ವಿದ್ಯಾರ್ಥಿಗಳಿಗೆ ಗ್ರಂಥಾಲಯದ ಮಹತ್ವವನ್ನು ತಿಳಿಸಬೇಕು

- Advertisement -
- Advertisement -

ಗ್ರಂಥಾಲಯದಲ್ಲಿ ಸಾವಿರಾರು ಪುಸ್ತಕಗಳಿವೆ. ಅವುಗಳ ಸದ್ಬಳಕೆಯಾಗಬೇಕು. ಗ್ರಂಥಾಲಯಕ್ಕೆ ಬರುವ ಓದುಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಬೇಕು ಎಂದು ಈ.ತಿಮ್ಮಸಂದ್ರ ಪ್ರೌಢಶಾಲೆಯ ಶಿಕ್ಷಕ ಟಿ.ಬಿ.ಗೋವಿಂದರಾಜುಲು ತಿಳಿಸಿದರು.
ನಗರದ ಸಾರ್ವಜನಿಕ ಗ್ರಂಥಾಲಯದಲ್ಲಿ ಸೋಮವಾರ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹಕ್ಕೆ ಚಾಲನೆ ನೀಡಿ ಗ್ರಂಥಾಲಯ ವಿಜ್ಞಾನದ ಪಿತಾಮಹಾ ಡಾ.ಎಸ್.ಆರ್.ರಂಗನಾಥನ್ ಅವರ ಭಾವಚಿತ್ರಕ್ಕೆ ಪುಷ್ಪಗಳನ್ನು ಅರ್ಪಿಸಿ ಅವರು ಮಾತನಾಡಿದರು, ಗ್ರಂಥಾಲಯದಲ್ಲಿ ಪುಸ್ತಕಗಳು ವಿಪುಲವಾಗಿವೆ. ಆದರೆ ಓದುಗರ ಕೊರತೆಯಿದೆ. ವಿದ್ಯಾರ್ಥಿಗಳಿಗೆ ಗ್ರಂಥಾಲಯದ ಮಹತ್ವವನ್ನು ತಿಳಿಸುವ ವಿವಿಧ ಕಾರ್ಯಕ್ರಮಗಳನ್ನು ಗ್ರಂಥಾಲಯವನ್ನು ಕೇಂದ್ರಗೊಳಿಸಿ ನಡೆಸಬೇಕು. ಓದುಗರನ್ನು ಹೆಚ್ಚಿಸುವ ವಿವಿಧ ಕಾರ್ಯಕ್ರಮಗಳು ನಡೆಯುವಂತಾಗಲಿ ಎಂದರು.
ಗ್ರಂಥಾಲಯ ಸಹಾಯಕ ಎನ್‌.ಶ್ರೀರಾಮ್‌, ಹಂಡಿಗನಾಳ ಗ್ರಾಮ ಪಂಚಾಯತಿ ಗ್ರಂಥಾಲಯ ಮೇಲ್ವಿಚಾರಕ ಎಂ.ಮುನಿರಾಜು, ಮಳಮಾಚನಹಳ್ಳಿ ಮುನಿರಾಜು, ತುಮ್ಮನಹಳ್ಳಿ ದೇವಣ್ಣ, ನಯಾಜ್‌ಪಾಷಮ ವಿ.ಮುನಿಕೃಷ್ಣಪ್ಪ, ವಿ.ಗಂಗಾಧರ, ಶಿವಕುಮಾರ್‌ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!