Home News ರಥಸಪ್ತಮಿ ಪ್ರಯುಕ್ತ ಸಾಮೂಹಿಕ ೧೦೮ ಸೂರ್ಯ ನಮಸ್ಕಾರ

ರಥಸಪ್ತಮಿ ಪ್ರಯುಕ್ತ ಸಾಮೂಹಿಕ ೧೦೮ ಸೂರ್ಯ ನಮಸ್ಕಾರ

0

ರಥಸಪ್ತಮಿ ಅಂಗವಾಗಿ ನಗರದ ವಾಸವಿ ವಿದ್ಯಾ ಸಂಸ್ಥೆಯ ಆವರಣದಲ್ಲಿ ಶುಕ್ರವಾರ ಸಾಮೂಹಿಕ ೧೦೮ ಸೂರ್ಯ ನಮಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಶ್ರೀ ಪತಂಜಲಿ ಯೋಗ ಶೀಕ್ಷಣ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸುಮಾರು ೧೮೦ ಕ್ಕೂ ಹೆಚ್ಚು ಮಂದಿ ಸಾಮೂಹಿಕವಾಗಿ ಸೂರ್ಯ ನಮಸ್ಕಾರ ಮಾಡಿದರು.

ಶಿಡ್ಲಘಟ್ಟದ ವಾಸವಿ ವಿದ್ಯಾ ಸಂಸ್ಥೆಯ ಆವರಣದಲ್ಲಿ ಶುಕ್ರವಾರ ರಥಸಪ್ತಮಿ ಪ್ರಯುಕ್ತ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಸಾಮೂಹಿಕ ೧೦೮ ಸೂರ್ಯ ನಮಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಬೆಳಗ್ಗೆ ೬.೩೦ ರಿಂದ ೭.೩೦ ರ ವರೆಗೂ ಯೋಗಾಸನ ಅಭ್ಯಾಸದ ಜೊತೆಗೆ ಸೂರ್ಯ ನಮಸ್ಕಾರ ಮಾಡಲಾಯಿತು.
ಸ್ಥಳೀಯ ಶಾಖೆಯ ಸಂಘಟನಾ ಪ್ರಮುಖರಾದ ಪಿ.ಶ್ರೀಕಾಂತ್ ಮಾತನಾಡಿ, ಪ್ರತಿ ವರ್ಷದಂತೆ ಈ ಭಾರಿಯೂ ಲೋಕ ಕಲ್ಯಾಣಾರ್ಥವಾಗಿ ರಥಸಪ್ತಮಿಯಂದು ಸೂರ್ಯ ನಮಸ್ಕಾರ ಹಮ್ಮಿಕೊಳ್ಳಲಾಗಿದೆ. ಯೋಗದಿಂದ ಉತ್ತಮ ಆರೋಗ್ಯದ ಜೊತೆಗೆ ಮಾನಸಿಕ ಹಾಗು ದೈಹಿಕ ಸದೃಡತೆ ಕಾಪಾಡಿಕೊಳ್ಳಬಹುದು ಎಂದರು.
ಕಾರ್ಯಕ್ರಮದಲ್ಲಿ ಎಸ್.ಎನ್.ಕ್ರಿಯಾ ಟ್ರಸ್ಟ್ ಅಧ್ಯಕ್ಷ ಆಂಜಿನಪ್ಪ, ಪತಂಜಲಿ ಯೋಗ ಶಿಕ್ಷಣ ಸಮಿತಿಯ ಅಧ್ಯಕ್ಷ ಶಂಕರ್, ಸಂಘಟನಾ ಕಾರ್ಯದರ್ಶಿ ಕೇಶವಮೂರ್ತಿ, ಬೌದ್ದಿಕ್ ಪ್ರಮುಖ್ ಮಂಜುನಾಥ್, ಡಿ.ವಿ.ವೆಂಕಟೇಶ್, ಲಕ್ಷ್ಮಣ್, ಶ್ರೀನಿವಾಸ್ ಮತ್ತಿತರರು ಹಾಜರಿದ್ದರು.
ಶಿಡ್ಲಘಟ್ಟ ತಾಲ್ಲೂಕಿನ ಮೇಲೂರಿನಲ್ಲಿ ಶುಕ್ರವಾರ ಪತಂಜಲಿ ಯೋಗ ಶಿಕ್ಷಣ ಸಮಿತಿ ಸಹಯೋಗಲ್ಲಿ ಸುಮಾರು ೨೧೫ ಮಂದಿ ಸಾಮೂಹಿಕ ೧೦೮ ಸೂರ್ಯ ನಮಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ತಾಲ್ಲೂಕಿನ ಮೇಲೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಇದೇ ಮೊದಲ ಬಾರಿಗೆ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಸುಮಾರು ೨೧೫ ಮಂದಿ ಸಾಮೂಹಿಕ ೧೦೮ ಸೂರ್ಯ ನಮಸ್ಕಾರ ಕಾರ್ಯಕ್ರಮದಲ್ಲಿ ಶುಕ್ರವಾರ ಪಾಲ್ಗೊಂಡಿದ್ದರು.