ಕೆಎಸ್‌ಆರ್‌ಟಿಸಿ ನೌಕರರು ವಿವಿಧ ಬೇಡಿಕೆಗಳ ಈಡೆರಿಕೆಗಾಗಿ ಒತ್ತಾಯಿಸಿ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ತಾಲ್ಲೂಕು ಬಿಜೆಪಿ ಪಕ್ಷದ ವತಿಯಿಂದ ಎರಡು ಖಾಸಗಿ ಬಸ್‌ಗಳನ್ನು ಸೋಮವಾರ ನಿಯೋಜಿಸುವ ಮೂಲಕ ಉಚಿತ ಸಾರಿಗೆ ವ್ಯವಸ್ಥೆಯನ್ನು ಮಾಡಲಾಯಿತು.
ರಾಜಾದ್ಯಾಂತ ಕೆಎಸ್‌ಆರ್‌ಟಿಸಿ ನೌಕರರು ವಿವಿಧ ಬೇಡಿಕೆಗಳ ಈಡೆರಿಕೆಗಾಗಿ ಒತ್ತಾಯಿಸಿ ಬಂದ್‌ಗೆ ಕರೆ ನೀಡಿರುವುದರಿಂದ ಸರ್ಕಾರಿ ಬಸ್ ನಿಲ್ದಾಣ ಬಸ್ಸುಗಳಿರದ ಕಾರಣ ಬಿಕೋ ಎನ್ನುತ್ತಿತ್ತು.
ಮುನ್ನೆಚ್ಚರಿಕ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದರಿಂದ ವಿದ್ಯಾರ್ಥಿಗಳು ಶಾಲೆಗಳತ್ತ ಸುಳಿಯಲಿಲ್ಲ, ಎಂದಿನಂತೆಯೇ ಸರ್ಕಾರಿ ಕಚೇರಿಗಳು ಕಾರ್ಯನಿರ್ವಹಿಸಿದವು.
ಸರ್ಕಾರಿ ಬಸ್‌ಗಳ ಸೌಲಭ್ಯಗಳು ಇಲ್ಲದ ಕಾರಣ ಸಾರ್ವಜನಿಕರು ಖಾಸಗಿ ಬಸ್‌ಗಳಲ್ಲಿ ಪ್ರಯಾಣಿಸಿದರು. ಬಂದ್ ಇರುವದರದ ಮಾಹಿತಿ ಇಲ್ಲದ ಕಾರಣ ಕೆಲ ಪ್ರಯಾಣಿಕರು ಬಸ್ ನಿಲ್ದಾಣದಲ್ಲಿ ಬಸ್‌ಗಾಗಿ ಕಾದು ಕುಳಿತಿದ್ದರು. ತಾಲ್ಲೂಕಿನ ಗ್ರಾಮೀಣ ಭಾಗಕ್ಕೆ ಹೋಗಿ ಬರಲು ಅನುಕೂಲವಾಗಲೆಂದು ಬಿಜೆಪಿ ಪಕ್ಷದ ವತಿಯಿಂದ ನಿಯೋಜಿಸಿದ್ದ ಬಸ್ಸು ಕೆಲವರಿಗೆ ಅನುಕೂಲವಾಗಿ ಪರಿಣಮಿಸಿತ್ತು.
ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಸಿ.ನಂದೀಶ್, ಪ್ರಧಾನ ಕಾರ್ಯದರ್ಶಿ ತರಬಳ್ಳಿ ಭಾಸ್ಕರರೆಡ್ಡಿ, ಪುರುಷೋತ್ತಮ್, ಖಂಡೇರಾವ್, ಮಧು, ಲೋಕೇಶ್, ಮಂಜುಳಮ್ಮ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -







