ಮತದಾನ ಮಾಡುವುದು ಪ್ರತಿಯೊಬ್ಬ ಪ್ರಜ್ಞಾವಂತ ನಾಗರಿಕರ ಕರ್ತವ್ಯವಾಗಿದ್ದು ಏಪ್ರಿಲ್ ೧೮ ರಂದು ನಡೆಯಲಿರುವ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗುರುದತ್ ಹೆಗಡೆ ತಿಳಿಸಿದರು.
ನಗರದ ರೇಷ್ಮೆಗೂಡು ಮಾರುಕಟ್ಟೆಯ ಆವರಣದಲ್ಲಿ ಬುಧವಾರ ರೈತರು ಹಾಗೂ ರೀಲರುಗಳಿಗೆ ಆಯೋಜಿಸಿದ್ದ ಸ್ವೀಪ್ ಮತದಾನ ಜಾಗೃತಿ ಸಭೆಯಲ್ಲಿ ಮತದಾನದ ಕುರಿತು ಪ್ರತಿಜ್ಞಾವಿಧಿ ಭೋದಿಸಿ ಅವರು ಮಾತನಾಡಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನದ ಹಕ್ಕು ಜನರಿಗೆ ಸಿಕ್ಕಿರುವ ಪರಮಾಧಿಕಾರ. ಅದನ್ನು ಚಲಾಯಿಸಲಿಕ್ಕೆ ಯಾರೂ ಹಿಂದುಳಿಯಬಾರದು. ಈ ಬಾರಿ ಶೇ ೧೦೦ ರಷ್ಟು ಮತದಾನ ಮಾಡಿಸಲಿಕ್ಕೆ ಅಗತ್ಯವಾಗಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ. ನಿರ್ಭಿತಿಯಿಂದ ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೆ ಮತದಾನ ಮಾಡಬೇಕು. ರೈತಾಪಿ ವರ್ಗದವರು ಮತದಾನದಿಂದ ದೂರ ಉಳಿಯಬಾರದು ಎಂದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶಿವಕುಮಾರ್, ನಗರಸಭಾ ಆಯುಕ್ತ ಹನುಮಂತರಾಜು, ನರೇಗಾ ಯೋಜನೆ ಸಹಾಯಕ ನಿರ್ದೇಶಕ ಶ್ರೀನಾಥ್‌ಗೌಡ, ಬೋದಗೂರು ವೆಂಕಟಸ್ವಾಮಿರೆಡ್ಡಿ, ಜನಾರ್ಧನಮೂರ್ತಿ, ಅನ್ಸರ್ ಹಾಜರಿದ್ದರು.
- Advertisement -
- Advertisement -
- Advertisement -