ ಅಪೇಕ್ಷೆಯ ಫಲವಾಗಿ ಜಾಗತಿಕ ಮಟ್ಟದಲ್ಲಿ ಮಿನುಗುತ್ತಿದ್ದಾರೆ ಎಂದು ಹೇಳಿದರು.
ಬಿಜೆಪಿ ಯುವ ಮೋರ್ಚಾ ವತಿಯಿಂದ ಆಶಾಕಿರಣ ಅಂಧ ಮಕ್ಕಳೊಂದಿಗೆ ಕೇಕ್‌ ಕತ್ತರಿಸಿ, ಮಕ್ಕಳಿಗೆ ಊಟ ನೀಡಲಾಯಿತು. ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು, ಬ್ರೆಡ್‌ ವಿತರಿಸಲಾಯಿತು.
ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಬಿ.ವೆಂಕಟೇಶ್‌, ಸುರೇಂದ್ರಗೌಡ, ದಾಮೋದರ್‌, ರವಿ, ಕೃಷ್ಣಾರೆಡ್ಡಿ, ಮುರಳಿ, ನಾರಾಯಣಸ್ವಾಮಿ, ಗೌತಮ್‌, ದೇವರಾಜ್‌ ಹಾಜರಿದ್ದರು.

error: Content is protected !!