Home News ವಿಧ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಣಾ ಕಾರ್ಯಕ್ರಮ

ವಿಧ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಣಾ ಕಾರ್ಯಕ್ರಮ

0

ನಗರದ ಶ್ರೀ ಸರಸ್ವತಿ ಕಾನ್ವೆಂಟ್ ಶಾಲೆಯಲ್ಲಿ ಶನಿವಾರ ಶಾಲಾ ವಿಧ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಣಾ ಕಾರ್ಯಕ್ರಮದಲ್ಲಿ ಶಾಲೆಯ ಅಧ್ಯಕ್ಷ ಎನ್.ಶ್ರೀಕಾಂತ್ ಮಾತನಾಡಿದರು.
ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕು ಮತ್ತು ಶಾಲೆಯಿಂದ ಹೊರಗುಳಿಯಬಾರದು ಎಂಬ ಉದ್ದೇಶದಿಂದ ಸರ್ಕಾರ ಸೈಕಲ್ ವಿತರಿಸುತ್ತಿದ್ದು ಮಕ್ಕಳು ಅದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.
ಶಾಲೆಯ ಆಡಳಿತಾಧಿಕಾರಿ ಸೋಮಶೇಖರ್‌ ಮಾತನಾಡಿ, ಪ್ರತಿಭೆ ಎಲ್ಲರಲ್ಲೂ ಇರುತ್ತದೆ. ಉತ್ತಮವಾಗಿ ವಿದ್ಯಾಭ್ಯಾಸ ಮಾಡಿದರೆ ಭವಿಷ್ಯದಲ್ಲಿ ಜೀವನವನ್ನು ಉತ್ತಮವಾಗಿ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ. ಈ ನಿಟ್ಟಿನಲ್ಲಿ ಸರ್ಕಾರದ ಸೌಲಭ್ಯಗಳ ಸದುಪಯೋಗ ಪಡೆದುಕೊಂಡು ಉತ್ತಮವಾಗಿ ವ್ಯಾಸಂಗ ಮಾಡಬೇಕು ಎಂದರು.
ಸುಮಾರು ೧೫೦ ಮಂದಿ ವಿದ್ಯಾರ್ಥಿಗಳಿಗೆ ಸೈಕಲ್ ವಿತರಿಸಲಾಯಿತು.
ಶಾಲೆಯ ಮುಖ್ಯಶಿಕ್ಷಕ ಜಿ.ಎನ್. ಶಿವಣ್ಣ, ವಾಸುದೇವ ಮೂರ್ತಿ, ದೈಹಿಕ ಶಿಕ್ಷಕರಾದ ಎಚ್.ವೆಂಕಟೇಶಪ್ಪ, ಎಮ್.ಎನ್.ನರಸಿಂಹಮೂರ್ತಿ, ಶಿಕ್ಷಕ ನಾಗರಾಜ್ ಹಾಜರಿದ್ದರು.

error: Content is protected !!