ವಿಶ್ವ ನಿರ್ಮಾಣ ಸೇನೆಯ ತಾಲ್ಲೂಕು ಶಾಖೆಯನ್ನು ಉದ್ಘಾಟನಾ ಸಮಾರಂಭ

- Advertisement -
- Advertisement -

ನಗರದ ಗಾಂಧಿನಗರದಲ್ಲಿ ಕರ್ನಾಟಕ ವಿಶ್ವ ನಿರ್ಮಾಣ ಸೇನೆಯ ತಾಲ್ಲೂಕು ಶಾಖೆಯನ್ನು ಉದ್ಘಾಟಿಸಿ ಕರ್ನಾಟಕ ಪ್ರಜಾ ಶಕ್ತಿ ಸಮಿತಿಯ ರಾಜ್ಯಾಧ್ಯಕ್ಷ ಪಿ.ಜಿ.ವಿಶ್ವನಾಥ್ ಮಾತನಾಡಿದರು. ಸಂಘಟನೆಗಳು ನೊಂದವರ ಧ್ವನಿಯಾಗಿ ಕಾರ್ಯನಿರ್ವಹಿಸಬೇಕು. ಎಲ್ಲಿ ಅನ್ಯಾಯ ಆಗುತ್ತದೆ ಅಲ್ಲಿ ಹೋರಾಟದ ಮೂಲಕ ನೊಂದವರಿಗೆ ನ್ಯಾಯ ಕಲ್ಪಿಸಿ ಸಾಮಾಜಿಕ ಕಳಿಕಳಿಯನ್ನು ಮೆರೆಯಬೇಕೆಂದರು.
ಸಮಾಜದಲ್ಲಿ ನಡೆಯುವ ಅನ್ಯಾಯಗಳು ಮತ್ತು ದೌಜನ್ಯ-ದಬ್ಬಾಳಿಕೆ ವಿರುಧ್ಧ ಹೋರಾಡುವ ಮನೋಭಾವ ಬೆಳೆಸಿಕೊಳ್ಳಬೇಕೆಂದು ಅವರು ತಿಳಿಸಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೊಳಿಸುವ ಯೋಜನೆಗಳು ಕೆಲವೇ ಮಂದಿಯ ಪಾಲಾಗುತ್ತಿದೆ. ಸರ್ಕಾರಿ ಯೋಜನೆಗಳ ಕುರಿತು ಜನಸಾಮಾನ್ಯರಿಗೆ ಅರಿವು ಮತ್ತು ಜಾಗೃತಿ ಮೂಡಿಸುವಂತಹ ಕೆಲಸ ನಡೆಯಬೇಕು. ಸಂಘಟನೆಗಳ ಪದಾಧಿಕಾರಿಗಳು ಸಮಾಜಸೇವಾ ಮನೋಭಾವದಿಂದ ಕಾರ್ಯನಿರ್ವಹಿಸಿದಾಗ ಮಾತ್ರ ಸಂಘಟನೆಗೆ ಉತ್ತಮ ಹೆಸರು ಬರುತ್ತದೆ ಎಂದರು.
ಕರ್ನಾಟಕ ವಿಶ್ವ ನಿರ್ಮಾಣ ಸೇನೆಯ ರಾಜ್ಯ ಉಪಾಧ್ಯಕ್ಷ ಬಾಬು ಹುಸೇನ್ ಮಾತನಾಡಿ, ಸಂವಿಧಾನತ್ಮಕವಾಗಿ ಎಲ್ಲಾ ವರ್ಗಗಳಿಗೆ ದೊರೆಯಬೇಕಾದ ಸೌಲಭ್ಯಗಳನ್ನು ತಲುಪಿಸುವ ನಿಟ್ಟಿನಲ್ಲಿ ಸಂಘಟನೆ ಕಾರ್ಯನಿರ್ವಹಿಸುತ್ತದೆ. ರಾಜ್ಯದಲ್ಲಿ ಎಲ್ಲಾ ಜಿಲ್ಲೆ-ತಾಲೂಕು ಮತ್ತು ಹೋಬಳಿ ಮಟ್ಟದಲ್ಲಿ ಸಮಿತಿಗಳನ್ನು ರಚಿಸಿ ಸಂಘಟನೆಯನ್ನು ಬಲಪಡಿಸಲಾಗುವುದು. ದೀನ ದಲಿತರು, ಅಲ್ಪಸಂಖ್ಯಾತರು,ಹಿಂದುಳಿದ ವರ್ಗ ಸಹಿತ ಎಲ್ಲಾ ಜಾತಿ ಬಡವರ ಪರವಾಗಿ ಸಂಘಟನೆ ಕಾರ್ಯನಿರ್ವಹಿಸುತ್ತದೆ ಎಂದರು.
ಈ ಸಂದರ್ಭದಲ್ಲಿ ನಗರ ಪೋಲಿಸ್ ಠಾಣೆಯ ಎಎಸ್‌ಐ ಕೃಷ್ಣಪ್ಪ, ಕರ್ನಾಟಕ ವಿಶ್ವ ನಿರ್ಮಾಣ ಸೇನೆಯ ಜಿಲ್ಲಾಧ್ಯಕ್ಷ ಚಂದ್ರಕೀರ್ತಿ, ತಾಲ್ಲೂಕು ಅಧ್ಯಕ್ಷ ಎಂ.ಎಸ್.ಮುಕಮಿಲ್ ಪಾಷ, ಕೆ.ಪ್ಯಾರೇಜಾನ್, ಸಿ.ಎಸ್.ಅಫ್ಸರ್ ಪಾಷ, ನೂರಾನಿ ಮಸೀದಿಯ ಕಾರ್ಯದರ್ಶಿ ಸರ್ದಾರ್, ಡಿ.ಮಹಬೂಬ್ ಪಾಷ, ಲೋಕೇಶ್ ಹಾಜರಿದ್ದರು.

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!