Home News ಮಾತು ತಪ್ಪಿದ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಬೈಕ್ ರ್ಯಾಲಿ

ಮಾತು ತಪ್ಪಿದ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಬೈಕ್ ರ್ಯಾಲಿ

0

ಬಯಲುಸೀಮೆ ಪ್ರದೇಶಕ್ಕೆ ಕೃಷಿ ಆಧಾರಿತ ನೀರಾವರಿ ಯೋಜನೆ ಜಾರಿಗೊಳಿಸಲು ಮಾತು ತಪ್ಪಿದ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಬೈಕ್ ರ್ಯಾಪಲಿ ಮೂಲಕ ವಿಧಾನ ಸೌಧ ಮುತ್ತಿಗೆ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ರಾಜ್ಯ ರೈತ ಸಂಘ ಹಾಗು ಹಸಿರುಸೇನೆ ಜಿಲ್ಲಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ ಹೇಳಿದರು.
ಈ ಕುರಿತು ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ರೈತರ ಹಾಗು ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಮುಂಬರುವ ಜೂನ್ ೦೧ ರ ಗುರುವಾರ ಬೈಕ್ ರ್ಯಾಲಿ ಮೂಲಕ ವಿಧಾನಸೌಧ ಮುತ್ತಿಗೆ ಕಾರ್ಯಕ್ರಮಕ್ಕೆ ತಾಲ್ಲೂಕಿನಾಧ್ಯಂತ ಇರುವ ರೈತರು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಸರ್ಕಾರಕ್ಕೆ ಎಚ್ಚರ ನೀಡಬೇಕಿದೆ ಎಂದರು.

ಶಿಡ್ಲಘಟ್ಟದಲ್ಲಿ ಶನಿವಾರ ನಗರದ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಲಾಗಿದ್ದ ರೈತರ ಹಾಗು ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಜೂನ್ ೦೧ ರಂದು ಆಯೋಜಿಸಲಾಗಿರುವ ಬೃಹತ್ ಬೈಕ್ ರ್ಯಾುಲಿ ಮೂಲಕ ವಿಧಾನ ಸೌಧ ಮುತ್ತಿಗೆ ಹಿನ್ನಲೆಯಲ್ಲಿ ರಾಜ್ಯ ರೈತ ಸಂಘ ಹಾಗು ಹಸಿರುಸೇನೆ ಜಿಲ್ಲಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ ಮಾತನಾಡಿದರು.

ಬಯಲುಸೀಮೆ ಭಾಗದಲ್ಲಿ ಇಂದು ಕುಡಿಯುವ ನೀರಿಗೂ ಆಹಾಕಾರ ಉಂಟಾಗಿದ್ದು ಕೃಷಿ ಆಧಾರಿತ ನೀರಾವರಿ ಯೋಜನೆ ರೂಪಿಸಬೇಕು ಎಂದು ಕಳೆದ ಎರಡು ದಶಕಗಳಿಂದ ಜಿಲ್ಲೆಯಲ್ಲಿ ವಿವಿಧ ಹೋರಾಟಗಳನ್ನು ಮಾಡಲಾಗುತ್ತಿದೆ. ಆದರೂ ಸರ್ಕಾರ ಹಾಗು ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಯಾವುದೇ ನೀರಾವರಿ ಯೋಜನೆಗಳು ಅನುಷ್ಠಾನವಾಗಿಲ್ಲ. ಕೃಷಿಯನ್ನೇ ನಂಬಿ ಜೀವಿಸುತ್ತಿದ್ದ ರೈತ ಇದೀಗ ನಗರಗಳ ಕಡೆ ವಲಸೆ ಹೋಗುವ ಸ್ಥಿತಿ ನಿರ್ಮಾಣವಾಗಿದೆ.
ಕಳೆದ ೨೦೧೫ ರಲ್ಲಿ ಜಿಲ್ಲಾ ಕೇಂದ್ರ ಸ್ಥಾನದಲ್ಲಿ ಸುಮಾರು ೧೬೯ ದಿನಗಳ ಕಾಲ ನಿರಂತರ ಧರಣಿ ಸತ್ಯಾಗ್ರಹ ಸೇರಿದಂತೆ ಕಳೆದ ೨೦೧೬ ರಲ್ಲಿ ಸಾವಿರಾರು ಟ್ರಾಕ್ಟರ್‌ಗಳ ಮೂಲಕ ವಿಧಾನಸೌಧ ಮುತ್ತಿಗೆ ನಂತರ ಎಚ್ಚೆತ್ತ ಸರ್ಕಾರ ನೀರಾವರಿ ಹೋರಾಟಗಾರರ ಸಭೆ ಕರೆದು ಈ ಭಾಗದ ಜನರ ಬೇಡಿಕೆಯಂತೆ ನೀರಿನ ಮೂಲಗಳ ಅಧ್ಯಯನಕ್ಕಾಗಿ ತಜ್ಞರ ಸಮಿತಿ, ಕಾಲ ಕಾಲಕ್ಕೆ ಪರಿಶೀಲನೆಗಾಗಿ ಮೇಲುಸ್ತುವಾರಿ ಸಮಿತಿ, ಕರ್ನಾಟಕ ನೀರಾವರಿ ಸಮಿತಿ ರಚಿಸುವುದಾಗಿ ಮಾತು ಕೊಟ್ಟು ವರ್ಷವಾದರೂ ಯಾವುದೇ ಪ್ರಗತಿ ಕಂಡಿಲ್ಲ.
ಇನ್ನು ರೈತರ ಮೇಲೆ ಹಾಕಿದ್ದ ಸುಳ್ಳು ಮೊಕದ್ದಮೆಗಳನ್ನು ವಾಪಸ್ ಪಡೆಯುವುದಾಗಿ ಹೇಳಿದ್ದ ಸರ್ಕಾರ ರೈತರಿಗೆ ಸಮನ್ಸ್ ನೀಡಿ ಹೋರಾಟಗಳನ್ನು ಹತ್ತಿಕ್ಕುವ ಹುನ್ನಾರ ನಡೆಸುತ್ತಿದ್ದು ರೈತ ವಿರೋಧಿ ನೀತಿ ಹಾಗು ಕೊಟ್ಟ ಮಾತಿನಂತೆ ನಡೆಯದೇ ಮಾತಿಗೆ ತಪ್ಪಿದ ಸರ್ಕಾರದ ವಿರುದ್ದ ಆಯೋಜಿಸಲಾಗಿರುವ ಬೃಹತ್ ಬೈಕ್ ರ್ಯಾಸಲಿಯಲ್ಲಿ ಹೆಚ್ಚಿನ ಸಂಖ್ಯೆಯ ರೈತರು, ವಿವಿಧ ಸಂಘಟನೆ ಪದಾಧಿಕಾರಿಗಳು ಹಾಗು ವಿದ್ಯಾರ್ಥಿಗಳು ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ರೈತಸಂಘದ ತಾಲ್ಲೂಕು ಅಧ್ಯಕ್ಷ ತಾದೂರು ಮಂಜುನಾಥ್‌, ಎಸ್‌.ಎಂ.ನಾರಾಯಣಸ್ವಾಮಿ, ವೇಣುಗೋಪಾಲ್‌ ಹಾಜರಿದ್ದರು.