ಶಿಕ್ಷಕರ ಸಮಸ್ಯೆ ನಿವಾರಣೆ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಕೊಡುಗೆ ಸಿಗಲು ಜೆಡಿಎಸ್ ಪಕ್ಷವನ್ನು ಬೆಂಬಲಿಸುವಂತೆ ಶಾಸಕ ಎಂ.ರಾಜಣ್ಣ ಹೇಳಿದರು.
ಆಗ್ನೇಯ ಶಿಕ್ಷಕರ ಕ್ಷೇತ್ರದ ಉಪಚುನಾವಣೆಯ ಜೆಡಿಎಸ್ ಪಕ್ಷದ ಅಭ್ಯರ್ಥಿ ರಮೇಶ್‌ಬಾಬು ಪರ ನಗರದ ಸರ್ಕಾರಿ ಪ್ರೌಢಶಾಲೆ ಮತ್ತು ಶ್ರೀ ಸರಸ್ವತಿ ವಿದ್ಯಾಸಂಸ್ಥೆಯಲ್ಲಿ ಮತಯಾಚಿಸಿ ಅವರು ಮಾತನಾಡಿದರು.
ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಗಳಾಗಿದ್ದಾಗ ಶಿಕ್ಷಕರ ಕ್ಷೇತ್ರಕ್ಕೆ ನೀಡಿದ ಕೊಡುಗೆ ಹಾಗು ಸುಮಾರು ಏಳು ಭಾರಿ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿದ್ದಂತಹ ಬಸವರಾಜ ಹೊರಟ್ಟಿಯವರು ತಮ್ಮ ಕಷ್ಟ ಸುಖಗಳಿಗೆ ಸ್ಪಂದಿಸುವ ಮೂಲಕ ಅಪಾರ ಶಿಕ್ಷಕರ ಮನ ಗೆದ್ದಿದ್ದಾರೆ.
ಪಕ್ಷದ ಅಧಿಕೃತ ಅಭ್ಯರ್ಥಿ ರಮೇಶ್‌ಬಾಬು ಈಗಾಗಲೇ ಪಕ್ಷದ ವಕ್ತಾರರಾಗಿ ಉತ್ತಮ ಕಾರ್ಯ ನಿರ್ವಹಿಸುತ್ತಿದ್ದು ಈ ಭಾರಿಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಸ್ಪರ್ದಿಸಿದ್ದು ತಮ್ಮ ಅಮೂಲ್ಯವಾದ ಮತಗಳನ್ನು ಜೆಡಿಎಸ್ ಅಭ್ಯರ್ಥಿ ಪರ ಚಲಾಯಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಬಂಕ್ ಮುನಿಯಪ್ಪ, ಮುಖಂಡರಾದ ಚಿಕ್ಕ ಮುನಿಯಪ್ಪ, ಶ್ರೀ ಸರಸ್ವತಿ ವಿದ್ಯಾಸಂಸ್ಥೆಯ ಶ್ರೀಕಾಂತ್ ಮತ್ತಿತರರು ಹಾಜರಿದ್ದರು.
- Advertisement -
- Advertisement -
- Advertisement -
- Advertisement -