ರೈತರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರದೊಂದಿಗೆ ರಾಜೀವ್‌ಗಾಂಧಿ ಪಂಚಾಯತ್‌ರಾಜ್ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷೆ ಮೀನಾಕ್ಷಿ ನಟರಾಜನ್ ಮಾತುಕತೆಗೆ ಮುಂದಾದಾಗ ಅವರನ್ನು ಬಂಧಿಸಿ ಅವಮಾನಿಸಲಾಗಿದೆ. ಈ ಕೃತ್ಯವನ್ನು ಖಂಡಿಸಿ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ರಾಷ್ಟ್ರಪತಿಗಳಿಗೆ ತಹಶೀಲ್ದಾರರ ಮೂಲಕ ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ರಾಜೀವ್‌ಗಾಂಧಿ ಪಂಚಾಯತ್‌ರಾಜ್ ಸಂಘಟನೆಯ ಮುಖಂಡರು ಗುರುವಾರ ಮನವಿ ಸಲ್ಲಿಸಿದರು.
ದೇಶದ ಬೆನ್ನೆಲುಬು ರೈತರು. ಬೆವರು ಸುರಿಸಿ ದುಡಿದು ಅನ್ನ ನೀಡುವ ರೈತರು ವಿವಿಧ ಅಗತ್ಯ ಬೇಡಿಕೆಗಾಗಿ ಒತ್ತಾಯಿಸಿ ಮಧ್ಯಪ್ರದೇಶದ ಸರ್ಕಾರವನ್ನು ಒತ್ತಾಯಿಸಿ ಪ್ರತಿಭಟಿಸುತ್ತಿದ್ದರು. ಸಂವಿಧಾನಾತ್ಮಕ, ಶಾಂತಿಯುತ ಹಕ್ಕುಗಳ ಹೋರಾಟವನ್ನು ಹತ್ತಿಕ್ಕಲು ಮಧ್ಯಪ್ರದೇಶ ಸರ್ಕಾರವು ಅಮಾನವೀಯವಾಗಿ ರೈತರ ಮೇಲೆ ದೌರ್ಜನ್ಯ ನಡೆಸಿ ಆರು ಮಂದಿ ರೈತರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಈ ಅಮಾನವೀಯ ಕೃತ್ಯವನ್ನು ಖಂಡಿಸಿ, ರೈತರಿಗೆ ದ್ರೋಹವೆಸಗಿದ ಮಧ್ಯಪ್ರದೇಶ ಸರ್ಕಾರದೊಂದಿಗೆ ಮಾತುಕತೆಗೆ ಮುಂದಾದ ರಾಜೀವ್‌ಗಾಂಧಿ ಪಂಚಾಯತ್‌ರಾಜ್ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷೆ ಮೀನಾಕ್ಷಿ ನಟರಾಜನ್ ಅವರನ್ನು ಬಂಧಿಸಿ ಅವಮಾನಿಸಿರುವುದು ಖಂಡನೀಯ. ಮಧ್ಯಪ್ರದೇಶ ಸರ್ಕಾರದ ಮೇಲೆ ಕ್ರಮ ಕೈಗೊಳ್ಳಬೇಕು. ರೈತರ ಹಕ್ಕುಗಳಿಗೆ ಬೆಲೆ ಸಿಗಬೇಕು. ಸಂವಿಧಾನಾತ್ಮಕ ಹೋರಾಟವನ್ನು ದಮನ ಮಾಡುವವರನ್ನು ತಡೆಯಬೇಕು ಎಂದು ಮನವಿಯನ್ನು ತಹಶೀಲ್ದಾರ್ ಅಜಿತ್‌ಕುಮಾರ್ ರೈ ಅವರಿಗೆ ಸಲ್ಲಿಸಿದರು.
ರಾಜೀವ್‌ಗಾಂಧಿ ಪಂಚಾಯತ್‌ರಾಜ್ ಸಂಘಟನೆಯ ಜಿಲ್ಲಾ ಸಂಚಾಲಕ ಎನ್.ಆರ್.ನಿರಂಜನ್, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮುನಿಕೃಷ್ಣಪ್ಪ, ಕೆ.ಸುಬ್ರಮಣ್ಯ, ತಾಲ್ಲೂಕು ಪಂಚಾಯ್ತಿ ಸದಸ್ಯರಾದ ಪಂಕಜಾ ನಿರಂಜನ್, ಶೋಭಾ, ನರಸಿಂಹಪ್ಪ, ವಹೀದಾ ಬೇಗಮ್, ಶ್ರೀನಿವಾಸ್, ನಾಗರಾಜ್, ನಗರಸಭೆ ಸದಸ್ಯ ಬಾಲಕೃಷ್ಣ, ರಾಮಚಂದ್ರಪ್ಪ, ಕ್ಯಾತಪ್ಪ, ಚಿಕ್ಕಮುನಿಯಪ್ಪ ಹಾಜರಿದ್ದರು.
- Advertisement -
- Advertisement -
- Advertisement -