Home News ಶುಕ್ರವಾರ ತಾಲ್ಲೂಕಿನಾದ್ಯಂತ ಶಾಲಾ ಕಾಲೇಜುಗಳ ಬಂದ್

ಶುಕ್ರವಾರ ತಾಲ್ಲೂಕಿನಾದ್ಯಂತ ಶಾಲಾ ಕಾಲೇಜುಗಳ ಬಂದ್

0

ತಾಲ್ಲೂಕಿನಾದ್ಯಂತ ಫೆಬ್ರುವರಿ 26 ರ ಶುಕ್ರವಾರದಂದು ಎಲ್ಲಾ ಶಾಲಾ ಕಾಲೇಜುಗಳನ್ನು ಬಂದ್ ಮಾಡುವ ಮೂಲಕ ಶೈಕ್ಷಣಿಕ ಬಂದ್ ಆಚರಿಸುತ್ತಿರುವುದಾಗಿ ಡಿ.ವೈ.ಎಫ್‌.ಐ ರಾಜ್ಯ ಸಮಿತಿ ಸದಸ್ಯ ಕುಂದಲಗುರ್ಕಿ ಮುನೀಂದ್ರ ತಿಳಿಸಿದರು.
ನಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ಎಸ್‌.ಎಫ್‌.ಐ, ಡಿ.ವೈ.ಎಫ್‌.ಐ ಮತ್ತು ಅತಿಥಿ ಉಪನ್ಯಾಸಕರ ಸಂಘ ಭಿತ್ತಿ ಪತ್ರಗಳನ್ನು ಪ್ರದರ್ಶಿಸಿ, ಬಂದ್‌ಗೆ ಕರೆ ನೀಡಿದ ಸಂದರ್ಭದಲ್ಲಿ ಅವರು ಮಾತನಾಡಿದರು.
ಶುಕ್ರವಾರ ರಾಜ್ಯದಾದ್ಯಂತ ಅತಿಥಿ ಉಪನ್ಯಾಸಕರ ಸೇವಾ ಭದ್ರತೆಗೆ ವಿಶೇಷ ನಿಯಮಾವಳಿ ರೂಪಿಸಲು ಒತ್ತಾಯಿಸಿ ಶಾಲಾ ಕಾಲೇಜುಗಳ ಶೈಕ್ಷಣಿಕ ಬಂದ್‌ ಆಚರಿಸಲಾಗುತ್ತಿದೆ. ಅತಿಥಿ ಉಪನ್ಯಾಸಕರ ಬೇಡಿಕೆಗಳ ಈಡೇರಿಕೆಗಾಗಿ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿನ ನಿರುದ್ಯೋಗ ಸಮಸ್ಯೆಯನ್ನು ನಿವಾರಿಸಲು ಆಗ್ರಹಿಸುತ್ತಿದ್ದೇವೆ. ಸರ್ಕಾರಿ ಶಾಲಾ ಕಾಲೇಜುಗಳನ್ನು ಆಧುನಿಕರಿಸಬೇಕು. ರಾಜ್ಯ ಬಜೆಟ್‌ನಲ್ಲಿ ಶೇಕಡಾ 30, ಕೇಂದ್ರ ಬಜೆಟ್‌ನಲ್ಲಿ ಶೇಕಡಾ 10 ರಷ್ಟು ಹಣವನ್ನು ಶಿಕ್ಷಣಕ್ಕೆ ಮೀಸಲಿಡಬೇಕು. ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ನಿಯಂತ್ರಿಸಲು ಕೇಂದ್ರೀಯ ಶಾಸನ ಜಾರಿಗೆ ತನ್ನಿ. ಎಲ್ಲಾ ಹಾಸ್ಟೆಲ್‌ಗಳನ್ನು ಆಧುನೀಕರಿಸಿ, ಊಟದ ಭತ್ಯೆ ಹೆಚ್ಚಿಸಿ ಮುಂತಾದ ಬೇಡಿಕೆಗಳನ್ನಿಟ್ಟು ಬಂದ್‌ ಆಚರಿಸುತ್ತಿರುವುದಾಗಿ ಹೇಳಿದರು.
ಡಿ.ವೈ.ಎಫ್‌.ಐ ತಾಲ್ಲೂಕು ಅಧ್ಯಕ್ಷ ಸದಾನಂದ, ನರಸಿಂಹಪ್ಪ, ಮಂಜುನಾಥ, ಅತಿಥಿ ಉಪನ್ಯಾಸಕರ ಸಂಘದ ರಾಮಚಂದ್ರಪ್ಪ, ಶ್ರೀನಿವಾಸ, ಗೀತಾ, ಸುಬೋದ್‌ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.