ಮಕ್ಕಳ ಪ್ರತಿಭೆಗಳನ್ನು ಪ್ರದರ್ಶಿಸುವ ಸಂದರ್ಭವೇ ಶಾಲಾ ವಾರ್ಷಿಕೋತ್ಸವ. ಮಕ್ಕಳು ಕೇವಲ ಅಂಕ ಗಳಿಕೆಗಷ್ಟೇ ಸೀಮಿತರಾಗದೆ ವಿವಿಧ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಅವರನ್ನು ಪ್ರೇರೇಪಿಸಬೇಕು ಎಂದು ನಿವೃತ್ತ ಶಿಕ್ಷಕ ಬಿ.ನಾರಾಯಣ್ ಅಭಿಪ್ರಾಯಪಟ್ಟರು.
ತಾಲ್ಲೂಕಿನ ಚೀಮಂಗಲ ಗ್ರಾಮದ ಕುವೆಂಪು ಶತಮಾನೋತ್ಸವ ಶಾಲೆಯಲ್ಲಿ ಸೋಮವಾರ ಸಂಜೆ ನಡೆದ ಶಾರದಾ ಪೂಜೆ ಮತ್ತು ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಗ್ರಾಮಾಂತರ ಪ್ರದೇಶದ ಶಾಲೆಗಳಲ್ಲಿ ಓದಿದ ಮಕ್ಕಳು ಪ್ರತಿಭಾ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉನ್ನತಶ್ರೇಣಿ ಪಡೆಯುತ್ತಿದ್ದು, ಇದಕ್ಕೆ ಶಿಕ್ಷಕರ ಪರಿಶ್ರಮ ಮತ್ತು ಪೋಷಕರ ಅಗತ್ಯ ಸಹಕಾರವೆ ಕಾರಣವಾಗಿದೆ. ವಿದ್ಯಾರ್ಥಿಗಳ ಶಿಕ್ಷಣದ ಜೀವನದಲ್ಲಿ ಪರಿಶ್ರಮ ಬಹಳ ಮುಖ್ಯವಾಗಿದ್ದು, ಪರಿಶ್ರಮದಿಂದ ಬಹಳಷ್ಟನ್ನು ಸಾಧಿಸಬಹುದು ಎಂದು ಹೇಳಿದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ವಿ.ಶ್ರೀರಾಮಯ್ಯ ಮಾತನಾಡಿ, ಸರ್ಕಾರಿ ಶಾಲೆಗಳು ಅಭಿವೃದ್ದಿ ಹೊಂದಬೇಕಾದರೆ ಪೋಷಕರು ಮತ್ತು ಸಮಾಜದ ಪಾತ್ರ ಬಹಳ ಮುಖ್ಯ. ಮಕ್ಕಳಲ್ಲಿನ ಪ್ರತಿಭೆಗಳಿಗೆ ನೀರೆರೆಯುವ ಕೆಲಸವಾಗಬೇಕು. ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಮಕ್ಕಳು ತಮ್ಮ ಉತ್ಸಾಹವನ್ನು ಇಮ್ಮಡಿಗೊಳಿಸಿಕೊಳ್ಳಬಹುದು ಎಂದು ಹೇಳಿದರು.
ಚೀಮಂಗಲ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಶಿವಶಂಕರ್, ಗ್ರಾಮದ ಹಿರಿಯ ಪಾರ್ಥಸಾರಥಿ ಮಾತನಾಡಿದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಕುವೆಂಪು ಶತಮಾನೋತ್ಸವ ಶಾಲೆಯ ಮುಖ್ಯ ಶಿಕ್ಷಕ ಸಿ.ಎಂ.ಮುನಿರಾಜು, ಎಸ್‌ಡಿಎಂಸಿ ಅಧ್ಯಕ್ಷ ಎಂ.ಮಂಜುನಾಥ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಳಿನ ಮಂಜುನಾಥ್, ಉಪಾಧ್ಯಕ್ಷ ಸಿ.ಎಂ.ನಾರಾಯಣಸ್ವಾಮಿ, ಸದಸ್ಯರಾದ ಸೌಮ್ಯ ಮಂಜುನಾಥ್, ಲಕ್ಷ್ಮೀನಾರಾಯಣ್, ಶ್ರೀನಿವಾಸ್, ಮುನಿರತ್ನಮ್ಮ, ವೆಂಕಟಲಕ್ಷ್ಮಮ್ಮ, ಶಾಮಲಮ್ಮ, ರಾಜಣ್ಣ, ಲಕ್ಷ್ಮಮ್ಮ, ಲೋಕೇಶ್, ದೇವರಾಜ್, ಮುನಿಕೃಷ್ಣಪ್ಪ, ಸುರೇಶ್, ಚೌಡಮ್ಮ, ಸಿಕಂದರ್ ಕಾರ್ಯಕ್ರಮದಲ್ಲಿ ಹಾಜರಿದ್ದರು.
- Advertisement -
- Advertisement -
- Advertisement -
- Advertisement -