ಬಿಜೆಪಿ ಹಾಗೂ ರಾಷ್ಟ್ರೋತ್ಥಾನ ರಕ್ತನಿಧಿಯ ಸಹಯೋಗದಲ್ಲಿ ರಕ್ತದಾನ ಶಿಬಿರ

0
386

ಅಪಘಾತದಲ್ಲಿ ಗಾಯಗೊಂಡವರು ಮತ್ತು ಹಲವು ಬಗೆಯ ರೋಗಿಗಳಿಗೆ ತುರ್ತು ರಕ್ತ ಬೇಕಾಗುತ್ತದೆ. ರಕ್ತದ ಕೊರತೆಯನ್ನು ನೀಗಿಸುವಲ್ಲಿ ದಾನಿಗಳ ಪಾತ್ರ ದೊಡ್ಡದು ಎಂದು ಬಿಜೆಪಿ ತಾಲ್ಲೂಕು ಮಂಡಲ ಅಧ್ಯಕ್ಷ ಬಿ.ಸಿ.ನಂದೀಶ್ ತಿಳಿಸಿದರು.
ನಗರದ ಶ್ರೀ ನಗರೇಶ್ವರ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಹಾಗೂ ರಾಷ್ಟ್ರೋತ್ಥಾನ ರಕ್ತನಿಧಿಯ ಸಹಯೋಗದಲ್ಲಿ ಕ್ರಾಂತಿವೀರ ಚಂದ್ರಶೇಖರ್‌ಆಜಾದ್ ಮತ್ತು ಭಗತ್‌ಸಿಂಗ್ ಜನ್ಮದಿನಾಚರಣೆಯ ಸ್ಮರಣಾರ್ಥ ಶನಿವಾರ ಆಯೋಜಿಸಲಾಗಿದ್ದ ರಕ್ತದಾನ ಶಿಬಿರದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ರಕ್ತದ ಕೊರತೆಯಿಂದಾಗಿ ಅಪಾಯದಲ್ಲಿರುವ ಜನತೆಯನ್ನು ಉಳಿಸಲು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವಂತಹ ಗುಣವನ್ನು ಯುವಜನತೆ ರೂಡಿಸಿಕೊಳ್ಳಬೇಕು. ಅಪಘಾತಗಳಾಗಿ ಸಕಾಲದಲ್ಲಿ ರಕ್ತ ಸಿಗದೇ ಬಹಳಷ್ಟು ಮಂದಿ ಮೃತ ಪಡುವ ಸಾಧ್ಯತೆಯಿದ್ದು ಇಂತಹ ಪರಿಸ್ಥಿತಿ ತಪ್ಪಿಸುವ ಉದ್ದೇಶದಿಂದ ರಕ್ತದಾನ ಶಿಬಿರಗಳಲ್ಲಿ ರಕ್ತದಾನ ಮಾಡಬೇಕು. ಯುವಕರಲ್ಲಿ ರಾಷ್ಟ್ರಪ್ರೇಮ ಬೆಳಸುವುದು, ರಕ್ತ ಅವಶ್ಯಕವಿರುವವರಿಗೆ ಸಕಾಲದಲ್ಲಿ ರಕ್ತ ದೊರೆಯುವಂತೆ ಮಾಡುವ ಉದ್ದೇಶದಿಂದ ಬಿಜೆಪಿ ಪಕ್ಷದ ವತಿಯಿಂದ ಕಳೆದ ಐದು ವರ್ಷಗಳಿಂದ ನಿರಂತರವಾಗಿ ರಕ್ತದಾನ ಶಿಬಿರಗಳನ್ನು ಆಯೋಜನೆ ಮಾಡುತ್ತಿದೆ. ತಾಲ್ಲೂಕಿನ ಯುವಜನತೆಯಿಂದ ಉತ್ತಮವಾದ ಬೆಂಬಲ ವ್ಯಕ್ತವಾಗುತ್ತಿದೆ ಎಂದರು.
ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಕೆ.ಆರ್.ಸುರೇಂದ್ರಗೌಡ, ಮುಖಂಡರಾದ ದಾಮೋದರ್, ಸುಜಾತಮ್ಮ, ಮಂಜುಳಮ್ಮ, ನಗರಸಭೆ ಸದಸ್ಯ ಎಸ್.ರಾಘವೇಂದ್ರ, ತಾಲ್ಲೂಕು ಕಾರ್ಯದರ್ಶಿ ಶ್ರೀಧರ್ ಹಾಜರಿದ್ದರು.

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!