Home News ರೈತ ಸಂಘದ ಸದಸ್ಯರು ಮದ್ದೂರು ಕಾರ್ಯಕ್ರಮಕ್ಕೆ

ರೈತ ಸಂಘದ ಸದಸ್ಯರು ಮದ್ದೂರು ಕಾರ್ಯಕ್ರಮಕ್ಕೆ

0

ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಫೆಬ್ರುವರಿ 13 ರ ಸೋಮವಾರದಂದು ರೈತ ನಾಯಕ ದಿವಂಗತ ಫ್ರೊ.ಎಂ.ಡಿ.ನಂಜುಂಡಸ್ವಾಮಿಯವರ ಕಂಚಿನ ಪುತ್ಥಳಿಯನ್ನು ಅನಾವರಣಗೊಳಿಸುತ್ತಿದ್ದು, ಅದಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ತಾಲ್ಲೂಕಿನ ರೈತರು ಹೋಗಲು ತಾಲ್ಲೂಕು ರೈತ ಸಂಘ(ಪುಟ್ಟಣ್ಣಯ್ಯ ಬಣ)ದ ಸದಸ್ಯರು ಗುರುವಾರ ತೀರ್ಮಾನಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಸಭೆ ಸೇರಿದ ತಾಲ್ಲೂಕು ರೈತ ಸಂಘದ ಸದಸ್ಯರು, ಫ್ರೊ.ಎಂ.ಡಿ.ಎನ್‌ ರೈತ ಚೈತನ್ಯ ಕೇಂದ್ರ ಮತ್ತು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಹಸಿರು ಶಾಲಿನ ಹರಿಕಾರ ಫ್ರೊ.ಎಂ.ಡಿ.ನಂಜುಂಡಸ್ವಾಮಿಯವರ 81ನೇ ಹುಟ್ಟು ಹಬ್ಬದ ಪ್ರಯುಕ್ತ ಅವರ ಕಂಚಿನ ಪುತ್ಥಳಿಯನ್ನು ಅನಾವರಣಗೊಳಿಸಲಿದೆ. ರೈತರ ಹೋರಾಟಕ್ಕೆ ಶಕ್ತಿ ತುಂಬಲು ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ತಾಲ್ಲೂಕು ಮತ್ತು ಜಿಲ್ಲೆಯಿಂದ ತೆರಳಬೇಕು ಎಂದು ಸಭೆಯಲ್ಲಿ ತೀರ್ಮಾನಿಸಿದರು.
ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಲಕ್ಷ್ಮೀನಾರಾಯಣರೆಡ್ಡಿ, ಯಾಕೂಬ್‌ಷರೀಫ್‌, ರವಿಪ್ರಕಾಶ್‌, ಪ್ರತೀಶ್‌, ನಾರಾಯಣಸ್ವಾಮಿ, ಪಾರ್ವತಮ್ಮ, ಸುಶೀಲಮ್ಮ, ಗೋವಿಂದಪ್ಪ ಮತ್ತಿತರರು ಹಾಜರಿದ್ದರು.

error: Content is protected !!