Home News ಶಾಲಾ ದಾಖಲಾತಿ ಆಂದೋಲನ ಕಾರ್ಯಕ್ರಮ

ಶಾಲಾ ದಾಖಲಾತಿ ಆಂದೋಲನ ಕಾರ್ಯಕ್ರಮ

0

ತಾಲ್ಲೂಕಿನ ನಾಗಮಂಗಲ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ದಾಖಲಾತಿ ಆಂದೋಲನ ಕಾರ್ಯಕ್ರಮದಲ್ಲಿ ನಾಗಮಂಗಲದ ಪ್ರಾಥಮಿಕ ಶಾಲೆಯ ಶಿಕ್ಷಕ ಬೈಯಣ್ಣ ಮಾತನಾಡಿದರು.
ಪ್ರಸ್ತುತ ಸಾಲಿನ ಶಾಲಾ ದಾಖಲಾತಿಗಳು ಪ್ರಾರಂಭವಾಗಿದ್ದು, ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಸೇರಿಸಿ ಎಂದು ಅವರು ತಿಳಿಸಿದರು.
‘ಮಕ್ಕಳ ರಕ್ಷಣೆ, ಶಿಕ್ಷಣ ಬಲವರ್ಧನೆ ನಮ್ಮೆಲ್ಲರ ಹೊಣೆ’, ‘ರಾಷ್ಟ್ರದ ಬುನಾದಿಗೆ ಪ್ರಾಥಮಿಕ ಶಿಕ್ಷಣ’ ಎಂಬ ನಾಮಪಲಕಗಳೊಂದಿಗೆ ಗ್ರಾಮದ ಮುಖ್ಯ ರಸ್ತೆಗಳಲ್ಲಿ ವಿದ್ಯಾರ್ಥಿಗಳೊಂದಿಗೆ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಎಸ್.ಡಿ.ಎಂ,ಸಿ ಅದ್ಯಕ್ಷರು ಸದಸ್ಯರೊಂದಿಗೆ ಮೆರವಣಿಗೆ ಜಾಥಾ ನಡೆಸಿದರು.
ಸರ್ಕಾರಿ ಶಾಲೆಗಳು ಉತ್ತಮ ಗುಣಮಟ್ಟದ ಶಿಕ್ಷಕರನ್ನು ಹೊಂದಿದ್ದು, ಮಕ್ಕಳಿಗೆ ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಒದಗಿಸುವುದರ ಜೊತೆಗೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಯಶಸ್ವಿಯಾಗಿದೆ. ಈ ನಿಟ್ಟಿನಲ್ಲಿ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಿ. ಸರ್ಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಪೋಷಕರ ಪಾತ್ರ ಬಹುಮುಖ್ಯವಾದದ್ದು. ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಗಿಂತ ಕಡಿಮೆ ಇಲ್ಲ ಎಂಬ ರೀತಿಯಲ್ಲಿ ಶಿಕ್ಷಣ ಒದಗಿಸುವ ಜವಾಬ್ದಾರಿ ನಮ್ಮದು. ಆದ್ದರಿಂದ ಕಡ್ಡಾಯವಾಗಿ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಿ ಎಂದು ಪೋಷಕರಲ್ಲಿ ಮನವಿ ಮಾಡಿದರು.
ನಾಗಮಂಗಲದ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಎನ್.ಆರ್.ವೆಂಕಟೇಶ್, ಶಿಕ್ಷಕಿಯರಾದ ವಿ.ಡಿ.ನಾಗವೇಣಿ, ಎನ್‌.ಎನ್‌.ನಾಗವೇಣಿ, ಅಂಗನವಾಡಿ ಕಾರ್ಯಕರ್ತೆಯರಾದ ಎಸ್‌.ಭವ್ಯ, ಕನಕರತ್ನಮ್ಮ, ಶಾಲಾ ವಿದ್ಯಾರ್ಥಿಗಳು ಜಾಥಾದಲ್ಲಿ ಪಾಲ್ಗೊಂಡಿದ್ದರು.