Home News ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಜ್ಞಾನವಿಕಾಸ ವಾರ್ಷಿಕೋತ್ಸವ ಕಾರ್ಯಕ್ರಮ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಜ್ಞಾನವಿಕಾಸ ವಾರ್ಷಿಕೋತ್ಸವ ಕಾರ್ಯಕ್ರಮ

0

ನಗರದ ಕಾಳಿಕಾಂಭ ಸಮುದಾಯಭವನದಲ್ಲಿ ಭಾನುವಾರ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ನಡೆದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಜ್ಞಾನವಿಕಾಸ ಕಾರ್ಯಕ್ರಮದ ಪ್ರಾದೇಶಿಕ ನಿರ್ದೇಶಕ ಆನಂದ್‌ ಸುವರ್ಣ ಮಾತನಾಡಿದರು.
ಆರೋಗ್ಯ, ಶಿಕ್ಷಣ, ಪೌಷ್ಠಿಕ ಆಹಾರ, ಸ್ವಚ್ಛತೆ, ಕಾನೂನು ಮಾಹಿತಿ, ಅಧ್ಯಯನ ಪ್ರವಾಸ, ಇಲಾಖೆಗಳ ಭೇಟಿ ಮಾಡಿಸುವ ಮೂಲಕ ಮಹಿಳೆಯರಿಗೆ ಜ್ಞಾನ ಹೆಚ್ಚಿಸುವ ಉದ್ದೇಶವನ್ನು ಹೊಂದಿದ್ದೇವೆ, ಜ್ಞಾನವಿಕಾಸ ಸಾವಿರಾರು ಮಹಿಳೆಯರ ಬದುಕನ್ನೇ ಬದಲಿಸಿದೆ. ಸಂಸಾರವಷ್ಟೇ ಸಾಕು ಎಂದು ತಮ್ಮಷ್ಟಕ್ಕೆ ತಾವಿದ್ದ ಹಲವು ಮಹಿಳೆಯರಿಕೆ ಆತ್ಮವಿಶ್ವಾಸ ತುಂಬಿದ ಈ ಕಾರ್ಯಕ್ರಮ ಎಲ್ಲೆಡೆ ಯಶಸ್ವಿಯಾಗಿದೆ ಎಂದು ಹೇಳಿದರು.
ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಎ.ಎಂ.ತ್ಯಾಗರಾಜ್‌ ಮಾತನಾಡಿ, ಮಹಿಳೆಯರು ಸ್ವಾವಲಂಬಿಗಳಾದಾಗ ಮಾತ್ರ ಕುಟುಂಬದ ಪ್ರಗತಿ ಸಾಧ್ಯವಾಗುತ್ತದೆ. ಸಾಲಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳಿ. ಕೌಶಲ್ಯ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸದೃಢರಾದಾಗ ಆತ್ಮವಿಶ್ವಾಸ ಹೆಚ್ಚುತ್ತದೆ ಎಂದು ನುಡಿದರು.
ವಕೀಲೆ ಯಾಸ್ಮೀನ್‌ ತಾಜ್‌ ಮಾತನಾಡಿ, ಮಹಿಳೆಯರ ರಕ್ಷಣೆ, ಕೌಟುಂಬಿಕ ದೌರ್ಜನ್ಯ, ವರದಕ್ಷಿಣೆ ಇತ್ಯಾದಿ ಸೇರಿದಂತೆ ಅನೇಕ ಕಾನೂನುಗಳು ರಚನೆಯಾಗಿವೆ. ಮಹಿಳೆಯರಿಗೆ ಯಾವುದೇ ಸಂದರ್ಭದಲ್ಲಿ ಉಚಿತ ಕಾನೂನು ನೆರವು ದೊರೆಯುವುದರೊಂದಿಗೆ ವಿಶೇಷ ರಿಯಾಯಿತಿಗಳೂ ಇದೆ ಎಂದರು.
ಈ ಸಂದರ್ಭದಲ್ಲಿ ಸೋಲಾರ್‌ ದೀಪ ಅಳವಡಿಸಿಕೊಂಡವರಿಗೆ ಚೆಕ್‌, ಉತ್ತಮ ಸಂಘಗಳಿಗೆ ಬಹುಮಾನ ಹಾಗೂ ವೃದ್ಧಾಪ್ಯವೇತನ ವಿತರಿಸಲಾಯಿತು. ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಎ.ಎಂ.ತ್ಯಾಗರಾಜ್‌ ಅವರನ್ನು ಗೌರವಿಸಲಾಯಿತು.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ವಸಂತ್‌, ಉಪನಿರ್ದೇಶಕಿ ಭಾರತಿ, ತಾಲ್ಲೂಕು ಯೋಜನಾಧಿಕಾರಿ ಮೋಹನ್‌, ಮಹಮ್ಮದ್‌, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಲಕ್ಷ್ಮೀ, ಕೃಷಿ ಅಧಿಕಾರಿ ಪ್ರಶಾಂತ್‌, ಮೇಲ್ವಿಚಾರಕರಾದ ಜ್ಯೋತಿ, ಜನಾರ್ಧನ್‌ ಹಾಜರಿದ್ದರು.

error: Content is protected !!