25.1 C
Sidlaghatta
Sunday, August 14, 2022

ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

- Advertisement -
- Advertisement -

ಬೆಂಗಳೂರಿನಲ್ಲಿ ಗಣವೇಷಧಾರಿಯಾಗಿದ್ದ ಆರ್‌ಎಸ್‌ಎಸ್‌ ಕಾರ್ಯಕರ್ತ ರುದ್ರೇಶ ಅವರ ಕೊಲೆಯನ್ನು ಖಂಡಿಸಿ ತಾಲ್ಲೂಕು ಬಿಜೆಪಿ ಘಟಕದ ಸದಸ್ಯರು ಪ್ರತಿಭಟನಾ ಮೆರವಣಿಗೆಯನ್ನು ನಡೆಸಿ ತಹಶೀಲ್ದಾರರಿಗೆ ಅಪರಾಧಿಗಳನ್ನು ಬಂಧಿಸುವಂತೆ ಮನವಿಯನ್ನು ಸಲ್ಲಿಸಿದರು.
ಬೆಂಗಳೂರಿನ ಶಿವಾಜಿನಗರದಲ್ಲಿ ಆರ್‌ಎಸ್‌ಎಸ್‌ ಕಾರ್ಯಕರ್ತ ರುದ್ರೇಶ ಅವರನ್ನು ದುಷ್ಕರ್ಮಿಗಳು ಅಮಾನುಷವಾಗಿ ಕೊಲೆ ಮಾಡಿದ್ದಾರೆ. ನಮ್ಮ ರಾಜ್ಯ ಸರ್ಕಾರದ ಗುಪ್ತಚರ ಇಲಾಖೆಯು ನಿಷ್ಕ್ರಿಯವಾಗಿರುವುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಈ ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮವನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ನಗರದ ಬಸ್‌ನಿಲ್ದಾಣದ ಬಳಿ ಮಾನವ ಸರಪಣಿಯನ್ನು ನಿರ್ಮಿಸಿದ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ನಗರದ ಟಿ.ಬಿ.ರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆಯನ್ನು ನಡೆಇ ತಹಶೀಲ್ದಾರ್‌ ಮನೋರಮಾ ಅವರಿಗೆ ಮನವಿಯನ್ನು ಸಲ್ಲಿಸಿದರು.
ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಸಿ.ನಂದೀಶ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಂದ್ರಗೌಡ, ದಾಮೋದರ್‌, ಕೆಂಪರೆಡ್ಡಿ, ಬೈರಾರೆಡ್ಡಿ, ಸುಜಾತಮ್ಮ, ನಾಗರಾಜ್‌ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here