Home News ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ವಾಷೀಕೋತ್ಸವದ ಕಾರ್ಯಕ್ರಮ

ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ವಾಷೀಕೋತ್ಸವದ ಕಾರ್ಯಕ್ರಮ

0

ತಾಲ್ಲೂಕಿನ ಸುಂಡ್ರಹಳ್ಳಿ ಗ್ರಾಮದ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ವಾಷೀಕೋತ್ಸವದ ಕಾರ್ಯಕ್ರಮದಲ್ಲಿ ಕಸಾಪ ತಾಲ್ಲೂಕು ಅಧ್ಯಕ್ಷ ಎ.ಎಂ.ತ್ಯಾಗರಾಜ್ ಮಾತನಾಡಿದರು.
ಮಕ್ಕಳಿಗೆ ಆಸ್ತಿ ಮಾಡಿಡುವುದರ ಬದಲಾಗಿ ಅವರನ್ನು ವಿದ್ಯಾವಂತರಾಗಿ, ಸತ್ಪ್ರಜೆಗಳನ್ನಾಗಿ ಮಾಡುವುದು ಬಹು ಮುಖ್ಯ ಎಂದು ಅವರು ತಿಳಿಸಿದರು.
ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ ಯಾವ ಖಾಸಗಿ ಶಾಲೆಗೂ ಕಡಿಮೆಯಿಲ್ಲದ ಹಾಗೆ ಸೌಕರ್ಯ ಹಾಗೂ ವಿದ್ಯಾಭ್ಯಾಸ ನೀಡುತ್ತಿದೆ. ಅತ್ಯುತ್ತಮ ಶಿಕ್ಷಕ ವೃಂದ ಕಾರ್ಯನಿರ್ವಹಿಸುತ್ತಿದ್ದು, ಇಲ್ಲಿ ವ್ಯಾಸಂಗ ಮಾಡುವ ಮಕ್ಕಳ ಭವಿಷ್ಯ ಉಜ್ವಲವಾಗಿದೆ. ಆಗಾಗ್ಗೆ ಪೋಷಕರು ಶಾಲೆಗೆ ಭೇಟಿ ನೀಡಿ ಮಕ್ಕಳ ಶಿಕ್ಷಕರು ಹಾಗೂ ಶಾಲೆಯ ಮುಖ್ಯ ಶಿಕ್ಷಕರೊಂದಿಗೆ ಮಾತುಕತೆ ನಡೆಸುವ ಮೂಲಕ ಮಕ್ಕಳು ಯಾವ ವಿಷಯದಲ್ಲಿ ಹಿಂದುಳಿದಿದ್ದಾರೆ ಅವರನ್ನು ಯಾವ ರೀತಿ ತಿದ್ದಬೇಕು ಎಂಬುದರ ಬಗ್ಗೆ ಚರ್ಚಿಸಬೇಕು ಎಂದರು.
ಇತ್ತೀಚೆಗೆ ಮಕ್ಕಳು ಮೊಬೈಲ್ ಹಾಗು ಟಿವಿ ವೀಕ್ಷಣೆಯಲ್ಲಿ ಹೆಚ್ಚಿನ ಸಮಯ ಕಳೆಯುತ್ತಿರುವುದರಿಂದ ಅವರ ಪ್ರತಿಭೆಗೆ ಮಂಕು ಕವಿಯುತ್ತಿದೆ. ಇತರರ ಕ್ರಿಯಾಶೀಲತೆಯನ್ನು ನೋಡಿ ಕಾಲ ಕಳೆಯುವುದರ ಬದಲು ತಮ್ಮ ಕ್ರಿಯಾಶೀಲತೆಯನ್ನು ಬೆಳೆಸಿಕೊಳ್ಳುವಲ್ಲಿ ಮಕ್ಕಳು ಮುಂದಾಗಬೇಕು. ಪೋಷಕರು ಮಕ್ಕಳ ಕೈಗೆ ಮೊಬೈಲ್ ಕೊಡುವುದು ಮತ್ತು ಟ.ವಿ ವೀಕ್ಷಣೆ ಮಾಡದಂತೆ ಎಚ್ಚರವಹಿಸಬೇಕೆಂದರು.
ಸಹಾಯಕ ಪ್ರಾಧ್ಯಾಪಕ ಶಂಕರ್ ಮಾತನಾಡಿ, ತಾಲ್ಲೂಕಿನ ಸುಂಡ್ರಹಳ್ಳಿ ಗ್ರಾಮದಲ್ಲಿ ಸುಮಾರು 10 ಎಕರೆ ವಿಸ್ತೀರ್ಣದಲ್ಲಿ ನಿರ್ಮಿಸಿರುವ ವಸತಿ ಶಾಲೆಯಲ್ಲಿ 300 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ವಸತಿ ಶಾಲೆಯಲ್ಲಿ ಊಟ, ವಸತಿ, ಬೋಧನೆ ಜೊತೆಗೆ ಸರ್ಕಾರದಿಂದ ಮಕ್ಕಳಿಗೆ ಸಿಗಬೇಕಾದ ಯೋಜನೆಗಳು, ಪೌಷ್ಠಿಕ ಆಹಾರ ಹಾಗೂ ಮೂಲಭೂತ ಸೌಕರ್ಯಗಳು ಮಕ್ಕಳಿಗೆ ಸಿಗುತ್ತಿದೆ. ಮಕ್ಕಳು ಅದನ್ನು ಉಪಯೋಗಿಸಿಕೊಂಡು ಉತ್ತಮ ವಿದ್ಯಾಭ್ಯಾಸ ಮಾಡಬೇಕು. 2020-21ನೇ ಸಾಲಿನಲ್ಲಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗೆ ಸೇರಬಯಸುವ ವಿದ್ಯಾರ್ಥಿಗಳು ಅನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕೆಂದು ತಿಳಿಸಿದರು.
2019-20ನೇ ಸಾಲಿನಲ್ಲಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ಕ್ರೀಡಾಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ನಡೆಯಿತು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ಹೊಸಪೇಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀನಿವಾಸ್, ಸದಸ್ಯರಾದ ನಾರಾಯಣಸ್ವಾಮಿ, ಮುನಿಆಂಜಿನಪ್ಪ, ಮಂಜುನಾಥಗೌಡ, ರೆಡ್ಡಿ, ಎನ್.ಇ.ಜಗದೀಶ್‌ಬಾಬು, ಮುಖ್ಯಶಿಕ್ಷಕ ಆರ್.ಮೂರ್ತಿಪ್ಪ, ಶಿಕ್ಷಕರಾದ ವಿಜಯಶ್ರೀ, ವೆಂಕಟಸ್ವಾಮಿ, ಆನಂದ್, ನರಸಿಂಹಮೂರ್ತಿ, ಗಂಗಾಧರ್, ಬಲರಾಮ್, ರಾಮು, ಸರಳ, ಪ್ರೀಯಾಂಕ ಹಾಜರಿದ್ದರು.

error: Content is protected !!