Home News ಶ್ರೀ ಕಲ್ಲೇಶ್ವರ ಮತ್ತು ಶ್ರೀ ಸಿದ್ಧರಾಮೇಶ್ವರ ವಾರ್ಷಿಕೋತ್ಸವ

ಶ್ರೀ ಕಲ್ಲೇಶ್ವರ ಮತ್ತು ಶ್ರೀ ಸಿದ್ಧರಾಮೇಶ್ವರ ವಾರ್ಷಿಕೋತ್ಸವ

0

ತಾಲ್ಲೂಕಿನ ಜಂಗಮಕೋಟೆ ಹೋಬಳಿಯ ಸುಗಟೂರು ಗ್ರಾಮದಲ್ಲಿ ಶ್ರೀ ಕಲ್ಲೇಶ್ವರ ಮತ್ತು ಶ್ರೀ ಸಿದ್ಧರಾಮೇಶ್ವರ ಸ್ವಾಮಿ ದೇವರುಗಳ ನಿತ್ಯ ಪೂಜಾ ಆರನೇ ವರ್ಷದ ವಾರ್ಷಿಕೋತ್ಸವವನ್ನು ಸೋಮವಾರ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ಗುರುಗಳಾದ ಎಸ್.ಎನ್.ನಂಜುಡಾರಾಧ್ಯರು ಆಶೀರ್ವಚನವನ್ನು ನೀಡಿ, ‘ಕಾರ್ತಿಕ ಮಾಸ ಶ್ರೇಷ್ಠ ಮಾಸವಾಗಿದೆ. ಕಾರ್ತಿಕ ಮಾಸದ ಸೋಮವಾರಗಳನ್ನು ಅತ್ಯಂತ ಪವಿತ್ರ, ಮಂಗಳಕರ ದಿನವೆಂಬ ನಂಬಿಕೆ ಇದ್ದು ಶಿವನನ್ನು ಶ್ರದ್ಧಾಭಕ್ತಿಗಳಿಂದ ಪೂಜಿಸಲಾಗುತ್ತದೆ.

ಶಿಡ್ಲಘಟ್ಟ ತಾಲ್ಲೂಕಿನ ಸುಗಟೂರು ಗ್ರಾಮದಲ್ಲಿ ಶ್ರೀ ಕಲ್ಲೇಶ್ವರ ಮತ್ತು ಶ್ರೀ ಸಿದ್ಧರಾಮೇಶ್ವರ ಸ್ವಾಮಿ ದೇವರುಗಳ ನಿತ್ಯ ಪೂಜಾ ಆರನೇ ವರ್ಷದ ವಾರ್ಷಿಕೋತ್ಸವದಲ್ಲಿ ದೇವರನ್ನು ವಿಶೇಷವಾಗಿ ಅಲಂಕರಿಸಿದ್ದರು

ಕಾರ್ತಿಕ ಮಾಸ ವ್ರತಾಚರಣೆಯಿಂದ ಹಿಂದಿನ ಕರ್ಮಗಳನ್ನು ಕಳೆದುಕೊಳ್ಳಲು ಸಾಧ್ಯವಿದೆ. ಕಡೆಯ ಕಾರ್ತಿಕ ಸೋಮವಾರ ಪೂಜಾ ಮಹೋತ್ಸವವನ್ನು ಹಮ್ಮಿಕೊಂಡಿರುವುದು ಅರ್ಥಪೂರ್ಣವಾಗಿದೆ’ ಎಂದು ಹೇಳಿದರು.
ದೇವಾಲಯದ ಟ್ರಸ್ಟ್ ವತಿಯಿಂದ ಅನ್ನಸಂತರ್ಪಣೆಯನ್ನು ನಡೆಸಲಾಯಿತು. ದೇವಾಲಯವನ್ನು ಮತ್ತು ದೇವರನ್ನು ವಿವಿಧ ಹೂಗಳಿಂದ ಅಲಂಕರಿಸಲಾಗಿತ್ತು. ಅಲಂಕರಿಸಿದ್ದ ಎತ್ತುಗಳನ್ನು ಭಕ್ತರು ಕರೆತಂದಿದ್ದುದು ಆಕರ್ಷಕವಾಗಿತ್ತು. ಸುತ್ತ ಮುತ್ತಲಿನ ಗ್ರಾಮ ಹಾಗೂ ತಾಲ್ಲೂಕುಗಳಿಂದ ಭಕ್ತರು ಆಗಮಿಸಿ ಪೂಜಾ ಕಾರ್ಯದಲ್ಲಿ ಪಾಲ್ಗೊಂಡರು.

error: Content is protected !!