Home News ಶಿಡ್ಲಘಟ್ಟದ ಶಾರದಾ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

ಶಿಡ್ಲಘಟ್ಟದ ಶಾರದಾ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

0

ಬಾಗೇಪಲ್ಲಿಯಲ್ಲಿ ಇತ್ತೀಚಿಗೆ ನಡೆದ ಜಿಲ್ಲಾ ಮಟ್ಟದ ವೃತ್ತಿ ಶಿಕ್ಷಕರ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ವಸ್ತುಪ್ರದರ್ಶನದಲ್ಲಿ ಶಿಡ್ಲಘಟ್ಟದ ಶಾರದಾ ಪ್ರೌಢಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಾದ ನಾಗಾರ್ಜುನ, ಗೌತಮ, ಕಾರ್ತಿಕ, ಭರತ ಮತ್ತು ವಿದ್ಯಾರ್ಥಿನಿಯರಾದ ಇಂಧು ಮತ್ತು ನಾಝೀಮ ವಿವಿಧ ಆಕರ್ಷಕ ಮಾದರಿಗಳನ್ನು ತಯಾರಿಸಿ ಪ್ರಥಮ ಸ್ಥಾನಗಳನ್ನು ಗಳಿಸಿದ್ದಾರೆ.