Home News ಮಲತಾಯಿ ಧೊರಣೆ

ಮಲತಾಯಿ ಧೊರಣೆ

0

ಬಯಲುಸೀಮೆ ಭಾಗದ ರೈತರ ಸಮಸ್ಯೆಗಳ ಬಗ್ಗೆ ಕೇಂದ್ರ ಹಾಗು ರಾಜ್ಯ ಸರ್ಕಾರಗಳೆರಡೂ ತಾರತಮ್ಯ ನೀತಿ ಅನುಸರಿಸುತ್ತಿದೆ. ಈ ಭಾಗದÀ ರೈತರನ್ನು ಮಲತಾಯಿ ಮಕ್ಕಳಂತೆ ನೋಡುತ್ತಿರುವ ರಾಜ್ಯ ಹಾಗು ಕೇಂದ್ರ ಸರ್ಕಾರ ತಮ್ಮ ವರ್ತನೆಯನ್ನು ತಿದ್ದಿಕೊಳ್ಳಬೇಕು ಎಂದು ರಾಜ್ಯ ರೈತ ಸಂಘ ಹಾಗು ಹಸಿರುಸೇನೆ ಜಿಲ್ಲಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ ಹೇಳಿದರು.
ತಾಲೂಕಿನ ಗ್ರಾಮೀಣ ಪ್ರದೇಶÀ ಹಾಗು ರೈತರಿಗೆ ಸಮರ್ಪಕ ವಿದ್ಯುತ್ ಪೂರೈಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರುಸೇನೆ ತಾಲೂಕು ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಬೆಸ್ಕಾಂ ಕಛೇರಿ ಮುತ್ತಿಗೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಕಳೆದ ಏಳು ವರ್ಷಗಳಿಂದ ಸತತ ಬರಗಾಲ ಅನುಭವಿಸುತ್ತಿರುವ ಜಿಲ್ಲೆಯ ರೈತ ಕೊಳವೆಬಾವಿಗಳಿಂದ ತೆಗೆದ ನೀರಿನಿಂದ ಬೆಳೆದ ಬೆಳೆಗಳು ವಿದ್ಯುತ್ ಸಮಸ್ಯೆಯಿಂದ ಸಂಪೂರ್ಣ ಒಣಗಿಹೋಗಿ ಹಾಳಾಗಿರುವುದರಿಂದ ರೈತ ಬೀದಿಗೆ ಬರುವ ಸ್ಥಿತಿ ನಿರ್ಮಾಣವಾಗಿದೆ.
ಇನ್ನು ಮಾನ್ಯ ಇಂಧನ ಸಚಿವರು ಕೃಷಿ ಪಂಪ್ ಸೆಟ್ಟುಗಳಿಗೆ ಯಾವುದೇ ಕಾರಣಕ್ಕೂ ಹಗಲಿನಲ್ಲಿ ವಿದ್ಯುತ್ ನೀಡುವುದಿಲ್ಲ ರಾತ್ರಿ ಹತ್ತು ಗಂಟೆಯ ನಂತರ ಕೃಷಿಗೆ ವಿದ್ಯುತ್ ನೀಡುವುದಾಗಿ ಹೇಳಿರುವ ಹೇಳಿಕೆ ಕೂಡಲೇ ವಾಪಸ್ ಪಡೆಯಬೇಕು ಇಲ್ಲವಾದಲ್ಲಿ ರಾಜ್ಯಾಧ್ಯಂತ ರೈತರು ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದರು.

ತಾಲೂಕಿನ ಗ್ರಾಮೀಣ ಪ್ರದೇಶÀ ಹಾಗು ರೈತರಿಗೆ ಸಮರ್ಪಕ ವಿದ್ಯುತ್ ಪೂರೈಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರುಸೇನೆ ತಾಲೂಕು ಘಟಕದ ಪದಾಧಿಕಾರಿಗಳು ಹಮ್ಮಿಕೊಂಡಿದ್ದ ಬೆಸ್ಕಾಂ ಕಛೇರಿ ಮುತ್ತಿಗೆ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ ಮಾತನಾಡಿದರು.
ತಾಲೂಕಿನ ಗ್ರಾಮೀಣ ಪ್ರದೇಶÀ ಹಾಗು ರೈತರಿಗೆ ಸಮರ್ಪಕ ವಿದ್ಯುತ್ ಪೂರೈಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರುಸೇನೆ ತಾಲೂಕು ಘಟಕದ ಪದಾಧಿಕಾರಿಗಳು ಹಮ್ಮಿಕೊಂಡಿದ್ದ ಬೆಸ್ಕಾಂ ಕಛೇರಿ ಮುತ್ತಿಗೆ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ ಮಾತನಾಡಿದರು.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನವೊಂದಕ್ಕೆ 3-4 ತಾಸು ವಿದ್ಯುತ್ ಕಡಿತಗೊಳಿಸದರೆ ಬಯಲುಸೀಮೆ ಭಾಗದ ರೈತರಿಗೆ ಬೇಕಾಗುವಷ್ಟು ವಿದ್ಯುತ್ ಪೂರೈಸಬಹುದು ಆದರೆ ಸರ್ಕಾರ ಈ ಬಗ್ಗೆ ಚಿಂತನೆ ನಡೆಸುವುದನ್ನು ಬಿಟ್ಟು ದೇಶದ ಬೆನ್ನೆಲುಬಾಗಿರುವ ರೈತನಿಗೆ ನೀಡುವ ವಿದ್ಯುತ್ ಕಡಿತಗೊಳಿಸಿ ರೈತನ ಬೆನ್ನು ಮೂಳೆ ಮುರಿಯುವ ಕೆಲಸಕ್ಕೆ ಮುಂದಾಗಿದೆ ಎಂದರು.
ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಎಸ್.ಎಂ. ನಾರಾಯಣಸ್ವಾಮಿ ಮಾತನಾಡಿ ಈ ಭಾಗದ ರೈತರು ಬದುಕಲು ಕೊಳವೆಬಾವಿಗಳನ್ನೇ ಅವಲಂಬಿಸಿ ಬದುಕು ನಡೆಸುವ ಮೂಲಕ ಕೊಳವೆ ಬಾವಿಯಲ್ಲಿ ಬರುವ ಅಲ್ಪ ಸ್ವಲ್ಪ ನೀರಿನಿಂದಲೇ ಇಡೀ ದೇಶಕ್ಕೆ ಹಾಲು, ತರಕಾರಿ, ಹಣ್ಣು ಸೇರಿದಂತೆ ರೇಷ್ಮೆ ಬೆಳೆದು ನೀಡುತ್ತಿದ್ದರೂ ಬೆಸ್ಕಾಂ ಇಲಾಖೆ ನೀಡುತ್ತಿರುವ ವಿದ್ಯುತ್ ಕಣ್ಣಾ ಮುಚ್ಚಾಲೆಯಿಂದ ಬೆಳೆದ ಎಲ್ಲಾ ಬೆಳೆಗಳು ನಾಶವಾಗುತ್ತಿರುವುದಷ್ಟೇ ಅಲ್ಲದೇ ಲಕ್ಷಾಂತರ ರೂ ವೆಚ್ಚ ಮಾಡಿ ಕೊರೆಸಿರುವ ಕೊಳವೆಬಾವಿಯ ಮೋಟರ್ ಪಂಪುಗಳು ಸುಟ್ಟು ಹೋಗುವುದರಿಂದ ರೈತ ಇನ್ನಷ್ಟು ಆರ್ಥಿಕವಾಗಿ ಕುಸಿಯುತ್ತಿದ್ದಾನೆ ಎಂದರು.
ರೈತರಿಗೆ ಹಗಲಿನಲ್ಲಿ ಕನಿಷ್ಟ 10 ಗಂಟೆಗಳ ಕಾಲ ತ್ರಿಫೇಸ್ ವಿದ್ಯುತ್ ಹಾಗು ಸಂಜೆ 06 ರಿಂದ ಬೆಳಗ್ಗೆ 06 ರವರೆಗೂ ಸಿಂಗಲ್ ಫೇಸ್ ವಿದ್ಯುತ್ ನೀಡಬೇಕು. ರೇಷ್ಮೆ ನೂಲು ಬಿಚ್ಚುವ ಘಟಕಗಳು ಸೇರಿದಂತೆ ರೇಷ್ಮೆ ಹುರಿ ಮಾಡುವ ಘಟಕಗಳಿಗೆ ಅನುಕೂಲವಾಗುವಂತೆ ನಗರದಲ್ಲಿ ನಿರಂತರ ವಿದ್ಯುತ್ ಸರಬರಾಜು ಮಾಡಬೇಕು. ರೈತರ ವಿದ್ಯುತ್ ಪರಿವರ್ತಕಗಳು ಸುಟ್ಟುಹೋದ 24 ಗಂÀಟೆಗಳೊಳಗೆ ದುರಸ್ತಿ ಮಾಡಿಸುವುದು ತಪ್ಪಿದಲ್ಲಿ ರೈತನಿಗಾಗುವ ನಷ್ಟ ಭರಿಸಬೇಕು ಎಂದು ಒತ್ತಾಯಿಸಿದರು.
ಬೆಸ್ಕಾಂ ಇಲಾಖೆಯ ಗ್ರಾಮಾಂತರ ಎಇಇ ಅನ್ವರ್‍ಪಾಷ ಹಾಗು ಚಿಂತಾಮಣಿ ಇಇ ದತ್ತಾತ್ರೇಯ ಪ್ರತಿಭಟನಾಕಾರರನ್ನು ಸಮಾಧಾನ ಪಡಿಸಲೆತ್ನಿಸಿದರಾದರೂ ಸಮಾಧಾನಗೊಳ್ಳದ ಪ್ರತಿಭಟನಾಕಾರರು ಮೇಲಾಧಿಕಾರಿಗಳು ಸ್ಥಳಕ್ಕೆ ಬರಬೇಕು ಎಂದು ಪಟ್ಟುಹಿಡಿದರು.
ನಂತರ ಸ್ಥಳಕ್ಕೆ ಕೋಲಾರ ವಿಭಾಗದ ಅಧೀಕ್ಷಕ ಅಭಿಯಂತರ ಪ್ರಸನ್ನ ಭೇಟಿ ನೀಡಿ ಪ್ರತಿಭಟನಾಕಾರರ ಬೇಡಿಕೆಗಳನ್ನು ಆಲಿಸಿ ಕೂಡಲೇ ಈ ಬಗ್ಗೆ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕರಿಗೆ ಮಾಹಿತಿ ನೀಡುವುದರೊಂದಿಗೆ ಈ ಭಾಗದ ರೈತರಿಗೆ ಸಕಾರಾತ್ಮಕವಾಗಿ ವಿದ್ಯುತ್ ಪೂರೈಸಲು ಬೇಕಾದ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರುಸೇನೆ ತಾಲೂಕು ಘಟಕದ ಪದಾಧಿಕಾರಿಗಳು ಹಮ್ಮಿಕೊಂಡಿದ್ದ ಬೆಸ್ಕಾಂ ಕಛೆರಿ ಮುತ್ತಿಗೆ ಕಾರ್ಯಕ್ರಮದಲ್ಲಿ ಕಛೇರಿಯ ಆವರಣದಲ್ಲಿ ಅಡುಗೆ ತಯಾರಿಸುತ್ತಿರುವ ರೈತ ಮುಖಂಡರು.

ತಾಲೂಕು ಅಧ್ಯಕ್ಷ ತಾದೂರು ಮಂಜುನಾಥ್, ಗೌರವಾಧ್ಯಕ್ಷ ಎಸ್.ಎಂ. ನಾರಾಯಣಸ್ವಾಮಿ, ರಾಮಕೃಷ್ಣಪ್ಪ, ವೇಣು, ರಾಮಚಂದ್ರಪ್ಪ, ನಗರ ಘಟಕದ ಅಧ್ಯಕ್ಷ ಬಿ. ನಾರಾಯಣಸ್ವಾಮಿ, ಅಬ್ಲೂಡು ದೇವರಾಜ್, ಅಶ್ವತ್ಥಪ್ಪ, ದ್ಯಾವಪ್ಪ, ಅಂಬರೀಷ, ಶ್ರೀರಾಮಯ್ಯ ಮತ್ತಿತರರು ಹಾಜರಿದ್ದರು.
ನಗರದ ಬಸ್ ನಿಲ್ದಾಣದಿಂದ ಮೆರವಣಿಗೆ ಮೂಲಕ ಸಾಗಿದ ನೂರಾರು ರೈತರು ಬೆಸ್ಕಾಂ ಕಛೇರಿಯ ಮುಂಭಾಗ ಜಮಾಯಿಸಿ ಈ ಭಾಗದ ರೈತರ ಸಮಸ್ಯೆ ಪರಿಹಾರ ಒದಗಿಸಬಲ್ಲ ಮೇಲಾಧಿಕಾರಿಗಳು ಸ್ಥಳಕ್ಕೆ ಬರುವವರೆಗೂ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಪಟ್ಟು ಹಿಡಿದು ಕುಳಿತರು.
ಕಛೇರಿಯ ಮುಂಭಾಗದಲ್ಲಿಯೇ ಬೆಂಕಿ ಹಾಕಿ ಅಡುಗೆ ತಯಾರಿಸಿ ಬೆಸ್ಕಾಂ ಕಛೇರಿ ಆವರಣದಲ್ಲಿ ಕುಳಿತು (ಅನ್ನ&ಗೊಜ್ಜು) ಊಟವನ್ನು ಸವಿದರು.