ಶಾಶ್ವತ ನೀರಾವರಿ ಯೋಜನೆ ಜಾರಿಯಾಗುವವರೆಗೆ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲ್ಲೂಕು ಅಧ್ಯಕ್ಷ ತಾದೂರು ಮಂಜುನಾಥ್ ತಿಳಿಸಿದರು.
ನಗರದ ಬಸ್ ನಿಲ್ದಾಣದಿಂದ ಶಾಶ್ವತ ನೀರಾವರಿ ಯೋಜನೆ ಜಾರಿ ಮಾಡುವಂತೆ ಒತ್ತಾಯಿಸಿ ಗುರುವಾರ ಬೆಂಗಳೂರಿಗೆ ತೆರಳಿದ ಬೈಕ್ ರ್ಯಾತಲಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ರೈತ ದೇಶದ ಬೆನ್ನೆಲುಬು ಎಂದು ಹೇಳುತ್ತಿರುವ ಸರ್ಕಾರ ರೈತರಿಗೆ ಮೋಸ ಮಾಡಲು ಹೊರಟಿದೆ ಎಂದು ಆರೋಪಿಸಿದ ಅವರು ಕೆಲವೇ ವರ್ಷಗಳ ಹಿಂದ ತುಂಬಿ ತುಳುಕುವ ಸಾವಿರಾರು ಕೆರೆಗಳನ್ನು ಹೊಂದಿದ್ದ, ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳು ಇಂದು ಅಂತರ್ಜಲ ಮಟ್ಟ ಕುಸಿದಿದೆ. ಕೆರೆ, ಕುಂಟೆ, ಬಾವಿಗಳು ಬತ್ತಿಹೋಗಿವೆ, ರಾಜಕಾಲುವೆಗಳು ಮಾಯವಾಗಿ, ಕೃಷಿ, ತೋಟಗಾರಿಕೆ ಮತ್ತು ಹೈನೊದ್ಯಮವು ಕ್ರಮೇಣ ಸಂಕಷ್ಟಕ್ಕೆ ಸಿಲುಕುತ್ತಿದೆ. ಶುದ್ದ ಕುಡಿಯುವ ನೀರಿಲ್ಲದೆ ಸಾವಿರಾರು ಅಡಿಯಿಂದ ಮೇಲಕ್ಕೆತ್ತಿದ ನೀರು ಫ್ಲೋರೈಡ್ ಯುಕ್ತವಾಗಿದ್ದು, ಅದರಿಂದ ಮಾರಣಾಂತಿಕ ಖಾಯಿಲೆಗಳಿಗೆ ಜನರು ತುತ್ತಾಗುತ್ತಿದ್ದಾರೆ. ಜನ ಸಾಮಾನ್ಯರು, ದುಡಿಯುವ ಕೈಗಳಿಗೆ ಉದ್ಯೋಗವಿಲ್ಲವಾಗಿದೆ. ವಲಸೆ ಹೋಗುತ್ತಿರುವ ಕೃಷಿ ಕಾರ್ಮಿಕರು, ಕೊಳವೆ ಬಾವಿಗಳ ವೈಫಲ್ಯವದಿಂದ ಸಾಲದ ಶೂಲಕ್ಕೆ ಸಿಲುಕುತ್ತಿರುವ ರೈತರು ಆತ್ಯಹತ್ಯೆ ಹಾದಿ ತುಳಿಯುತ್ತಿದ್ದಾರೆ ಎಂದು ಆಕ್ರೋಷ ವ್ಯಕ್ತಪಡಿಸಿದರು.
ಮುಂದಿನ ಪೀಳಿಗೆಯ ಉಳಿವಿಗಾಗಿ ಶಾಶ್ವತ ನೀರಾವರಿ ಯೋಜನೆ ಮಾಡಲೇಬೇಕಾದ ಪರಿಸ್ಥಿತಿ ಉಂಟಾಗಿದೆ. ನೀರಿನ ಬವಣೆ ನೀಗಿಸಲು ಶಾಶ್ವತ ನೀರಾವರಿ ಯೋಜನೆ ಜಾರಿ ಮಾಡಬೇಕೆಂದು ಒತ್ತಾಯಿಸಿದ ಅವರು ಅಂತರ್ಜಲ ಅಬಿವೃದ್ದಿಗಾಗಿ ರಾಜಕಾಲುವೆ, ಕೆರೆ, ಕುಂಟೆಗಳ ಪುನಃಶ್ಚೇತನಕ್ಕೆ ಒತ್ತು ನೀಡಿ ಜಲ ಮರುಪೂರಣ ಕಾರ್ಯಕ್ರಮಗಳನ್ನು ಮಾಡಬೇಕು ಎಂದು ತಿಳಿಸಿದರು.
ತಾಲ್ಲೂಕಿನಿಂದ ಹೊರಟ ಬೈಕ್ ರ್ಯಾಕಲಿಯಲ್ಲಿ ನೂರಾರು ರೈತರು ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ರೈತ ಸಂಘದ ಮುಂಖಡರಾದ ಎಸ್.ಎಂ.ನಾರಾಯಣಸ್ವಾಮಿ, ವೇಣುಗೋಪಾಲ್, ರಾಮಕೃಷ್ಣಪ್ಪ, ಮುನಿನಂಜಪ್ಪ, ನಾರಾಯಣಸ್ವಾಮಿ, ಅನಂತು ಹಾಜರಿದ್ದರು.
- Advertisement -
- Advertisement -
- Advertisement -







