ಪೂರ್ಣ ಪುಟ · Open full page
News

ಮಣ್ಣಿನ ಪರೀಕ್ಷೆ ಕಡ್ಡಾಯ

ಮಣ್ಣಿನ ಫಲವತ್ತತೆಯನ್ನು ಆಧರಿಸಿ ರಸಗೊಬ್ಬರಗಳನ್ನು ಬಳಸುವ ಮೂಲಕ ಅಧಿಕ ಇಳುವರಿಯನ್ನು ಪಡೆಯಬಹುದೆಂದು ಸಹಾಯಕ ಕೃಷಿ ನಿರ್ದೇಶಕ ದೇವೇಗೌಡ ತಿಳಿಸಿದರು.
ವಿಶ್ವ ಮಣ್ಣಿನ ದಿನದ ಅಂಗವಾಗಿ ನಗರದ ಸ್ತ್ರೀ ಶಕ್ತಿ ಭವನದಲ್ಲಿ ಕೃಷಿ ಇಲಾಖೆಯ ವತಿಯಿಂದ ಶನಿವಾರ ರೈತರಿಗೆ ಅರಿವು ಮೂಡಿಸುವ ಸಲುವಾಗಿ ನಡೆದ ‘ಮಣ್ಣಿನ ಆರೋಗ್ಯ ನಿರ್ವಹಣೆ ಮತ್ತು ಸುರಕ್ಷಿತ ಕೀಟನಾಶಕ ಬಳಕೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪ್ರತಿಯೊಬ್ಬ ರೈತರೂ ಮಣ್ಣಿನ ಪರೀಕ್ಷೆಯನ್ನು ಖಡ್ಡಾಯವಾಗಿ ಮಾಡಿಸಬೇಕು. ಮಣ್ಣಿನ ಪರೀಕ್ಷೆಯ ಅಂಕಿ ಅಂಶಗಳನ್ನು ಗಣಕೀಕೃತಗೊಳಿಸಲಾಗುತ್ತದೆ. ಇದರಿಂದ ರೈತರು ಯಾವ ಬೆಳೆ ಬೆಳೆಯಬಹುದು, ಅದಕ್ಕೆ ಬೇಕಾಗುವ ಪೌಷ್ಠಿಕಾಂಶಗಳೇನು ಮತ್ತು ಕಾಲಾನುಕ್ರಮದಲ್ಲಿ ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸುವ ಕ್ರಮಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳಬಹುದು. ಮಣ್ಣಿನ ಪರೀಕ್ಷೆಯ ಸಲುವಾಗಿ ಅಧಿಕಾರಿಗಳು ರೈತರ ಭೂಮಿಗಳಿಗೆ ಭೇಟಿ ನೀಡಲಿದ್ದು ಸಹಕರಿಸಬೇಕೆಂದು ಹೇಳಿದರು.
ಕೃಷಿ ಇಲಾಖೆಯಿಂದ ಯಾವುದೇ ಪ್ರಯೋಜನವನ್ನು ಹೊಂದಲು ಮಣ್ಣಿನ ಪರೀಕ್ಷೆ ಖಡ್ಡಾಯವಾಗಿದೆ. ಬೆಳೆಯಿದ್ದಾಗ ಪರೀಕ್ಷೆಗೆ ಮಣ್ಣಿನ ಸಂಗ್ರಹಣೆ ಮಾಡಬಾರದು. ತಿಪ್ಪೆಗೊಬ್ಬರವಿರುವೆಡೆ, ಕಳೆಗಳಿರುವ ಜಾಗದಲ್ಲೂ ಮಾಡಬಾರದು. ಬೆಳೆ ಕಟಾವು ಮಾಡಿದ ನಂತರ ಮಣ್ಣಿನ ಪರೀಕ್ಷೆಯನ್ನು ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ಸುರಕ್ಷಿತ ಕೀಟ ನಾಶಕಗಳ ಬಳಕೆ ಹಾಗೂ ಪರಿಸರ ಮಾಲಿನ್ಯ ತಡೆಗಟ್ಟುವಿಕೆಯ ಬಗ್ಗೆಯೂ ರೈತರಿಗೆ ಮಾಹಿತಿಯನ್ನು ನೀಡಲಾಯಿತು.
ರೇಷ್ಮೆ ಸಹಾಯಕ ನಿರ್ದೇಶಕ ಚಂದ್ರಪ್ಪ, ಪ್ರಗತಿಪರ ರೈತ ಹಿತ್ತಲಹಳ್ಳಿ ಗೋಪಾಲಗೌಡ, ರೈತ ಸಂಘದ ತಾಲ್ಲೂಕು ಅಧ್ಯಕ್ಷರಾದ ರವಿಪ್ರಕಾಶ್, ತಾದೂರು ಮಂಜುನಾಥ್, ಪ್ರತೀಶ್ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.

📰 ಇದನ್ನೂ ಓದಿ

News

ಮಹಿಳೆಯರು ಆರ್ಥಿಕವಾಗಿ ಸದೃಢರಾದರೆ ಇಡೀ ಕುಟುಂಬವೇ ಆರ್ಥಿಕ ಪ್ರಗತಿಯನ್ನು ಸಾಧಿಸಿದಂತೆ

ಮಹಿಳೆಯರು ಸುಶಿಕ್ಷಿತರಾದರೆ ಇಡೀ ಕುಟುಂಬವೇ ಸುಶಿಕ್ಷಿತರಾದಂತೆ ಎಂಬ ಮಾತಿನ ಮುಂದುವರಿಕೆಯಾಗಿ ಮಹಿಳೆಯರು ಆರ್ಥಿಕವಾಗಿ ಸದೃಢರಾದರೆ ಇಡೀ ಕುಟುಂಬವೇ ಆರ್ಥಿಕ ಪ್ರಗತಿಯನ್ನು ಸಾಧಿಸಿದಂತೆ ಎಂದು ಶಾಸಕ…

News

ಆಹಾರ ಇಲಾಖೆಯ ಅಧಿಕಾರಿ ವಿರುದ್ಧ ರೈತರ ಪ್ರತಿಭಟನೆ

ತಾಲ್ಲೂಕಿನ ಆಹಾರ ಇಲಾಖೆಯ ಅಧಿಕಾರಿ ರೈತನೊಂದಿಗೆ ಅವಾಚ್ಯ ಶಬ್ಧ ಬಳಸಿ ಮಾತನಾಡಿರುವುದರಿಂದ ಅವರನ್ನು ತಕ್ಷಣ ಸೇವೆಯಿಂದ ಅಮಾನತ್ತುಗೊಳಿಸಬೇಕೆಂದು ರೈತಸಂಘದ ಪದಾಧಿಕಾರಿಗಳು ಮಂಗಳವಾರ ತಾಲ್ಲೂಕು ಕಚೇರಿಯ…

News

ವಿದ್ಯುತ್ ಶಾಕ್ ನಿಂದ ಅಸ್ವಸ್ಥಗೊಂಡ ಲೈನ್ಮನ್

ಟ್ರಾನ್ಸ್ ಫಾರ್ಮರ್ನಲ್ಲಿ ವಿದ್ಯುತ್ ಶಾಕ್ ಹೊಡೆದ ಪರಿಣಾಮ ಅಸ್ವಸ್ಥಗೊಂಡ ಲೈನ್ಮನ್ನನ್ನು ಆಸ್ಪತ್ರೆಗೆ ಸಾಗಿಸಿದ ಘಟನೆ ಶುಕ್ರವಾರ ನಡೆದಿದೆ. ನಗರದ ಹೊರವಲಯದ ಹಂಡಿಗನಾಳ ಬಳಿ ಅಮ್ಮನಕೆರೆ…

News

ಕನ್ನಮಂಗಲ ಶಾಲೆಯಲ್ಲಿ ಆರ್.ಟಿ.ಇ ದಿನಾಚರಣೆ

ಆರ್.ಟಿ.ಇ ಕಾರ್ಯಪಡೆ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಜಂಟಿಯಾಗಿ ಆರ್.ಟಿ.ಇ ದಿನಾಚರಣೆಯನ್ನು ಮಾರ್ಚ್ 31 ರ ಗುರುವಾರದಂದು ತಾಲ್ಲೂಕಿನ ಕನ್ನಮಂಗಲ ಸರ್ಕಾರಿ ಹಿರಿಯ ಪ್ರಾಥಮಿಕ…

📸 ನಿಮ್ಮ ಊರಿನ ಸುದ್ದಿ ಇದೆಯೇ?

ಫೋಟೋ ಸಮೇತ ಕಳುಹಿಸಿ

💬 Send news📢 Daily updates: join our WhatsApp channel
Exit mobile version