ತಾಲ್ಲೂಕಿನ ಮಳ್ಳೂರು ಗ್ರಾಮ ಪಂಚಾಯಿತಿಗೆ ಕಳೆದ ಹದಿನೆಂಟು ತಿಂಗಳಿನಿಂದ ನಾಲ್ಕು ಜನ ಪಿ.ಡಿ.ಓ ಗಳು ಬಂದಿದ್ದು, ಮೂರ್ನಾಕು ತಿಂಗಳಿಗೊಮ್ಮೆ ವರ್ಗಾವಣೆಯಾಗುತ್ತಿದ್ದು, ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ ಎಂದು ಮಳ್ಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಾಧ ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ವರ್ಷದ ಜನವರಿಯಿಂದ ಇದುವರೆಗೂ ಯಾವುದೇ ಪಿ.ಡಿ.ಓಗಳು ಇಲ್ಲದ ಕಾರಣ ಪಂಚಾಯಿತಿಯ ಕಾರ್ಯಗಳು ಸ್ಥಗಿತಗೊಂಡಿವೆ. ಬರಗಾಲವಿರುವುದರಿಂದ ಜನ ಸಾಮಾನ್ಯರಿಗೆ ಸರಿಯಾಗಿ ನೀರಿನ ವ್ಯವಸ್ಥೆ ಮಾಡಲು ಸಾಧ್ಯವಾಗುತ್ತಿಲ್ಲ. ನೈರ್ಮಲ್ಯದ ಕಡೆಗೆ ಗಮನ ಹರಿಸಲು ಆಗುತ್ತಿಲ್ಲ. ಯಾವುದೇ ಅಭಿವೃದ್ಧಿ ಕಾರ್ಯಗಳು ಕೈಗೊಳ್ಳಲಾಗುತ್ತಿಲ್ಲ. ಯಾವುದೇ ಸಭೆಗಳನ್ನು ಕರೆಯಲು ಆಗುತ್ತಿಲ್ಲ. ವಸತಿ ಯೋಜನೆಯಡಿ ಮಂಜೂರಾದ ಮನೆಗಳಿಗೆ ಬಿಲ್ಲುಗಳನ್ನು ಪಾವತಿ ಮಾಡಲು ಆಗುತ್ತಿಲ್ಲ. ಪಂಚಾಯಿತಿಯ ನೌಕರರಿಗೆ ಎರಡು ತಿಂಗಳಿಂದ ಸಂಬಳ ಕೊಡಲು ಸಾಧ್ಯವಾಗಿಲ್ಲ. ಈ ಬಗ್ಗೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳುವಂತೆ ಅವರು ಒತ್ತಾಯಿಸಿದ್ದಾರೆ.
- Advertisement -
- Advertisement -
- Advertisement -
- Advertisement -