ಮುಂಬರುವ ವಿಧಾನಸಭೆ ಚುನಾವಣೆ ವೇಳೆಗೆ ತಾಲ್ಲೂಕಿನಲ್ಲಿ ಬಿಜೆಪಿ ಪಕ್ಷವನ್ನು ಸಂಘಟಿಸುವ ಮೂಲಕ ಕಾರ್ಯಕರ್ತರು ರಾಜ್ಯದಲ್ಲಿ ಬಿಜೆಪಿ ಅಧಿಕಾರ ಹಿಡಿಯಲು ಬೇಕಾದ ಎಲ್ಲಾ ಕಾರ್ಯಕ್ರಮಗಳನ್ನು ರೂಪಿಸಿಕೊಳ್ಳಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಮಂಜುನಾಥ್ ಹೇಳಿದರು.
ನಗರದ ನಗರೇಶ್ವರ ಕಲ್ಯಾಣಮಂಟಪದಲ್ಲಿ ಗುರುವಾರ ತಾಲ್ಲೂಕು ಬಿಜೆಪಿ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ದೇಶದ ಪ್ರಧಾನಿ ನರೇಂದ್ರಮೋದಿಯವರ ಉತ್ತಮ ಆಡಳಿತ ವೈಖರಿ ಸೇರಿದಂತೆ ದೇಶಾದ್ಯಂತ ಬಿಜೆಪಿ ಸರ್ಕಾರಗಳಿರುವ ರಾಜ್ಯಗಳಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ಮುಟ್ಟಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು. ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಜನರು ಅರಿತಿದ್ದು ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿಯೂ ಬಿಜೆಪಿ ಅಧಿಕಾರ ಹಿಡಿಯಲಿದೆ. ಆದ್ದರಿಂದ ಪ್ರತಿಯೊಬ್ಬರೂ ಪಕ್ಷ ಸಂಘಟನೆಗಾಗಿ ಹೆಚ್ಚು ಆಧ್ಯತೆ ನೀಡಬೇಕು ಎಂದರು.
ತಾಲ್ಲೂಕು ಅಧ್ಯಕ್ಷ ಬಿ.ಸಿ.ನಂದೀಶ್ ಮಾತನಾಡಿ ಕಾಂಗ್ರೆಸ್ ಹಾಗು ಜೆಡಿಎಸ್‌ನ ಬಗ್ಗೆ ಬೇಸತ್ತಿರುವ ಜನ ಈ ಭಾರಿ ಬಿಜೆಪಿ ಪಕ್ಷದ ಕಡೆ ಹೆಚ್ಚು ಒಲವು ತೋರಿಸುತ್ತಿದ್ದಾರೆ. ಹಾಗಾಗಿ ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತವಾಗಿದ್ದು ಕಾರ್ಯಕರ್ತರು ಪಕ್ಷದ ಸಂಘಟನೆಗಾಗಿ ಹೆಚ್ಚು ಒತ್ತು ನೀಡಬೇಕು ಎಂದರು.
ಕಾರ್ಯಕ್ರಮದಲ್ಲಿ ಮುಖಂಡರಾದ ತರಬಹಳ್ಳಿ ಭಾಸ್ಕರ್‌ರೆಡ್ಡಿ, ದಾಮೋದರ್, ಸುರೇಶ್, ದೊಣ್ಣಹಳ್ಳಿ ರಾಮಣ್ಣ ಮತ್ತಿತರರು ಹಾಜರಿದ್ದರು.
- Advertisement -
- Advertisement -
- Advertisement -