19.5 C
Sidlaghatta
Sunday, July 20, 2025

ರೇಣುಕಾ ಯಲ್ಲಮ್ಮದೇವಿಯ ಹೂವಿನ ಕರಗ

- Advertisement -
- Advertisement -

ನಗರದಲ್ಲಿ ಶ್ರೀ ರೇಣುಕಾ ಯಲ್ಲಮ್ಮದೇವಿಯ ಹೂವಿನ ಕರಗವು ಶುಕ್ರವಾರ ರಾತ್ರಿ ವಿಜೃಂಭಣೆಯಿಂದ ನಡೆಯಿತು. ಕರಗವನ್ನು ಮುನಿಕೃಷ್ಣಪ್ಪ ಹೊತ್ತಿದ್ದರು.
ಮದ್ಯಾಹ್ನ ದೇವರಿಗೆ ಕಲ್ಯಾಣೋತ್ಸವ ನಡೆಯಿತು. ಸಂಜೆ ದಾಸಯ್ಯನವರ ಮಣಿಸೇವೆ. ನಂತರ ಕರಗ ಹೊರುವವರನ್ನು ಬಾವಿಯ ಬಳಿ ಕರೆದೊಯ್ದು ಗಂಗೆ ಪೂಜೆ ಮಾಡಿಸಿದರು. ಅವರಿಗೆ ದೇವಾಲಯದಲ್ಲಿ ಕಪ್ಪು ಬಳೆ, ಸೀರೆ, ಒಡವೆ ಇತ್ಯಾದಿ ಸ್ತ್ರೀಯರ ಅಲಂಕಾರ ಮಾಡಿದರು. ಕರಗಕ್ಕೆ ಪೂಜೆ ಸಲ್ಲಿಸಿ ತಲೆಯ ಮೇಲೆ ಹೊರಿಸಲಾಯಿತು. ಆಗ ವೀರಕುಮಾರರು ಅಲಗು ಸೇವೆ ಮಾಡಿದರು. ಹಲಗೆ, ತಮಟೆ ವಾದ್ಯಗಳೊಂದಿಗೆ ಕರಗ ದೇವಾಲಯದ ಪ್ರದಕ್ಷಿಣೆ ಮಾಡಿ ನರ್ತಿಸಿತು. ಮುಂದೆ ಕತ್ತಿ ಹಿಡಿದ ವೀರಕುಮಾರರು, ಹಿಂದೆ ಕುಣಿಯುತ್ತಾ ಕರಗ ರಾತ್ರಿಯಿಡೀ ಊರೆಲ್ಲಾ ಸಂಚರಿಸಿತು.
ಪ್ರತಿಯೊಬ್ಬರೂ ತಮ್ಮ ಮನೆಗಳ ಮುಂದೆ ರಂಗೋಲಿ ಹಾಕಿ ಅಲ್ಲಿಗೆ ಕರಗ ಬರುತ್ತಿದ್ದಂತೆ ಭಕ್ತಿಯಿಂದ ಆರತಿ ಬೆಳಗಿ ಮಲ್ಲಿಗೆ ಹೂಗಳನ್ನು ಸಮರ್ಪಿಸಿದರು. ಊರಿನ ಪ್ರಮುಖ ದೇವಾಲಯಗಳಲ್ಲಿ ವಿಶೇಷ ಪೂಜೆ, ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಎಲ್ಲಾ ಬೀದಿಗಳಲ್ಲೂ ವಿದ್ಯುತ್ ದೀಪಾಲಂಕಾರ ಮಾಡಿದ್ದರು. ನಗರದಲ್ಲಿ ಎರಡು ಕಡೆ ವಾದ್ಯಗೋಷ್ಠಿಯನ್ನೂ ಆಯೋಜಿಸಲಾಗಿತ್ತು.
ಯಜಮಾನ್ರು, ಗೌಡ್ರು, ಗಣಾಚಾರಿಗಳು ಹಾಗೂ ರೇಣುಕಾ ಎಲ್ಲಮ್ಮದೇವಿ ಭಕ್ತ ಮಂಡಳಿ ಸದಸ್ಯರು, ಭಕ್ತರು ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!