ಕ್ಷೇತ್ರದ ಯಾರೊಬ್ಬರೂ ಮತದಾನದಿಂದ ದೂರವುಳಿಯಬಾರದು, ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಶೇ ೧೦೦ ರಷ್ಟು ಮತದಾನವಾಗಬೇಕು ಎಂಬ ನಿಟ್ಟಿನಲ್ಲಿ ಮತದಾನ ಜಾಗೃತಿ ರಥದ ಮೂಲಕ ಜನರಲ್ಲಿ ಮನವರಿಕೆ ಮಾಡಿಕೊಡಲಾಗುವುದು ಎಂದು ತಾಲ್ಲೂಕು ಪಂಚಾಯಿತಿ ಇಓ, ಸ್ವೀಪ್ ಸಮಿತಿ ಅಧ್ಯಕ್ಷ ಬಿ.ಶಿವಕುಮಾರ್ ಹೇಳಿದರು.
ನಗರದ ತಾಲ್ಲೂಕು ಕಚೇರಿಯ ಮುಂಭಾಗದಲ್ಲಿ ಸೋಮವಾರ ಮತದಾನ ಜಾಗೃತಿ ರಥಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
೨೦೧೯ ನೇ ಸಾಲಿನ ಲೋಕಸಭೆ ಚುನಾವಣೆಯಲ್ಲಿ ಕ್ಷೇತ್ರಾದ್ಯಂತ ಸಂಚರಿಸುವ ಮತದಾನ ರಥ ಜನರಲ್ಲಿ ಮತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುತ್ತದೆ.
ಸಹಾಯಕ ಚುನಾವಣಾಧಿಕಾರಿ ಶಿವಕುಮಾರ್, ತಹಶೀಲ್ದಾರ್ ಎಸ್.ಅಜಿತ್‌ಕುಮಾರ್ ರೈ, ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಸಿ.ಎಸ್.ಶ್ರೀನಾಥಗೌಡ ಹಾಜರಿದ್ದರು