ಆರೋಗ್ಯ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ನಗರದ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ 0-6 ವರ್ಷದ ಮಕ್ಕಳಿಗೆ ಆರೋಗ್ಯ ತಪಾಸಣೆ ನಡೆಸಲಾಯಿತು.
ತಾಲ್ಲೂಕಿನಾದ್ಯಂತ ಒಂದು ವಾರದ ಕಾಲ ಮಕ್ಕಳ ಆರೋಗ್ಯ ಶಿಬಿರಗಳನ್ನು ಆಯೋಜಿಸಲಾಗಿದ್ದು ಶನಿವಾರ ನಗರದ ಆರು ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ಆರೋಗ್ಯ ತಪಾಸಣೆ ನಡೆಸಲಾಯಿತು.
ಮಕ್ಕಳ ತೂಕ ಹಾಗೂ ಎತ್ತರ ಪರೀಕ್ಷೆ ನಡೆಸಿದ ವೈದ್ಯರು ಮಕ್ಕಳಿಗೆ ಸಕಾಲದಲ್ಲಿ ಲಸಿಕೆ ಹಾಕಿಸುವುದು ಸೇರಿದಂತೆ ಸೂಕ್ತ ಪ್ರಮಾಣದ ಪೌಷ್ಠಿಕ ಆಹಾರ ಸೇರಿದಂತೆ ಉತ್ತಮ ಪರಿಸರದಲ್ಲಿ ಬೆಳೆಸುವಂತೆ ಪೋಷಕರಿಗೆ ಮನವರಿಕೆ ಮಾಡಿಕೊಟ್ಟರು.
ಈ ಸಂದರ್ಭದಲ್ಲಿ ಆರ್‌ಬಿಎಸ್‌ಕೆ ವೈದ್ಯಾಧಿಕಾರಿಗಳಾದ ಡಾ.ವೈಶಾಲಿ, ರಾಘವೇಂದ್ರಶರ್ಮ, ಭರತ್ ಅಭಿಲಾಶ್, ಗುರು ಆರೋಗ್ಯ ಇಲಾಖೆಯ ಕಿರಿಯ ಶುಶ್ರೂಷಕಿ ವಿಜಯ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.