ದೇಶದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಜನ್ಮದಿನದ ಅಂಗವಾಗಿ ಮೇ ೨೧ ರಂದು ತಾಲೂಕು ಜೆಡಿಎಸ್ ವತಿಯಿಂದ ೧೦೧ ಉಚಿತ ಸಾಮೂಹಿಕ ವಿವಾಹಗಳನ್ನು ನೆರವೇರಿಸಲು ತೀರ್ಮಾನಿಸಲಾಗಿದೆ ಎಂದು ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಡಾ.ಧನಂಜಯರೆಡ್ಡಿ ತಿಳಿಸಿದರು.
ತಾಲ್ಲೂಕಿನ ಚಿಕ್ಕದಾಸರಹಳ್ಳಿ ಶ್ರೀ ಬ್ಯಾಟರಾಯಸ್ವಾಮಿ ದೇವಾಲಯದಲ್ಲಿ ಗುರುವಾರ ಪೂಜೆ ನೆರವೇರಿಸಿದ ನಂತರ ಪತ್ರಿಕಾಘೋಷ್ಠಿಯಲ್ಲಿ ಅವರು ಮಾತನಾಡಿದರು.
ಇದೇ ಮೊದಲ ಬಾರಿಗೆ ಜೆಡಿಎಸ್ ಪಕ್ಷದ ವತಿಯಿಂದ ಸಾಮೂಹಿಕ ವಿವಾಹಗಳನ್ನು ಆಯೋಜಿಸಲಾಗಿದ್ದು ತಾಲ್ಲೂಕಿನ ಸಮಸ್ತ ಜೆಡಿಎಸ್ ಕಾರ್ಯಕರ್ತರು ಇದರಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಮೇಲೂರು ಬಿ.ಎನ್.ರವಿಕುಮಾರ್ ಮಾತನಾಡಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹುಟ್ಟುಹಬ್ಬದ ಪ್ರಯುಕ್ತ ಆಯೋಜಿಸಲಾಗುತ್ತಿರುವ ಸಾಮೂಹಿಕ ವಿವಾಹ ಸಮಾರಂಭದಲ್ಲಿ ತಾಲ್ಲೂಕಿನಾದ್ಯಂತ ಇರುವ ಎಲ್ಲಾ ಪಂಚಾಯಿತಿಗಳಲ್ಲಿರುವ ಪಕ್ಷದ ಮುಖಂಡರು ಆಯಾ ಪಂಚಾಯಿತಿ ವ್ಯಾಪ್ತಿಯ ಅವಿವಾಹಿತ ವಧು ವರರನ್ನು ಗುರುತಿಸಿ ನೋಂದಾಯಿಸಲು ಸಹಕರಿಸಬೇಕು. ಕ್ಷೇತ್ರದ ವಧು ವರರಿಗೆ ಪ್ರಥಮ ಪ್ರಾಶಸ್ತ್ಯ ನೀಡುವುದರೊಂದಿಗೆ ವಿವಾಹವಾಗುವ ವಧು ವರರಿಗೆ ಜೀವನೋಪಾಯಕ್ಕಾಗಿ ಹಸುವೊಂದನ್ನು ವಿತರಿಸಲಾಗುವುದು ಎಂದರು.
ಜಿಲ್ಲಾ ಪಂಚಾಯಿತಿ ಸದಸ್ಯ ಬಂಕ್ ಮುನಿಯಪ್ಪ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಲಕ್ಷ್ಮೀನಾರಾಯಣರೆಡ್ಡಿ, ಉಪಾಧ್ಯಕ್ಷ ನರಸಿಂಹಯ್ಯ, ಸದಸ್ಯ ರಾಜಶೇಖರ್, ಪಿಎಲ್‌ಡಿ ಬ್ಯಾಂಕಿನ ನಿರ್ದೇಶಕರಾದ ಶಿವಾರೆಡ್ಡಿ, ಪಿ.ವಿ.ನಾಗರಾಜು, ಮುಖಂಡರಾದ ಶ್ರೀನಿವಾಸ್‌ಗೌಡ, ನಂಜಪ್ಪ, ಗೋಪಾಲಗೌಡ, ಮೇಲೂರು ಉಮೇಶ್, ಮಂಜುನಾಥ್, ತಾದೂರು ರಘು ಹಾಗು ಮತ್ತಿತರರು ಹಾಜರಿದ್ದರು.
- Advertisement -
- Advertisement -
- Advertisement -
- Advertisement -