Home News ರೈತರ ಭೂಮಿಯನ್ನು ಉಳಿಸಿಕೊಳ್ಳಲು ಹಾಗೂ ಶಾಶ್ವತ ನೀರಾವರಿ ಯೋಜನೆಗೆ ಒತ್ತಾಯಿಸಿ ಪಾದಯಾತ್ರೆ

ರೈತರ ಭೂಮಿಯನ್ನು ಉಳಿಸಿಕೊಳ್ಳಲು ಹಾಗೂ ಶಾಶ್ವತ ನೀರಾವರಿ ಯೋಜನೆಗೆ ಒತ್ತಾಯಿಸಿ ಪಾದಯಾತ್ರೆ

0

ರೈತರ ಭೂಮಿಯನ್ನು ಉಳಿಸಿಕೊಳ್ಳಲು ಹಾಗೂ ಬಯಲು ಸೀಮೆ ಪ್ರದೇಶಗಳಿಗೆ ಶಾಶ್ವತ ನೀರಾವರಿ ಯೋಜನೆಗೆ ಒತ್ತಾಯಿಸಿ ಪಾದಯಾತ್ರೆಯನ್ನು ಕೈಗೊಂಡಿದ್ದು, ಏಪ್ರಿಲ್ 28 ರಂದು ವಿಧಾನಸೌಧಕ್ಕೆ ತೆರಳಿ ಪ್ರತಿಭಟಿಸುವುದಾಗಿ ಸಿ.ಐ.ಟಿ.ಯು ಜಿಲ್ಲಾ ಕಾರ್ಯದರ್ಶಿ ಲಕ್ಷ್ಮೀದೇವಮ್ಮ ತಿಳಿಸಿದರು.
ನಗರದಲ್ಲಿ ಶನಿವಾರ ಘೋಷಣೆಗಳನ್ನು ಕೂಗುತ್ತಾ ರೈತರು ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ಸದಸ್ಯರು ಪಾದಯಾತ್ರೆ ನಡೆಸಿದ ಸಂದರ್ಭದಲ್ಲಿ ಅವರು ಮಾತನಾಡಿದರು.
ದೂರದೃಷ್ಟಿ ಯೋಜನೆಗಳನ್ನು ರೂಪಿಸಬೇಕು. ಭೂ ಸ್ವಾಧೀನ ಕಾಯ್ದೆ ವಾಪಸ್ ಪಡೆಯಬೇಕು. ಬರಪೀಡಿತ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಯೋಜನೆ ಶೀಘ್ರವಾಗಿ ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿದರು.
ಡಿ.ವೈ.ಎಫ್.ಐ ರಾಜ್ಯ ಸಮಿತಿ ಸದಸ್ಯ ಮುನೀಂದ್ರ, ಫಯಾಜುಲ್ಲಾ, ಗುಲ್ಜಾರ್, ಮಂಜುನಾಥ್, ನರಸಿಂಹಪ್ಪ, ಹಸಿರುಸೇನೆ ತಾಲ್ಲೂಕು ಅಧ್ಯಕ್ಷ ರವಿಪ್ರಕಾಶ್, ಮುನಿಕೆಂಪಣ್ಣ, ಪ್ರತೀಶ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.